ಸಾಂದರ್ಭಿಕ ಚಿತ್ರ 
ದೇಶ

ಉತ್ತರ ಪ್ರದೇಶ: ಮನೆಯಲ್ಲಿ ಎಸ್‌ಪಿ ನಾಯಕನ ಹತ್ಯೆ, ಬಿಜೆಪಿ ಕೌನ್ಸಿಲರ್ ವಿರುದ್ಧ ಪ್ರಕರಣ ದಾಖಲು

ಉದಯಭಾನ್ ಮತ್ತು ಆತನ ಕುಟುಂಬದವರು ಈ ಹಿಂದೆ ಎರಡು ಬಾರಿ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ನೀಲಂ ಸಿಂಗ್ ದೂರಿನಲ್ಲಿ ಆರೋಪಿಸಿದ್ದಾರೆ. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರೂ ರಾಜಕೀಯ ಒತ್ತಡದಿಂದ ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂದು ಅವರು ಹೇಳಿದ್ದಾರೆ.

ಗೊಂಡಾ: ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ಸಮಾಜವಾದಿ ಪಕ್ಷದ ಸ್ಥಳೀಯ ನಾಯಕನನ್ನು ಹತ್ಯೆ ಮಾಡಲಾಗಿದ್ದು, ಬಿಜೆಪಿ ಕೌನ್ಸಿಲರ್ ಮತ್ತು ಅವರ ಮೂವರು ಪುತ್ರರು ಸೇರಿದಂತೆ ಐವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಪರಸಾಪುರ ಪಟ್ಟಣದ ರಾಜಾ ತೋಲಾದಲ್ಲಿನ ಓಂ ಪ್ರಕಾಶ್ ಸಿಂಗ್ ಅವರ ಮನೆಗೆ ನುಗಿದ್ದ ಕೆಲವರು ಹರಿತವಾದ ಆಯುಧಗಳಿಂದ ಹಲ್ಲೆ ನಡೆಸಿ ಹತ್ಯೆಗೈದಿದ್ದರು.

ಮರಣೋತ್ತರ ಪರೀಕ್ಷೆ ನಡೆಸಿ, ಸಿಂಗ್ ಅವರ ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಯಿತು. ಶನಿವಾರ ಬೆಳಗ್ಗೆ ಪ್ರತಿಭಟನೆ ನಡೆಸಿದ ಅವರು, ಅಂತಿಮ ವಿಧಿವಿಧಾನಗಳನ್ನು ಮಾಡಲು ನಿರಾಕರಿಸಿದರು. ಸಿಂಗ್ ಅವರ ಮೃತದೇಹವನ್ನು ರಸ್ತೆ ಮೇಲಿಟ್ಟು ಆರೋಪಿಗಳ ನಂತರವೇ ಅಂತಿಮ ವಿಧಿವಿಧಾನಗಳನ್ನು ನಡೆಸಲಾಗುವುದು ಎಂದು ಪಟ್ಟು ಹಿಡಿದಿದ್ದರು ಎಂದು ಪೊಲೀಸರು ತಿಳಿಸಿದರು.

ಪ್ರತಿಭಟನೆಯ ನಂತರ, ಹಿರಿಯ ಎಸ್‌ಪಿ ನಾಯಕ ಯೋಗೇಶ್ ಪ್ರತಾಪ್ ಸಿಂಗ್, ಮಾಜಿ ಶಾಸಕ ಬೈಜನಾಥ್ ದುಬೆ ಮತ್ತು ಪಕ್ಷದ ಇತರ ಮುಖಂಡರು ತಕ್ಷಣದ ಕ್ರಮಕ್ಕೆ ಒತ್ತಾಯಿಸಿದರು. ಈ ಮಧ್ಯೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಪಶ್ಚಿಮ) ರಾಧೇಶ್ಯಾಮ್ ರೈ ಮತ್ತು ಕರ್ನಲ್‌ಗಂಜ್ ಪೊಲೀಸ್ ಸರ್ಕಲ್ ಆಫೀಸರ್ ಚಂದ್ರಪಾಲ್ ಶರ್ಮಾ ಸ್ಥಳಕ್ಕಾಗಮಿಸಿ ಶೀಘ್ರ ಕ್ರಮ ಕೈಗೊಳ್ಳುವುದಾಗಿ ಪ್ರತಿಭಟನಾಕಾರರಿಗೆ ಭರವಸೆ ನೀಡಿದರು ಎಂದು ಪೊಲೀಸರು ತಿಳಿಸಿದ್ದಾರೆ.

ಸಿಂಗ್ ಅವರ ಪತ್ನಿ ನೀಲಂ ನೀಡಿದ ದೂರಿನ ಆಧಾರದ ಮೇಲೆ, ಪರಸ್‌ಪುರ ನಗರ ಪಂಚಾಯತ್‌ನ ಬಿಜೆಪಿ ಕೌನ್ಸಿಲರ್ ಉದಯಭನ್ ಸಿಂಗ್ ಅಲಿಯಾಸ್ ಲಲ್ಲನ್ ಸಿಂಗ್ ಮತ್ತು ಅವರ ಮೂವರು ಪುತ್ರರು ಸೇರಿದಂತೆ ಐದು ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪರಸ್‌ಪುರ ಪೊಲೀಸ್ ಠಾಣೆ ಪ್ರಭಾರಿ ದಿನೇಶ್ ಸಿಂಗ್ ಹೇಳಿದ್ದಾರೆ. ಪ್ರಕರಣ ದಾಖಲಾಗಿದ್ದು, ಆರೋಪಿಗಳ ಬಂಧನಕ್ಕೆ ತಂಡವನ್ನು ರಚಿಸಲಾಗಿದೆ. ಓಂ ಪ್ರಕಾಶ್ ಸಿಂಗ್ ಎಸ್‌ಪಿ ಚಿಹ್ನೆಯಡಿ ನಗರ ಪಂಚಾಯತ್ ಚುನಾವಣೆಯಲ್ಲಿ ಕೌನ್ಸಿಲರ್ ಸ್ಥಾನಕ್ಕೆ ಸ್ಪರ್ಧಿಸಿ ಬಿಜೆಪಿ ಅಭ್ಯರ್ಥಿ ಉದಯಭಾನ್ ಸಿಂಗ್ ವಿರುದ್ಧ ಸೋತಿದ್ದರು ಎಂದು ಠಾಣಾಧಿಕಾರಿ ತಿಳಿಸಿದ್ದಾರೆ.

ಉದಯಭಾನ್ ಮತ್ತು ಆತನ ಕುಟುಂಬದವರು ಈ ಹಿಂದೆ ಎರಡು ಬಾರಿ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ನೀಲಂ ಸಿಂಗ್ ದೂರಿನಲ್ಲಿ ಆರೋಪಿಸಿದ್ದಾರೆ. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರೂ ರಾಜಕೀಯ ಒತ್ತಡದಿಂದ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಇದು ಆರೋಪಿಗಳಿಗೆ ಧೈರ್ಯ ತುಂಬಿ ಶುಕ್ರವಾರ ಅವರ ಮನೆಗೆ ನುಗ್ಗಿ ಪತಿಯನ್ನು ಕೊಂದು ಹಾಕಿದ್ದಾರೆ ಎಂದು ಅವರು ಹೇಳಿದ್ದಾರೆ. ಈ ಹಿಂದೆ ನೀಡಿದ ದೂರಿನ ಮೇರೆಗೆ ಪೊಲೀಸರು ಕ್ರಮ ಕೈಗೊಂಡಿದ್ದರೆ ಪತಿ ಪ್ರಾಣ ಕಳೆದುಕೊಳ್ಳುತ್ತಿರಲಿಲ್ಲ ಎಂದು ನೀಲಂ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT