ಮನೋರಮಾ ಖೇಡ್ಕರ್  
ದೇಶ

ರಾಯಗಢ: ಪ್ರೊಬೆಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ತಾಯಿ ಮನೋರಮಾ ಬಂಧನ

ಪುಣೆಯ ಮುಲ್ಶಿ ತಾಲೂಕಿನಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಮನೋರಮಾ ಅವರು ಭದ್ರತಾ ಸಿಬ್ಬಂದಿಯೊಂದಿಗೆ ಬಂದೂಕಿನಿಂದ ರೈತನಿಗೆ ಬೆದರಿಕೆ ಹಾಕಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿದೆ.

ರಾಯಗಢ: ವಿವಾದಿತ ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅವರ ತಾಯಿ ಮನೋರಮಾ ಖೇಡ್ಕರ್ ಅವರನ್ನು ಪುಣೆ ಗ್ರಾಮಾಂತರ ಪೊಲೀಸರು ಗುರುವಾರ ರಾಯಗಡ ಜಿಲ್ಲೆಯ ಮಹಾಡ್‌ನಲ್ಲಿ ಬಂಧಿಸಿದ್ದಾರೆ.

ಪುಣೆಯ ಮುಲ್ಶಿ ತಾಲೂಕಿನಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಮನೋರಮಾ ಅವರು ಭದ್ರತಾ ಸಿಬ್ಬಂದಿಯೊಂದಿಗೆ ಬಂದೂಕಿನಿಂದ ರೈತನಿಗೆ ಬೆದರಿಕೆ ಹಾಕಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿದೆ.

ರೈತ ಪಂಢರಿನಾಥ್ ಪಾಸಲ್ಕರ್ (65ವ) ನೀಡಿದ ದೂರಿನ ಆಧಾರದ ಮೇಲೆ ಪುಣೆ ಗ್ರಾಮಾಂತರದ ಪೌಡ್ ಪೊಲೀಸ್ ಠಾಣೆಯಲ್ಲಿ ಪೂಜಾ ಅವರ ತಾಯಿ ಮನೋರಮಾ, ತಂದೆ ದಿಲೀಪ್ ಖೇಡ್ಕರ್, ಹವೇಲಿಯ ಅಂಬಿ ಗ್ರಾಮದ ಅಂಬಾದಾಸ್ ಖೇಡ್ಕರ್ ಮತ್ತು ಇತರ ಅಪರಿಚಿತರ ವಿರುದ್ಧ ಎಫ್ ಐಆರ್ ದಾಖಲಾಗಿತ್ತು.

ಎಫ್‌ಐಆರ್ ದಾಖಲಾದಾಗಿನಿಂದ ಪುಣೆ ಗ್ರಾಮಾಂತರ ಪೊಲೀಸರು ಮನೋರಮಾ ಅವರ ಹುಡುಕಾಟ ನಡೆಸುತ್ತಿದ್ದರು. ಮನೋರಮಾ ಖೇಡ್ಕರ್ ಅವರನ್ನು ರಾಯಗಢ ಜಿಲ್ಲೆಯ ಮಹಾದ್‌ನಿಂದ ಬಂಧಿಸಿ ಪುಣೆಗೆ ಕರೆತರಲಾಗಿದ್ದು, ಪ್ರಾಥಮಿಕ ವಿಚಾರಣೆ ಬಳಿಕ ಬಂಧಿಸಲಾಗುವುದು ಎಂದು ಪುಣೆ ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿ ಪಂಕಜ್ ದೇಶಮುಖ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!