ಚಿರಾಗ್ ಪಾಸ್ವಾನ್ online desk
ದೇಶ

Kanwar Yatra: ಉತ್ತರ ಪ್ರದೇಶ ಸರ್ಕಾರದ ನಿಯಮಗಳಿಗೆ ಬಿಜೆಪಿ ಮಿತ್ರಪಕ್ಷಗಳಿಂದ ತೀವ್ರ ವಿರೋಧ

ಈ ನಡೆಯನ್ನು ವಿರೋಧಿಸಿರುವ ಪಾಸ್ವಾನ್, ತಾವು ಜಾತಿ ಅಥವಾ ಧರ್ಮದ ಹೆಸರಿನಲ್ಲಿ ಯಾವುದೇ ವಿಭಜನೆಯನ್ನು "ಖಂಡಿತವಾಗಿ" ಬೆಂಬಲಿಸುವುದಿಲ್ಲ ಅಥವಾ ಪ್ರೋತ್ಸಾಹಿಸುವುದಿಲ್ಲ ಎಂದು ಹೇಳಿದ್ದಾರೆ.

ಲಖನೌ: ಕನ್ವರ್ ಯಾತ್ರೆಗೆ ಉತ್ತರ ಪ್ರದೇಶ ಸರ್ಕಾರ ವಿಧಿಸಿರುವ ನಿಯಮಗಳಿಗೆ ಬಿಜೆಪಿ ಮಿತ್ರಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ.

ಕೇಂದ್ರ ಸಚಿವ, ಬಿಜೆಪಿ ಮಿತ್ರ ಪಕ್ಷ ಎಲ್ ಜೆಪಿಯ ನಾಯಕ ಚಿರಾಗ್ ಪಾಸ್ವಾನ್ ಉತ್ತರ ಪ್ರದೇಶ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಪರಿಷ್ಕೃತ ನಿಯಮಗಳ ಪ್ರಕಾರ, ಕನ್ವರ್ ಯಾತ್ರೆ ಮಾರ್ಗದಲ್ಲಿ ಅಂಗಡಿಗಳು ಮಾಲೀಕರ ಹೆಸರು ನಮೂದಿಸುವಂತೆ ಉತ್ತರ ಪ್ರದೇಶ ಸರ್ಕಾರ ಸೂಚನೆ ನೀಡಿದೆ.

ಈ ನಡೆಯನ್ನು ವಿರೋಧಿಸಿರುವ ಪಾಸ್ವಾನ್, ತಾವು ಜಾತಿ ಅಥವಾ ಧರ್ಮದ ಹೆಸರಿನಲ್ಲಿ ಯಾವುದೇ ವಿಭಜನೆಯನ್ನು "ಖಂಡಿತವಾಗಿ" ಬೆಂಬಲಿಸುವುದಿಲ್ಲ ಅಥವಾ ಪ್ರೋತ್ಸಾಹಿಸುವುದಿಲ್ಲ ಎಂದು ಹೇಳಿದ್ದಾರೆ.

ಸಮಾಜದಲ್ಲಿ ಶ್ರೀಮಂತರು ಮತ್ತು ಬಡವರು ಎಂಬ ಎರಡು ವರ್ಗದ ಜನರು ಇದ್ದಾರೆ ಮತ್ತು ವಿವಿಧ ಜಾತಿಗಳು ಮತ್ತು ಧರ್ಮಗಳ ವ್ಯಕ್ತಿಗಳು ಎರಡೂ ವರ್ಗಗಳಲ್ಲಿ ಬರುತ್ತಾರೆ ಎಂದು ನಂಬುವುದಾಗಿ ಪಾಸ್ವಾನ್ ಹೇಳಿದ್ದಾರೆ.

"ನಾವು ಈ ಎರಡು ವರ್ಗದ ಜನರ ನಡುವಿನ ಅಂತರವನ್ನು ಕಡಿಮೆ ಮಾಡಬೇಕಾಗಿದೆ. ದಲಿತರು, ಹಿಂದುಳಿದವರು, ಮೇಲ್ಜಾತಿಗಳು ಮತ್ತು ಮುಸ್ಲಿಮರು ಸೇರಿದಂತೆ ಸಮಾಜದ ಎಲ್ಲಾ ವರ್ಗಗಳನ್ನು ಒಳಗೊಂಡಿರುವ ಬಡವರಿಗಾಗಿ ಕೆಲಸ ಮಾಡುವುದು ಪ್ರತಿ ಸರ್ಕಾರದ ಜವಾಬ್ದಾರಿಯಾಗಿದೆ. ಎಲ್ಲರೂ ಇದ್ದಾರೆ. ನಾವು ಅವರಿಗಾಗಿ ಕೆಲಸ ಮಾಡಬೇಕು ಎಂದು ಪಾಸ್ವಾನ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Repo Rate ಶೇ. 5.25 ಯಥಾಸ್ಥಿತಿ ಮುಂದುವರಿಕೆ, GDP ಬೆಳವಣಿಗೆ ಶೇ. 6.7: RBI ವಿತ್ತೀಯ ನೀತಿ ಪ್ರಕಟ

Hormuz ಜಲಸಂಧಿ ಬಿಕ್ಕಟ್ಟು ಶೀಘ್ರದಲ್ಲೇ ಅಂತ್ಯ: ಅಂತಿಮ ಘಟ್ಟದಲ್ಲಿ ಅಮೆರಿಕ–ಇರಾನ್ ಶಾಂತಿ ಒಪ್ಪಂದ, ಇಂದೇ ಅಧಿಕೃತ ಘೋಷಣೆ ಸಾಧ್ಯತೆ..!

ಶಾಕ್ ಕೊಟ್ಟ ಸರ್ಕಾರ: ಡೈರಿಯೇತರ ಪನೀರ್ ಗೆ ಒಂದು ವರ್ಷದ ನಿಷೇಧ, ವ್ಯಾಪಾರಿಗಳು ಬೇಸ್ತು! ಕಾರಣ ಏನು?

Yemen ಕರಾವಳಿಯಲ್ಲಿ ಭಾರತೀಯ ಧ್ವಜದ ವಾಣಿಜ್ಯ ಹಡಗಿನ ಮೇಲೆ ಕ್ಷಿಪಣಿ ದಾಳಿ; ಸಮುದ್ರದಲ್ಲಿ ಮುಳುಗಿದ ಹಡಗು, 13 ಮಂದಿ ಭಾರತೀಯರು ಸೇರಿ ಎಲ್ಲಾ 14 ಸಿಬ್ಬಂದಿ ರಕ್ಷಣೆ..!

Hormuz ಜಲಸಂಧಿ ವಿವಾದ: 'ನಮ್ಮ ಒಪ್ಪಿಗೆ ಇಲ್ಲದೆ ಹಡಗು ಸಂಚಾರಕ್ಕೆ ಅವಕಾಶವೇ ಇಲ್ಲ'; ಯಾರ ಅನುಮತಿ ಬೇಕಿಲ್ಲ ಎಂದ ಅಮೆರಿಕಕ್ಕೆ Iran ತಿರುಗೇಟು..!