ಇಂದು ಪಂಚಕುಲದಲ್ಲಿ ಸುನೀತಾ ಕೇಜ್ರಿವಾಲ್ ಅವರು "ಕೇಜ್ರಿವಾಲ್ ಕಿ ಫೈವ್ ಗ್ಯಾರಂಟಿ"ಯನ್ನು ಬಿಡುಗಡೆ ಮಾಡಿದರು.  
ದೇಶ

ಹರಿಯಾಣ ವಿಧಾನಸಭೆ ಚುನಾವಣೆ: "ಕೇಜ್ರಿವಾಲ್ ಕಿ ಫೈವ್ ಗ್ಯಾರಂಟಿ" ಬಿಡುಗಡೆ ಮಾಡಿದ ಎಎಪಿ

ಇಂದು ಪಂಚಕುಲದಲ್ಲಿ ಸುನೀತಾ ಕೇಜ್ರಿವಾಲ್ ಅವರು "ಕೇಜ್ರಿವಾಲ್ ಕಿ ಫೈವ್ ಗ್ಯಾರಂಟಿ"ಯನ್ನು ಬಿಡುಗಡೆ ಮಾಡಿದರು.

ಚಂಡೀಗಢ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್ ಅವರು ಶನಿವಾರ ಹರಿಯಾಣ ವಿಧಾನಸಭೆ ಚುನಾವಣೆಗೆ ಐದು “ಕೇಜ್ರಿವಾಲ್ ಗ್ಯಾರಂಟಿ”ಗಳನ್ನು ಬಿಡುಗಡೆ ಮಾಡಿದರು.

ಇಂದು ಪಂಚಕುಲದಲ್ಲಿ ಸುನೀತಾ ಕೇಜ್ರಿವಾಲ್ ಅವರು "ಕೇಜ್ರಿವಾಲ್ ಕಿ ಫೈವ್ ಗ್ಯಾರಂಟಿ"ಯನ್ನು ಬಿಡುಗಡೆ ಮಾಡಿದರು. ಉಚಿತ ವಿದ್ಯುತ್, ಉಚಿತ ವೈದ್ಯಕೀಯ ಚಿಕಿತ್ಸೆ, ಜನರಿಗೆ ಉಚಿತ ಶಿಕ್ಷಣ, ರಾಜ್ಯದ ಪ್ರತಿಯೊಬ್ಬ ಮಹಿಳೆಗೆ ತಿಂಗಳಿಗೆ 1,000 ಮತ್ತು ಯುವಕರಿಗೆ ಉದ್ಯೋಗದ ಭರವಸೆ ನೀಡಿದರು.

ಈ ವೇಳೆ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಮ್ ಆದ್ಮಿ ಪಕ್ಷದ(ಎಎಪಿ) ಹಿರಿಯ ನಾಯಕರಾದ ಸಂಜಯ್ ಸಿಂಗ್ ಮತ್ತು ಸಂದೀಪ್ ಪಾಠಕ್ ಸಹ ಉಪಸ್ಥಿತರಿದ್ದರು.

ಎಎಪಿ ರಾಷ್ಟ್ರೀಯ ಸಂಚಾಲಕರೂ ಆಗಿರುವ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಅವರು ಪ್ರಸ್ತುತ ಅಬಕಾರಿ ನೀತಿ ಸಂಬಂಧಿತ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಹೀಗಾಗಿ ಅವರ ಪತ್ನಿ ಸುನೀತ್ ಅವರು ಇಂದು ಕೇಜ್ರಿವಾಲ್ ಗ್ಯಾರಂಟಿಗಳನ್ನು ಬಿಡುಗಡೆ ಮಾಡಿ, ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಎಎಪಿಗೆ ಬೆಂಬಲ ನೀಡುವಂತೆ ಜನರನ್ನು ಕೋರಿದರು.

ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದ ಸುನೀತಾ ಅವರು, ದೆಹಲಿ ಮುಖ್ಯಮಂತ್ರಿಯ ಉತ್ತಮ ಕೆಲಸಗಳ ಬಗ್ಗೆ ಅವರಿಗೆ "ಅಸೂಯೆ" ಇದೆ ಎಂದು ಆರೋಪಿಸಿದರು.

ತಮ್ಮ ಪತಿಯನ್ನು "ಹರಿಯಾಣಾ ಕಾ ಲಾಲ್"(ಹರಿಯಾಣದ ಮಗ) ಎಂದು ಕರೆದ ಅವರು, ಬಿಜೆಪಿಗೆ ಒಂದೇ ಒಂದು ಸ್ಥಾನವೂ ಹೋಗಬಾರದು. "ಇದು ಕೇಜ್ರಿವಾಲ್ ಅಲ್ಲ, ಹರಿಯಾಣದ ಗೌರವದ ಪ್ರಶ್ನೆ" ಎಂದು ಹೇಳಿದರು.

ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಉಚಿತ ವಿದ್ಯುತ್ ನೀಡಲಾಗುವುದು ಮತ್ತು ರಾಜ್ಯದಲ್ಲಿ ರಾತ್ರಿಯಿಡೀ ವಿದ್ಯುತ್ ಇರುತ್ತದೆ. "ದೆಹಲಿ ಮತ್ತು ಪಂಜಾಬ್‌ನಂತೆ ನಗರಗಳು ಮತ್ತು ಹಳ್ಳಿಗಳಲ್ಲಿ 'ಮೊಹಲ್ಲಾ ಕ್ಲಿನಿಕ್‌ಗಳನ್ನು ತೆರೆಯುತ್ತೇವೆ. ಸರ್ಕಾರಿ ಆಸ್ಪತ್ರೆಗಳ ಸ್ಥಿತಿ ಸುಧಾರಿಸುತ್ತದೆ ಮತ್ತು ಎಲ್ಲರಿಗೂ ಉಚಿತ ಮತ್ತು ಉತ್ತಮ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತದೆ" ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT