ಸುಪ್ರೀಂ ಕೋರ್ಟ್ 
ದೇಶ

NEET UG: ವಿವಾದಿತ ಪ್ರಶ್ನೆಯ ಉತ್ತರ ಪರಿಶೀಲಿಸುವಂತೆ ಐಐಟಿ ತಜ್ಞರಿಗೆ ಸುಪ್ರೀಂ ಕೋರ್ಟ್ ಆದೇಶ

ಪರೀಕ್ಷೆಯಲ್ಲಿ ಒಂದೇ ಪ್ರಶ್ನೆಗೆ ಎರಡು ಸರಿಯಾದ ಉತ್ತರಗಳಿವೆ ಎಂದು ಕೆಲವು ಅರ್ಜಿದಾರರು ತಿಳಿಸಿದ ನಂತರ ಸುಪ್ರೀಂ ಕೋರ್ಟ್ ಈ ಆದೇಶ ನೀಡಿದೆ.

ನವದೆಹಲಿ: ನೀಟ್-ಯುಜಿ ಪರೀಕ್ಷೆಯಲ್ಲಿನ ವಿವಾದಿತ ಪ್ರಶ್ನೆಗೆ ಸರಿಯಾದ ಉತ್ತರವನ್ನು ಮೌಲ್ಯಮಾಪನ ಮಾಡಲು ಮತ್ತು ನಿರ್ಧರಿಸಲು ಮಂಗಳವಾರ ಮಧ್ಯಾಹ್ನದೊಳಗೆ ಮೂವರು ವಿಷಯ ತಜ್ಞರ ಸಮಿತಿ ರಚಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ಐಐಟಿ ದೆಹಲಿಯ ನಿರ್ದೇಶಕರಿಗೆ ಸೂಚನೆ ನೀಡಿದೆ.

ಒಂದೇ ಪ್ರಶ್ನೆಗೆ ಎರಡು ಸಂಭವನೀಯ ಉತ್ತರಗಳಿಗೆ ಅಂಕಗಳನ್ನು ನೀಡುವ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(NTA) ನಿರ್ಧಾರದ ವಿರುದ್ಧ ಕೆಲವು ವಿದ್ಯಾರ್ಥಿಗಳ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠ ಈ ನಿರ್ದೇಶನ ನೀಡಿದೆ.

ಪರೀಕ್ಷೆಯಲ್ಲಿ ಒಂದೇ ಪ್ರಶ್ನೆಗೆ ಎರಡು ಸರಿಯಾದ ಉತ್ತರಗಳಿವೆ ಎಂದು ಕೆಲವು ಅರ್ಜಿದಾರರು ತಿಳಿಸಿದ ನಂತರ ಸುಪ್ರೀಂ ಕೋರ್ಟ್ ಈ ಆದೇಶ ನೀಡಿದೆ.

ಹಳೆಯ ಮತ್ತು ಹೊಸ NCERT ಪಠ್ಯಕ್ರಮಗಳ ಪ್ರಕಾರ, NTA,"ಸರಿಯಾದ" ಆಯ್ಕೆಗಳಲ್ಲಿ ಒಂದನ್ನು ಆಯ್ಕೆ ಮಾಡಿದ ವಿದ್ಯಾರ್ಥಿಗಳಿಗೆ ಅಂಕಗಳನ್ನು ನೀಡಿದೆ. ಎನ್‌ಟಿಎ ನಿರ್ಧಾರವು ಅಸಮಂಜಸ ಮತ್ತು ಅನ್ಯಾಯವಾಗಿದೆ ಎಂದು ಅರ್ಜಿದಾರರು ನ್ಯಾಯಾಲಯದಲ್ಲಿ ವಾದಿಸಿದ್ದಾರೆ.

ಪೇಪರ್ ಸೋರಿಕೆ ಮತ್ತು ಇತರ ಅವ್ಯವಹಾರಗಳ ಆರೋಪಗಳನ್ನು ಒಳಗೊಂಡಿರುವ ಪ್ರಕರಣವು ಜುಲೈ 23 ರಂದು ತನ್ನ ವಿಚಾರಣೆ ಪುನರಾರಂಭಿಸಲಿದೆ. ಏಕೆಂದರೆ ನ್ಯಾಯಾಲಯವು ವಿದ್ಯಾರ್ಥಿಗಳು ಎತ್ತಿರುವ ಕಳವಳಗಳನ್ನು ಪರಿಹರಿಸಲು ಮತ್ತು ಪರೀಕ್ಷಾ ಪ್ರಕ್ರಿಯೆಯ ಸಮಗ್ರತೆಯನ್ನು ಖಚಿತಪಡಿಸಿಕೊಳ್ಳಲು ಪ್ರಯತ್ನಿಸುತ್ತಿದೆ.

NEET-UG ಪರೀಕ್ಷೆಯನ್ನು ಯಾವುದೇ ಕಾರ್ಯವಿಧಾನಗಳನ್ನು ಅನುಸರಿಸದೆ ನಡೆಸಲಾಗಿದೆ. ಇದು "ಸಂಪೂರ್ಣ ವ್ಯವಸ್ಥಿತ ವೈಫಲ್ಯ". ಯಾವುದೇ ಸ್ಥಳದಲ್ಲಿ "ಯಾವುದೇ ವಿಳಾಸ ಪರಿಶೀಲನೆ ಮತ್ತು ಸಿಸಿಟಿವಿ ಕ್ಯಾಮೆರಾ ಮೇಲ್ವಿಚಾರಣೆ ಇಲ್ಲ" ಎಂದು NEET-UG ಎಂದು ಅರ್ಜಿದಾರರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್-ಪ್ರಿಯಾಂಕಾ ವಶಕ್ಕೆ ಪಡೆದ ದೆಹಲಿ ಪೊಲೀಸರು: ಇಂಡಿಯಾ ಕೂಟದ 9 ಗಂಟೆಗಳ ಧರಣಿಗೆ ಬ್ರೇಕ್!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚುನಾವಣಾ ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಕಲಬುರಗಿಯಲ್ಲಿ ಶಾಕಿಂಗ್ ಘಟನೆ: ತೊಗರಿ ಹೊಲದಲ್ಲಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ!