ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜು.21 ರಂದು ಒಡಿಶಾ ಪ್ರದೇಶ ಕಾಂಗ್ರೆಸ್ ಸಮಿತಿಯನ್ನು ವಿಸರ್ಜನೆ ಮಾಡಿದ್ದಾರೆ.
ರಾಜ್ಯದಲ್ಲಿ ನಡೆದ ಲೋಕಸಭಾ ಚುನಾವಣೆ ಹಾಗೂ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಕಳಪೆ ಸಾಧನೆಯ ಹಿನ್ನೆಲೆಯಲ್ಲಿ ಖರ್ಗೆ ಈ ಕ್ರಮ ಕೈಗೊಂಡಿದ್ದಾರೆ.
ಪ್ರದೇಶ ಕಾಂಗ್ರೆಸ್ ಸಮಿತಿ, ಅದರ ಅಧ್ಯಕ್ಷರು, ಪದಾಧಿಕಾರಿಗಳು ಕಾರ್ಯಕಾರಿ ಸಮಿತಿ, ಜಿಲ್ಲಾ/ಬ್ಲಾಕ್/ಮಂಡಲ ಕಾಂಗ್ರೆಸ್ ಸಮಿತಿಗಳು, ಮುಂಚೂಣಿ ಸಂಸ್ಥೆಗಳು, ಇಲಾಖೆಗಳು ಮತ್ತು ಕೋಶಗಳನ್ನು ವಿಸರ್ಜನೆ ಮಾಡಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಎಐಸಿಸಿ ಅಧ್ಯಕ್ಷರು ಆದೇಶ ಪ್ರಕಟಿಸಿದ್ದಾರೆ ಎಂದು ಪಕ್ಷದ ಪ್ರಕಟಣೆ ತಿಳಿಸಿದೆ.
‘ಹೊಸ ಡಿಸಿಸಿ ಅಧ್ಯಕ್ಷರ ನೇಮಕವಾಗುವವರೆಗೆ ಹಾಲಿ ಡಿಸಿಸಿ ಅಧ್ಯಕ್ಷರು ಹಾಲಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ’ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಶರತ್ ಪಟ್ಟನಾಯಕ್ ಒಡಿಶಾ ಪಿಸಿಸಿಯ ಹಾಲಿ ಅಧ್ಯಕ್ಷರಾಗಿದ್ದಾರೆ.