ಸಾಂದರ್ಭಿಕ ಚಿತ್ರ 
ದೇಶ

ಭಾರಿ ಮಳೆ ಹಿನ್ನೆಲೆ; ಮುಂಬೈ ವಿಮಾನ ನಿಲ್ದಾಣದಲ್ಲಿ 36 ವಿಮಾನಗಳ ಹಾರಾಟ ರದ್ದು!

ನಗರದಲ್ಲಿ ಆಗಾಗ್ಗೆ ಭಾರೀ ಮಳೆ ಮತ್ತು ಕಡಿಮೆ ಗೋಚರತೆ ಪರಿಣಾಮವಾಗಿ ಭಾನುವಾರದಂದು ಆಗಮಿಸಬೇಕಾಗಿದ್ದ ಮತ್ತು ನಿರ್ಗಮಿಸಬೇಕಾಗಿದ್ದ ತಲಾ 18 ವಿಮಾನಗಳ ಹಾರಾಟವನ್ನು ರದ್ದುಗೊಳಿಸಿದೆ. ಇದರಲ್ಲಿ ಇಂಡಿಗೋದ 24 ವಿಮಾನಗಳು ಮತ್ತು ಏರ್ ಇಂಡಿಯಾದ ಎಂಟು ವಿಮಾನಗಳು ಸೇರಿವೆ.

ಮುಂಬೈ: ಭಾರಿ ಮಳೆ ಹಿನ್ನೆಲೆಯಲ್ಲಿ ಮುಂಬೈ ವಿಮಾನ ನಿಲ್ದಾಣದಲ್ಲಿ ಭಾನುವಾರ 36 ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಯಿತು. ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂಡಿಗೋ ಮತ್ತು ಏರ್ ಇಂಡಿಯಾ, ವಿಸ್ತಾರಾ ಏರ್ ಲೈನ್ಸ್ ಸಂಸ್ಥೆಗಳು ವಿಮಾನಗಳ ಹಾರಾಟವನ್ನು ರದ್ದುಗೊಳಿಸಿರುವುದಾಗಿ ಮೂಲಗಳು ಹೇಳಿವೆ.

ನಗರದಲ್ಲಿ ಆಗಾಗ್ಗೆ ಭಾರೀ ಮಳೆ ಮತ್ತು ಕಡಿಮೆ ಗೋಚರತೆ ಪರಿಣಾಮವಾಗಿ ಭಾನುವಾರದಂದು ಆಗಮಿಸಬೇಕಾಗಿದ್ದ ಮತ್ತು ನಿರ್ಗಮಿಸಬೇಕಾಗಿದ್ದ ತಲಾ 18 ವಿಮಾನಗಳ ಹಾರಾಟವನ್ನು ರದ್ದುಗೊಳಿಸಿದೆ. ಇದರಲ್ಲಿ ಇಂಡಿಗೋದ 24 ವಿಮಾನಗಳು ಮತ್ತು ಏರ್ ಇಂಡಿಯಾದ ಎಂಟು ವಿಮಾನಗಳು ಸೇರಿವೆ. ವಿಸ್ತಾರಾ ಮುಂಬೈ ವಿಮಾನ ನಿಲ್ದಾಣದಲ್ಲಿ ತನ್ನ ನಾಲ್ಕು ವಿಮಾನಗಳ ಹಾರಾಟವನ್ನು ರದ್ದುಗೊಳಿಸಿದೆ ಎಂದು ಮೂಲಗಳು ತಿಳಿಸಿವೆ.

ಪ್ರತಿಕೂಲ ಹವಾಮಾನ ಮತ್ತು ಕಡಿಮೆ ಗೋಚರತೆಯಿಂದಾಗಿ ರನ್‌ವೇ ಕಾರ್ಯಾಚರಣೆಯನ್ನು ಮೊದಲು ಮಧ್ಯಾಹ್ನ 12.12 ಕ್ಕೆ ಎಂಟು ನಿಮಿಷಗಳ ಕಾಲ ಮತ್ತು ನಂತರ ಮಧ್ಯಾಹ್ನ 1 ರಿಂದ 1.15 ರವರೆಗೆ ಸ್ಥಗಿತಗೊಳಿಸಲಾಯಿತು ಎಂದು ಮೂಲಗಳು ತಿಳಿಸಿವೆ.

ಏರ್ ಇಂಡಿಯಾ, ಇಂಡಿಗೋ ಮತ್ತು ಆಕಾಶ ಸೇರಿದಂತೆ ಕನಿಷ್ಠ 15 ವಿಮಾನಗಳನ್ನು ಸಂಜೆ 4 ಗಂಟೆಯವರೆಗೆ ಹತ್ತಿರದ ವಿಮಾನ ನಿಲ್ದಾಣಗಳಿಗೆ ಮುಖ್ಯವಾಗಿ ಅಹಮದಾಬಾದ್‌ಗೆ ತಿರುಗಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಾವಣಗೆರೆಯಲ್ಲಿ ಕಾಂಗ್ರೆಸ್ ಬೆನ್ನಿಗೆ ಚೂರಿ: ಸುರ್ಜೇವಾಲ ಕೈಸೇರಿದ ರಿಪೋರ್ಟ್; MLC ಅಬ್ದುಲ್ ಜಬ್ಬಾರ್ ರಾಜಿನಾಮೆ!

ದಾವಣಗೆರೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ: ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ತಲೆದಂಡ, ಜಮೀರ್ ಸಚಿವ ಸ್ಥಾನಕ್ಕೂ ಕುತ್ತು?

ಮಗ ವಿದೇಶದಲ್ಲಿ ಓದುತ್ತಿದ್ದಾನೆ, ಹಲ್ಲೆ ಕೇಸ್ ಕೈಬಿಡಿ: ಪುತ್ರನ ಭವಿಷ್ಯಕ್ಕಾಗಿ ಪ್ರಕರಣ ರದ್ದು ಕೋರಿದ ಅನಂತಕುಮಾರ್ ಹೆಗಡೆ!

ನಮಸ್ತೆ.. ಏನ್ರೀ ರಾಹುಲ್ ಹೇಗಿದ್ದೀರಾ? ; ಸಂಸತ್ ಭವನದ ಬಳಿ ಪ್ರಧಾನಿ ಮೋದಿ-Rahul Gandhi ಅಪರೂಪದ ಮುಖಾಮುಖಿ! Video

ಮಾತುಕತೆಗೂ ಮುನ್ನವೇ ಟೆಹ್ರಾನ್‌ಗೆ ದೊಡ್ಡ ಗೆಲುವು; ಫ್ರೀಜ್ ಮಾಡಲಾದ ಇರಾನ್ ಸ್ವತ್ತುಗಳ ಬಿಡುಗಡೆಗೆ ಅಮೆರಿಕ ಒಪ್ಪಿಗೆ!

SCROLL FOR NEXT