ನಿತೀಶ್ ಕುಮಾರ್-ನರೇಂದ್ರ ಮೋದಿ ANI
ದೇಶ

ಬಜೆಟ್ ನಲ್ಲಿ ಬಿಹಾರಕ್ಕೆ ಬಂಪರ್: ರಾಜ್ಯ 'ಆತ್ಮನಿರ್ಭರ್' ಆಗಲು ಸಹಾಯ ಮಾಡುತ್ತದೆ ಎಂದ ಜೆಡಿಯು

ಬಜೆಟ್ ಬಗ್ಗೆ ಪ್ರತಿಕ್ರಿಯಿಸಿದ ಜೆಡಿಯು ವಕ್ತಾರ ಕೆ ಸಿ ತ್ಯಾಗಿ ಅವರು ಬಿಹಾರಕ್ಕೆ "ವಿಶೇಷ ಹಣಕಾಸು ನೆರವು" ನೀಡಿರುವುದನ್ನು ಶ್ಲಾಘಿಸಿದರು.

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಮಂಡಿಸಿದ 2024-25ನೇ ಸಾಲಿನ ಬಜೆಟ್ ನಲ್ಲಿ ಬಿಹಾರಕ್ಕೆ ಬಂಪರ್ ಕೊಡುಗೆ ನೀಡಿದ್ದು, ಎನ್ ಡಿಎ ಮಿತ್ರ ಪಕ್ಷ ಜೆಡಿಯು ಈ ನಿರ್ದಿಷ್ಟ ಘೋಷಣೆಗಳನ್ನು ಸ್ವಾಗತಿಸಿದೆ.

ಬಜೆಟ್ ಬಗ್ಗೆ ಪ್ರತಿಕ್ರಿಯಿಸಿದ ಜೆಡಿಯು ವಕ್ತಾರ ಕೆ ಸಿ ತ್ಯಾಗಿ ಅವರು ಬಿಹಾರಕ್ಕೆ "ವಿಶೇಷ ಹಣಕಾಸು ನೆರವು" ನೀಡಿರುವುದನ್ನು ಶ್ಲಾಘಿಸಿದರು. ಈ ಅಭಿವೃದ್ಧಿ ಕ್ರಮಗಳು ರಾಜ್ಯವನ್ನು "ಆತ್ಮನಿರ್ಭರ್" ಮಾಡುವಲ್ಲಿ ಒಂದು ದೊಡ್ಡ ಹೆಜ್ಜೆಯಾಗಲಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಹೆದ್ದಾರಿಗಳಿಗಾಗಿ 26,000 ಕೋಟಿ ರೂ., ಪ್ರವಾಹವನ್ನು ತಗ್ಗಿಸುವ ಕ್ರಮಗಳಿಗಾಗಿ 11,500 ಕೋಟಿ ರೂ., ರಾಜ್ಯದಲ್ಲಿ ಹೊಸ ವಿಮಾನ ನಿಲ್ದಾಣ ಮತ್ತು ವೈದ್ಯಕೀಯ ಕಾಲೇಜು ಸ್ಥಾಪನೆ ಜೊತೆಗೆ ಗಂಗಾ ನದಿಗೆ ಎರಡು ಹೊಸ ಸೇತುವೆಗಳನ್ನು ಘೋಷಿಸಲಾಗಿದೆ ಎಂದು ಅವರು ಹೇಳಿದರು.

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಳಂದಾ ವಿಶ್ವವಿದ್ಯಾಲಯವನ್ನು ಅಭಿವೃದ್ಧಿಪಡಿಸಲು ಮತ್ತು ನಳಂದ-ರಾಜಗೀರ್ ಕಾರಿಡಾರ್ ಸೇರಿದಂತೆ ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸುವುದಾಗಿ ಘೋಷಿಸಿದ್ದಾರೆ ಎಂದು ತ್ಯಾಗಿ ತಿಳಿಸಿದರು.

ಕೋಲ್ಕತ್ತಾ-ಅಮೃತಸರ ಕಾರಿಡಾರ್‌ಗೆ ಗಯಾ ಪ್ರಧಾನ ಕಛೇರಿಯಾಗಲಿದೆ. ಬಿಹಾರಕ್ಕೆ ಮೂರು ಹೊಸ ಎಕ್ಸ್‌ಪ್ರೆಸ್‌ವೇಗಳನ್ನು ನೀಡಲಾಗಿದೆ. ಬಜೆಟ್‌ನಲ್ಲಿ ರಾಜ್ಯದಲ್ಲಿ ಕ್ರೀಡಾ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸಲು ಮತ್ತು ವಿವಿಧ ಸಂಸ್ಥೆಗಳಿಂದ ಸಾಲಕ್ಕಾಗಿ ಬಿಹಾರ ಸರ್ಕಾರದ ಮನವಿಯನ್ನು ತ್ವರಿತಗೊಳಿಸಲು ಒತ್ತು ನೀಡಲಾಗಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಶ್ನೆಪತ್ರಿಕೆ ಸೋರಿಕೆ,'ಚಂದಾ ಚೋರಿ' ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ; 'ವಂದೇ ಮಾತರಂ'ನ ಎರಡು ಪ್ಯಾರಾ ಮಾತ್ರ ಹಾಡಲು ನಿರ್ಣಯ!

illegal gold mine: ಮಧ್ಯ ಆಫ್ರಿಕಾದಲ್ಲಿ ಭಯಾನಕ ದುರಂತ, ಚಿನ್ನದ ಗಣಿಯಲ್ಲಿ ಕುಸಿತ,100 ಮಂದಿ ದುರ್ಮರಣ! Video

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ರೋಚಕ ಪಂದ್ಯದಲ್ಲಿ ಭಾರತ 5-3 ಗೋಲುಗಳಿಂದ ಪಾಕಿಸ್ತಾನವನ್ನು ಸೋಲಿಸಿ ವಿಶ್ವಕಪ್‌ನಿಂದ ಹೊರದೂಡಿದೆ!

ಬಾಲಿವುಡ್ ನಟ ಗೋವಿಂದಾ ದಾಂಪತ್ಯ ಕಿತ್ತಾಟದಲ್ಲಿ ಸ್ಫೋಟಕ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ ಸುನೀತಾ ಅಹುಜಾ!