ಪೂಜಾ ಖೇಡ್ಕರ್ ಅವರ ತಾಯಿ 
ದೇಶ

ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ತಾಯಿ ಜೈಲು ಪಾಲು, 14 ದಿನ ನ್ಯಾಯಾಂಗ ಬಂಧನ

ಮನೋರಮಾ ಖೇಡ್ಕರ್ ಅವರ ಪೊಲೀಸ್ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಇಂದು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ಪುಣೆ: ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಕೆಲವು ವ್ಯಕ್ತಿಗಳಿಗೆ ಬಂದೂಕು ತೋರಿಸಿ ಬೆದರಿಕೆ ಹಾಕಿದ ಆರೋಪದ ಮೇಲೆ ಬಂಧಿತರಾಗಿರುವ ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅವರ ತಾಯಿ ಮನೋರಮಾ ಖೇಡ್ಕರ್ ಅವರನ್ನು ಮ್ಯಾಜಿಸ್ಟ್ರೇಟ್ ಕೋರ್ಟ್ ಸೋಮವಾರ 14 ದಿನ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.

ಮನೋರಮಾ ಖೇಡ್ಕರ್ ಅವರ ಪೊಲೀಸ್ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಇಂದು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಆರೋಪಿಯ ವಿಚಾರಣೆ ನಡೆಸಿದ ಕೋರ್ಟ್, 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಗ್ರಾಮಸ್ಥರಿಗೆ ಬಂದೂಕು ತೋರಿಸಿ ಬೆದರಿಕೆ ಹಾಕುವ ಮೂಲಕ ಪರವಾನಗಿ ಪಡೆದ ಗನ್ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ಆರೋಪದ ಮೇಲೆ ಪುಣೆ ಪೊಲೀಸರು ಪೂಜಾ ಖೇಡ್ಕರ್ ಅವರ ತಾಯಿ ಮನೋರಮಾ ಖೇಡ್ಕರ್ ಅವರ ವಿರುದ್ಧ ಎಫ್ಐಆರ್ ದಾಖಲಿಸಿದ್ದರು.

ಪುಣೆ ಜಿಲ್ಲೆಯ ಮುಲ್ಶಿ ತಹಸಿಲ್‌ನಲ್ಲಿ ಮಹಾರಾಷ್ಟ್ರದ ನಿವೃತ್ತ ಸರ್ಕಾರಿ ಅಧಿಕಾರಿಯಾಗಿರುವ ಪೂಜಾ ಅವರ ತಂದೆ ದಿಲೀಪ್ ಖೇಡ್ಕರ್ ಅವರು ಖರೀದಿಸಿದ ಜಮೀನಿನ ವಿಚಾರಕ್ಕೆ ಸಂಬಂಧಿಸಿದಂತೆ ವಾಗ್ವಾದ ನಡೆದಿದ್ದು, ಈ ವೇಳೆ ಪೂಜಾ ಖೇಡ್ಕರ್ ಅವರ ತಾಯಿ ಮನೋರಮಾ ಖೇಡ್ಕರ್ ಅವರು ರೈತರಿಗೆ ಬಂದೂಕು ತೋರಿಸಿ ಬೆದರಿಕೆ ಹಾಕಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್