ಸಾಂದರ್ಭಿಕ ಚಿತ್ರ 
ದೇಶ

ಕೇರಳ: 14 ವರ್ಷದ ಬಾಲಕನಿಗೆ ನಿಫಾ ಸೋಂಕು ದೃಢ!

ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಕನಿಗೆ ಪುಣೆಯ ಎನ್‌ಐವಿ (ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿ) ನಿಪಾ ಸೋಂಕು ದೃಢಪಡಿಸಿದೆ.

ಮಲಪ್ಪುರಂ: ಮಲಪ್ಪುರಂ ಜಿಲ್ಲೆಯ 14 ವರ್ಷದ ಬಾಲಕನಿಗೆ ನಿಪಾ ಸೋಂಕು ದೃಢಪಟ್ಟಿದೆ ಎಂದು ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಶನಿವಾರ ತಿಳಿಸಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಜಾರ್ಜ್, ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಕನಿಗೆ ಪುಣೆಯ ಎನ್‌ಐವಿ (ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿ) ನಿಪಾ ಸೋಂಕು ದೃಢಪಡಿಸಿದೆ ಎಂದರು.

ಸದ್ಯ ಬಾಲಕನಿಗೆ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆತನನ್ನು ಕೋಝಿಕ್ಕೋಡ್‌ನಲ್ಲಿರುವ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಬಾಲಕನ ಸಂಪರ್ಕಕ್ಕೆ ಬಂದವರನ್ನು ಪತ್ತೆಹಚ್ಚುವ ಕಾರ್ಯ ಪ್ರಾರಂಭವಾಗಿದೆ. ಹೆಚ್ಚಿನ ಅಪಾಯದ ಸಂಪರ್ಕಗಳನ್ನು ಈಗಾಗಲೇ ಪ್ರತ್ಯೇಕಿಸಲಾಗಿದೆ ಮತ್ತು ಅವರ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಜಾರ್ಜ್ ಮಾಧ್ಯಮಗಳಿಗೆ ತಿಳಿಸಿದರು.

ಈ ಹಿಂದೆ ನಾಲ್ಕು ಬಾರಿ ರಾಜ್ಯವನ್ನು ಕಾಡಿದ್ದ ನಿಪಾ ಹಾವಳಿ ತಡೆಗೆ ವಿಶೇಷ ಕ್ರಿಯಾ ಕ್ಯಾಲೆಂಡರ್ ಸಿದ್ಧಪಡಿಸಲಾಗುತ್ತಿದೆ ಎಂದು ಕೇರಳ ಸರ್ಕಾರ ಇತ್ತೀಚೆಗೆ ಪ್ರಕಟಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ನಾಳೆ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ-Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT