ಕೇದಾರನಾಥ ಟ್ರೆಕಿಂಗ್ ಮಾರ್ಗದಲ್ಲಿ ಭೂ ಕುಸಿತ 
ದೇಶ

Kedarnath Yatra ಟ್ರೆಕಿಂಗ್ ಮಾರ್ಗದಲ್ಲಿ ಭೂಕುಸಿತ: 3 ಸಾವು, ಇಬ್ಬರಿಗೆ ಗಾಯ, NDRF ದೌಡು!

ಉತ್ತರ ಭಾರತದಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಪವಿತ್ರಯಾತ್ರಾತಾಣ ಕೇದಾರನಾಥ ಟ್ರೆಕಿಂಗ್ ಮಾರ್ಗದಲ್ಲಿ ಭೂ ಕುಸಿತ ಸಂಭವಿಸಿದ್ದು, ಘಟನೆಯಲ್ಲಿ ಮೂವರು ಸಾವನ್ನಪ್ಪಿ 8 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ರುದ್ರಪ್ರಯಾಗ: ಉತ್ತರ ಭಾರತದಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಪವಿತ್ರಯಾತ್ರಾತಾಣ ಕೇದಾರನಾಥ ಟ್ರೆಕಿಂಗ್ ಮಾರ್ಗದಲ್ಲಿ ಭೂ ಕುಸಿತ ಸಂಭವಿಸಿದ್ದು, ಘಟನೆಯಲ್ಲಿ ಮೂವರು ಸಾವನ್ನಪ್ಪಿ 8 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯ ಕೇದಾರನಾಥ ಧಾಮಕ್ಕೆ ಸಾಗುವ ದಾರಿಯಲ್ಲಿ ಭಾನುವಾರ ಗುಡ್ಡಕುಸಿದಿದೆ. ಈ ದುರ್ಘಟನೆಯಲ್ಲಿ ಮೂವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.

ಮೂಲಗಳ ಪ್ರಕಾರ ಗೌರಿ ಕುಂಡ್‌– ಕೇದಾರನಾಥ ಮಾರ್ಗದ ಚಿರ್ಬಸಾ ಪ್ರದೇಶದ ಬಳಿ ಭಾನುವಾರ ಬೆಳಿಗ್ಗೆ 7.30ರ ಹೊತ್ತಿಗೆ ಭಾರಿ ಕಲ್ಲುಗಳಿಂದ ಕೂಡಿದ ಗುಡ್ಡ ಕುಸಿದಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದ ತಕ್ಷಣ ರಕ್ಷಣಾ ತಂಡ ಸ್ಥಳಕ್ಕೆ ತಲುಪಿದೆ. ಈವರೆಗೆ ಅವಶೇಷಗಳಲ್ಲಿ ಮೂರು ಮೃತದೇಹಗಳು ಪತ್ತೆಯಾಗಿದ್ದು, ಗಾಯಗೊಂಡ ಸ್ಥಿತಿಯಲ್ಲಿ ಒಬ್ಬ ವ್ಯಕ್ತಿಯನ್ನು ಹೊರತೆಗೆಯಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ರುದ್ರಪ್ರಯಾಗ ಜಿಲ್ಲಾ ವಿಪತ್ತು ನಿರ್ವಹಣಾ ಅಧಿಕಾರಿ ನಂದನ್ ಸಿಂಗ್ ರಾಜ್ವರ್ ಹೇಳಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಮುಖ್ಯಮಂತ್ರಿ ಪುಷ್ಕರ್‌ಸಿಂಗ್‌ ಧಾಮಿ, ‘ಕೇದಾರನಾಥ ಯಾತ್ರೆಯ ಮಾರ್ಗದಲ್ಲಿ ಸಂಭವಿಸಿದ ದುರಂತ ವಿಷಾದನೀಯ. ರಕ್ಷಣಾ ತಂಡ ಕಾರ್ಯಾಚರಣೆಯನ್ನು ನಡೆಸುತ್ತಿದೆ. ಮೃತರ ಕುಟುಂಬಕ್ಕೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ’ ಎಂದು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!