ಶಶಿ ತರೂರ್ ಮತ್ತು ಸಿದ್ದರಾಮಯ್ಯ 
ದೇಶ

ಕನ್ನಡಿಗರಿಗೆ ಉದ್ಯೋಗ ಮೀಸಲಾತಿ: ಕರ್ನಾಟಕ ಸರ್ಕಾರದ ಕ್ರಮ ಖಂಡಿಸಿದ Shashi Tharoor

ಒಂದೊಮ್ಮೆ ಎಲ್ಲಾ ರಾಜ್ಯಗಳು ಇಂಥ ಕಾನೂನು ಜಾರಿಗೆ ತರಲು ಹೊರಟರೆ ಅದು ಸಂವಿಧಾನ ವಿರೋಧಿಯಾಗಲಿದೆ. ಹೀಗಾಗಿ ಕರ್ನಾಟಕದ ಮುಖ್ಯಮಂತ್ರಿಯದ್ದು ಬುದ್ಧಿವಂತಿಕೆಯ ನಿರ್ಧಾರವಲ್ಲ’

ನವದೆಹಲಿ: ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸುವ ಕರ್ನಾಟಕ ಸರ್ಕಾರದ ಮಸೂದೆಗೆ ಮಾಜಿ ಕೇಂದ್ರ ಸಚಿವ ಹಾಗೂ ಕಾಂಗ್ರೆಸ್ ಸಂಸದ ಶಶಿತರೂರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ರಾಜ್ಯದ ಖಾಸಗಿ ಉದ್ಯಮಗಳ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ಮಸೂದೆಯನ್ನು ಮಂಡಿಸಿ ಜಾರಿ ಮಾಡಲು ಹೊರಟಿದ್ದ ರಾಜ್ಯ ಸರ್ಕಾರದ ಕ್ರಮವು ಸಂವಿಧಾನ ವಿರೋಧ ಹಾಗೂ ವಿವೇಚನಾರಹಿತ ಕ್ರಮ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದು, ಮಾತ್ರವಲ್ಲದೇ ಘೋಷಿಸಿದ ಕ್ರಮದಿಂದ ಹಿಂದೆ ಸರಿದ ಸಿದ್ದರಾಮಯ್ಯ ಸರ್ಕಾರದ ಕ್ರಮ ಕುರಿತೂ ತರೂರ್ ಸಂತಸ ವ್ಯಕ್ತಪಡಿಸಿದ್ದಾರೆ.

‘ಸಂವಿಧಾನದ ಪ್ರಕಾರ ದೇಶದ ಪ್ರತಿಯೊಬ್ಬ ಪ್ರಜೆಗೂ ದೇಶದೊಳಗೆ ಸ್ವತಂತ್ರವಾಗಿ ಬದುಕುವ, ವೃತ್ತಿ ಕೈಗೊಳ್ಳುವ ಹಾಗೂ ಸಂಚರಿಸುವ ಮುಕ್ತ ಅವಕಾಶವನ್ನು ನೀಡಲಾಗಿದೆ. ಒಂದೊಮ್ಮೆ ಎಲ್ಲಾ ರಾಜ್ಯಗಳು ಇಂಥ ಕಾನೂನು ಜಾರಿಗೆ ತರಲು ಹೊರಟರೆ ಅದು ಸಂವಿಧಾನ ವಿರೋಧಿಯಾಗಲಿದೆ. ಹೀಗಾಗಿ ಕರ್ನಾಟಕದ ಮುಖ್ಯಮಂತ್ರಿಯದ್ದು ಬುದ್ಧಿವಂತಿಕೆಯ ನಿರ್ಧಾರವಲ್ಲ’ ಎಂದು ಹೇಳಿದ್ದಾರೆ.

ಅಂತೆಯೇ ‘ಇಂಥದ್ದೇ ಪ್ರಯತ್ನಕ್ಕೆ ಕೈಹಾಕಿದ್ದ ಹರಿಯಾಣ ಸರ್ಕಾರದ ಮಸೂದೆಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿತ್ತು. ಆದರೆ ಕರ್ನಾಟಕ ಇಂಥದ್ದೊಂದು ಯತ್ನಕ್ಕೆ ಏಕೆ ಕೈಹಾಕಿತು ಎಂಬುದೇ ಅರ್ಥವಾಗುತ್ತಿಲ್ಲ. ಸರ್ಕಾರದ ಈ ಕ್ರಮದಿಂದ ಅಲ್ಲಿನ ವಹಿವಾಟು, ಉದ್ದಿಮೆಗಳು ನೆರೆಯ ರಾಜ್ಯಗಳಾದ ತಮಿಳುನಾಡು, ಕೇರಳಕ್ಕೆ ಸ್ಥಳಾಂತರಗೊಳ್ಳುವ ಅಪಾಯವೂ ಇದೆ’ ಎಂದು ಶಶಿತರೂರ್ ಎಚ್ಚರಿಕೆ ನೀಡಿದ್ದಾರೆ.

ನಿರ್ಧಾರದಿಂದ ಹಿಂದೆ ಸರಿದ ರಾಜ್ಯ ಸರ್ಕಾರ

ರಾಜ್ಯದ ಖಾಸಗಿ ಉದ್ಯಮಗಳ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಸಚಿವ ಸಂಪುಟ ಅನುಮೋದನೆ ಪಡೆದಿತ್ತು. ಆದರೆ ನ್ಯಾಸ್‌ಕಾಮ್ ಸೇರಿದಂತೆ ಉದ್ಯಮದಿಂದ ವ್ಯಕ್ತವಾದ ತೀವ್ರ ವಿರೋಧ ಹಾಗೂ ರಾಜ್ಯದಿಂದ ವಲಸೆ ಹೋಗುವ ಬೆದರಿಕೆ ನಂತರ ಅದಕ್ಕೆ ತಾತ್ಕಾಲಿಕ ತಡೆ ನೀಡಿತ್ತು. ಆದರೆ ಇದೇ ವಿಚಾರವಾಗಿ ಇದೀಗ ರಾಜ್ಯಾದ್ಯಂತ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

SCROLL FOR NEXT