ಹಳಿ ತಪ್ಪಿದ ರೈಲು 
ದೇಶ

ಉತ್ತರ ಪ್ರದೇಶ: ಚಂಡೀಗಢ-ದಿಬ್ರುಗಢ ಎಕ್ಸ್‌ಪ್ರೆಸ್‌ ರೈಲಿನ ಎಂಟು ಬೋಗಿಗಳು ಹಳಿತಪ್ಪಿ ದುರಂತ; ಇಬ್ಬರು ಸಾವು, 34 ಮಂದಿ ಗಾಯ

ಲಖನೌದಿಂದ ಸುಮಾರು 150 ಕಿಮೀ ದೂರದಲ್ಲಿರುವ ಮೋತಿಗಂಜ್ ಮತ್ತು ಜಿಲಾಹಿ ರೈಲು ನಿಲ್ದಾಣಗಳ ನಡುವೆ ಈ ಅಪಘಾತ ಸಂಭವಿಸಿದೆ.

ಲಖನೌ: ಉತ್ತರ ಪ್ರದೇಶದ ಗೊಂಡಾ ಬಳಿ ಚಂಡೀಗಢ-ದಿಬ್ರುಗಢ ಎಕ್ಸ್‌ಪ್ರೆಸ್‌ ರೈಲಿನ ಎಂಟು ಬೋಗಿಗಳು(15904) ಗುರುವಾರ ಹಳಿತಪ್ಪಿದ್ದು, ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಮತ್ತು 34 ಮಂದಿ ಗಾಯಗೊಂಡಿದ್ದಾರೆ.

ಲಖನೌದಿಂದ ಸುಮಾರು 150 ಕಿಮೀ ದೂರದಲ್ಲಿರುವ ಮೋತಿಗಂಜ್ ಮತ್ತು ಜಿಲಾಹಿ ರೈಲು ನಿಲ್ದಾಣಗಳ ನಡುವೆ ಈ ಅಪಘಾತ ಸಂಭವಿಸಿದೆ.

ರೈಲ್ವೆ ಅಧಿಕಾರಿಗಳ ಪ್ರಕಾರ, ಐದು ಎಸಿ, ಒಂದು ಪ್ಯಾಂಟ್ರಿ ಮತ್ತು ಒಂದು ಜನರಲ್ ಬೋಗಿ ಸೇರಿದಂತೆ ಎಂಟು ಬೋಗಿಗಳು ಹಳಿಯಿಂದ ಹೊರಬಂದಿದ್ದು, ಉಳಿದ ಬೋಗಿಗಳು ಹಳಿಗಳ ಮೇಲೆ ಉಳಿದಿವೆ.

ಎಕ್ಸ್‌ಪ್ರೆಸ್ ರೈಲು ಹಳಿ ತಪ್ಪುವ ಮೊದಲು ಸ್ಫೋಟದ ಶಬ್ದ ಕೇಳಿ ಬಂದಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆದರೆ ಹೆಚ್ಚಿನ ವಿವರಗಳನ್ನು ನೀಡಲು ಅವರು ನಿರಾಕರಿಸಿದ್ದಾರೆ.

ಇಬ್ಬರು ಗಾಯಾಳುಗಳಲ್ಲಿ ಒಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಗಂಭೀರವಾಗಿ ಗಾಯಗೊಂಡಿದ್ದ ಮತ್ತೊಬ್ಬರು ಗೊಂಡಾ ಜಿಲ್ಲಾಸ್ಪತ್ರೆಯಿಂದ ಲಖನೌಗೆ ಕರೆತರುವಾಗ ಮೃತಪಟ್ಟಿದ್ದಾರೆ.

ಮೃತರನ್ನು ಅರಾರಿಯಾ(ಬಿಹಾರ) ಮೂಲದ ಸರೋಜ್ ಕುಮಾರ್ ಸಿಂಗ್(30) ಮತ್ತು ಚಂಡೀಗಢದ ರಾಹುಲ್(38) ಎಂದು ಗುರುತಿಸಲಾಗಿದೆ.

ಆರಂಭದಲ್ಲಿ, ಅಪಘಾತದ ಸ್ಥಳಕ್ಕೆ ಧಾವಿಸಿದ ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಅವರು, ರೈಲು ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದರು. ಆದರೆ ನಂತರ ಅವರಲ್ಲಿ ಇಬ್ಬರು ಚೇತರಿಸಿಕೊಂಡಿದ್ದಾರೆ ಎಂದು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?