ಕುಸಿತ (ಸಾಂಕೇತಿಕ ಚಿತ್ರ) ANI
ದೇಶ

ಬದ್ರಿನಾಥ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಮೇಲ್ಸೇತುವೆ ಕುಸಿತ

ರುದ್ರಪ್ರಯಾಗ ಸಮೀಪದ ನಾರ್ಕೋಟಾ ಪ್ರದೇಶದಲ್ಲಿ ಸಂಭವಿಸಿದ ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಜೀವಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬದ್ರಿನಾಥ್: ಬದ್ರಿನಾಥ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಮೇಲ್ಸೇತುವೆಯ ಭಾಗವೊಂದು ಕುಸಿತವಾಗಿದೆ.

ರುದ್ರಪ್ರಯಾಗ ಸಮೀಪದ ನಾರ್ಕೋಟಾ ಪ್ರದೇಶದಲ್ಲಿ ಸಂಭವಿಸಿದ ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಜೀವಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಕ್ಕದಲ್ಲಿ ಕೆಲಸ ಮಾಡುತ್ತಿದ್ದ ಕೆಲವು ಕಾರ್ಮಿಕರು ಚೌಕಟ್ಟು ಕುಸಿಯುತ್ತಿರುವುದನ್ನು ಅರಿತು ಓಡಿ ಹೋಗಿದ್ದರಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಿರ್ಮಾಣ ಹಂತದಲ್ಲಿರುವ ಸೇತುವೆಯ ಚೌಕಟ್ಟಿನ ಒಂದು ಭಾಗ ಕುಸಿದಿದೆ ಎಂದು ರಾಷ್ಟ್ರೀಯ ಹೆದ್ದಾರಿ ಕಾರ್ಯಪಾಲಕ ಎಂಜಿನಿಯರ್ ತನುಜ್ ಕಾಂಬೋಜ್ ಹೇಳಿದ್ದಾರೆ.

ಚಾರ್‌ಧಾಮ್ ರಸ್ತೆ ಯೋಜನೆಯಡಿ ಸುಮಾರು 67 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಸೇತುವೆಯು ಕಳೆದ ಮೂರು ವರ್ಷಗಳಿಂದ ನಿರ್ಮಾಣ ಹಂತದಲ್ಲಿದೆ.

ಅದೃಷ್ಟವಶಾತ್, ಸೇತುವೆಯ ಚೌಕಟ್ಟು ಕುಸಿದಾಗ, ಅಲ್ಲಿ ಕಾರ್ಮಿಕರು ಇರಲಿಲ್ಲ, ಇದರಿಂದಾಗಿ ಘಟನೆಯಲ್ಲಿ ಪ್ರಾಣಹಾನಿ ತಪ್ಪಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ವಿಪತ್ತು ನಿರ್ವಹಣಾ ತಂಡವು ಸ್ಥಳಕ್ಕೆ ಆಗಮಿಸಿ ಆರ್‌ಸಿಸಿ ಕಂಪನಿಯ ಪ್ರಾಜೆಕ್ಟ್ ಮ್ಯಾನೇಜರ್ ರೂಪೇಶ್ ಮಿಶ್ರಾ ಅವರಿಂದ ಮಾಹಿತಿ ಪಡೆದಿದೆ. ವಿಪತ್ತು ನಿರ್ವಹಣಾ ತಂಡವು ಘಟನಾ ಸ್ಥಳದಲ್ಲಿ ಶೋಧ ಕಾರ್ಯಾಚರಣೆಯನ್ನು ನಡೆಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಖ್ಯಮಂತ್ರಿ ಬದಲಾವಣೆ: ದೆಹಲಿಯಲ್ಲಿ ಕಾಂಗ್ರೆಸ್‌ ಮ್ಯಾರಥಾನ್‌ ಮೀಟಿಂಗ್ ಬಳಿಕ ಕೆ.ಸಿ ವೇಣುಗೋಪಾಲ್ ಹೇಳಿದ್ದೇನು? Video

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

ಬಕ್ರೀದ್ ಮೇಕೆ ವಿಷಯವಾಗಿ ಮುಂಬೈ ಸೊಸೈಟಿಯಲ್ಲಿ ಭಾರಿ ವಿವಾದ; VHP ಕಾರ್ಯಕರ್ತರ ಮೇಲೆ ಬ್ಲೇಡ್ ನಿಂದ ಹಲ್ಲೆ!

IPL 2026 Qualifier 1: ರಜತ್ ಪಟಿದಾರ್ ಸ್ಫೋಟಕ ಬ್ಯಾಟಿಂಗ್, GTಗೆ ಗೆಲ್ಲಲು 255 ರನ್ ಬೃಹತ್ ಗುರಿ ನೀಡಿದ RCB

SCROLL FOR NEXT