ನಿರ್ಮಲಾ ಸೀತಾರಾಮನ್ 
ದೇಶ

ಎಲ್ಲಾ ರಾಜ್ಯಗಳಿಗೆ ಮೋದಿ ಸರ್ಕಾರ ಅನುದಾನ; ತಾರತಮ್ಯ ಮಾಡುವುದಿಲ್ಲ: ವಿಪಕ್ಷಗಳ ಟೀಕೆಗೆ ನಿರ್ಮಲಾ ಸೀತಾರಾಮನ್

ಬಿಹಾರಕ್ಕೆ 60,000 ಕೋಟಿ ರೂಪಾಯಿ ಯೋಜನೆಗಳನ್ನು ಘೋಷಿಸಲಾಗಿದೆ. ಅಲ್ಲದೇ ಆಂಧ್ರಪ್ರದೇಶಕ್ಕೆ ಬಹು ಪಕ್ಷೀಯ ನೆರವು ನೀಡುವ ಭರವಸೆ ನೀಡಲಾಗಿದೆ. ಬಜೆಟ್‌ನಲ್ಲಿ ಎಲ್ಲಾ ರಾಜ್ಯಗಳಿಗೆ 1. 5 ಲಕ್ಷ ಕೋಟಿ ರೂಪಾಯಿಗಳ ಸಹಾಯವನ್ನು ಭರವಸೆ ನೀಡಿದ್ದಾರೆ.

ನವದೆಹಲಿ: ಎನ್ ಡಿಎ ಬೆಂಬಲಿತ ಪಕ್ಷಗಳು ಆಡಳಿತವಿರುವ ರಾಜ್ಯಗಳಿಗೆ ಬಜೆಟ್ ನಲ್ಲಿ ವಿಶೇಷ ಮುತುವರ್ಜಿ ವಹಿಸಲಾಗಿದೆ ಎಂಬ ವಿಪಕ್ಷಗಳ ಟೀಕೆಯನ್ನು ಮಂಗಳವಾರ ತಳ್ಳಿಹಾಕಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳಿಗೂ ಫಂಡ್ ನೀಡಿದ್ದು, 230ಕ್ಕಿಂತ ಕಡಿಮೆ ಸ್ಥಾನ ಪಡೆದಿರುವ ಮೈತ್ರಿಕೂಟಕ್ಕೆ ಅದನ್ನು ಪ್ರಶ್ನಿಸುವ ಹಕ್ಕು ಇಲ್ಲ ಎಂದು ಹೇಳಿದ್ದಾರೆ.

ಬಿಹಾರಕ್ಕೆ 60,000 ಕೋಟಿ ರೂಪಾಯಿ ಯೋಜನೆಗಳನ್ನು ಘೋಷಿಸಲಾಗಿದೆ. ಅಲ್ಲದೇ ಆಂಧ್ರಪ್ರದೇಶಕ್ಕೆ ಬಹು ಪಕ್ಷೀಯ ನೆರವು ನೀಡುವ ಭರವಸೆ ನೀಡಲಾಗಿದೆ. ಬಜೆಟ್‌ನಲ್ಲಿ ಎಲ್ಲಾ ರಾಜ್ಯಗಳಿಗೆ 1. 5 ಲಕ್ಷ ಕೋಟಿ ರೂಪಾಯಿಗಳ ಸಹಾಯವನ್ನು ಭರವಸೆ ನೀಡಿದ್ದಾರೆ.

ಬಜೆಟ್ ನಂತರ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ನಿರ್ಮಲಾ ಸೀತಾರಾಮನ್, ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ ಒಟ್ಟಾಗಿ 230 ಸ್ಥಾನಗಳನ್ನು ದಾಟಲು ಸಾಧ್ಯವಾಗಲಿಲ್ಲ, ಆದರೆ ಬಿಜೆಪಿ ಮಾತ್ರ 240 ಕ್ಕೆ ತಲುಪಿದೆ ಮತ್ತು ಚುನಾವಣಾ ಪೂರ್ವ ಮೈತ್ರಿಯೊಂದಿಗೆ ನಾವು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಆರಾಮವಾಗಿ ಸರ್ಕಾರ ರಚಿಸಿದ್ದೇವೆ. ಇದು ಐತಿಹಾಸಿಕವಾಗಿದೆ ಎಂದು ಹೇಳಿದರು.

ಪ್ರಧಾನಿ ಮೋದಿ ಮೂರನೇ ಅವಧಿಯಲ್ಲಿ 50 ವರ್ಷಗಳವರೆಗೆ ಬಡ್ಡಿಯಿಲ್ಲದೆ ರಾಜ್ಯಗಳಿಗೆ 1. 50 ಲಕ್ಷ ಕೋಟಿ ರೂಪಾಯಿಗಳನ್ನು ಒದಗಿಸುವುದು ಸೇರಿದಂತೆ ಬೆಳವಣಿಗೆ ಮತ್ತು ಅಭಿವೃದ್ಧಿಗಾಗಿ ಹಲವಾರು ಘೋಷಣೆಗಳನ್ನು ಮಾಡಿದ್ದಾರೆ.ಇದು ಹಣಕಾಸು ಆಯೋಗದ ಶಿಫಾರಸನ್ನು ಮೀರಿದೆ. ನಾವು ಎಲ್ಲಾ ರಾಜ್ಯಗಳಿಗೆ ಪ್ರಸ್ತಾವನೆಗಳನ್ನು ಪಡೆಯುತ್ತೇವೆ ಮತ್ತು ಸರಿಯಾದ ಪ್ರಕ್ರಿಯೆಯನ್ನು ಅನುಸರಿಸಿ ಅವರ ಯೋಜನೆಗಳಿಗೆ ಹಣಕಾಸು ಒದಗಿಸಲು ಪ್ರಯತ್ನಿಸುತ್ತೇವೆ" ಎಂದು ಅವರು ಹೇಳಿದರು.

ಪಶ್ಚಿಮ ಬಂಗಾಳವನ್ನು ಬಜೆಟ್‌ನಲ್ಲಿ ಉಲ್ಲೇಖಿಸಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು ಬಜೆಟ್ ಭಾಷಣದಲ್ಲಿ ರಾಜ್ಯದ ಹೆಸರನ್ನು ಉಲ್ಲೇಖಿಸದಿದ್ದರೆ ಅದನ್ನು ಒಳಗೊಂಡಿಲ್ಲ ಎಂದು ಅರ್ಥವಲ್ಲ ಎಂದು ಅವರು ಹೇಳಿದರು.

“ದೇಶದ ಪೂರ್ವ ಭಾಗದ ರಾಜ್ಯಗಳು ದತ್ತಿಗಳಿಂದ ಸಮೃದ್ಧವಾಗಿವೆ ಮತ್ತು ಬಲವಾದ ಸಾಂಸ್ಕೃತಿಕ ಸಂಪ್ರದಾಯಗಳನ್ನು ಹೊಂದಿವೆ. ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ, ಒಡಿಶಾ ಮತ್ತು ಆಂಧ್ರಪ್ರದೇಶ ಒಳಗೊಂಡ ದೇಶದ ಪೂರ್ವ ಪ್ರದೇಶದ ಸರ್ವತೋಮುಖ ಅಭಿವೃದ್ಧಿಗಾಗಿ ನಾವು ಪೂರ್ವೋದಯ ಎಂಬ ಯೋಜನೆಯನ್ನು ರೂಪಿಸುತ್ತೇವೆ ಎಂದು ಅವರು ತಮ್ಮ ಬಜೆಟ್ ಭಾಷಣದಲ್ಲಿ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

SCROLL FOR NEXT