ಸಾಂದರ್ಭಿಕ ಚಿತ್ರ 
ದೇಶ

ಜಮ್ಮು-ಕಾಶ್ಮೀರ: ಉಗ್ರರ ಒಳನುಸುಳುವಿಕೆ ಯತ್ನ ವಿಫಲ, ಓರ್ವ ಸೈನಿಕ ಹುತಾತ್ಮ

ಕೃಷ್ಣಗತಿ ಬೆಲ್ಟ್‌ನ ಬತ್ತಲ್ ಫಾರ್ವರ್ಡ್ ಪ್ರದೇಶದಲ್ಲಿ ಉಗ್ರರನ್ನು ಪರಿಣಾಮಕಾರಿಯಾಗಿ ಹಿಮ್ಮಟ್ಟಿಸಲಾಗಿದೆ. ಈ ವೇಳೆ ತೀವ್ರವಾದ ಗುಂಡಿನ ಚಕಮಕಿಯಲ್ಲಿ ಗಾಯಗೊಂಡಿದ್ದ ಲ್ಯಾನ್ಸ್ ನಾಯಕ್ ಸುಭಾಷ್ ಕುಮಾರ್ ಸಾವನ್ನಪ್ಪಿದ್ದಾರೆ. ಉಗ್ರರ ಕಡೆಯೂ ನಷ್ಟವಾಗಿದೆ ಎಂದು ತಿಳಿದುಬಂದಿದೆ.

ಪೂಂಚ್: ಕೇಂದ್ರಾಡಳಿತ ಪ್ರದೇಶದ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಮಂಗಳವಾರ ಉಗ್ರರ ಒಳನುಸುಳುವಿಕೆ ಪ್ರಯತ್ನವನ್ನು ಸೇನೆಯು ವಿಫಲಗೊಳಿಸಿದ್ದರಿಂದ ಓರ್ವ ಯೋಧ ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ವೈಟ್ ನೈಟ್ ಕಾರ್ಪ್ಸ್, ಬಟ್ಟಲ್ ಸೆಕ್ಟರ್ ನಲ್ಲಿ ಮುಂಜಾನೆ 3 ಗಂಟೆ ಸಮಯದಲ್ಲಿ ಉಗ್ರರ ಒಳನುಸುಳುವಿಕೆ ಪ್ರಯತ್ನವನ್ನು ಸೇನಾ ಪಡೆಗಳು ಪರಿಣಾಮಕಾರಿಯಾಗಿ ವಿಫಲಗೊಳಿಸಿದವು. ಭಾರೀ ಗುಂಡಿನ ಚಕಮಕಿ ಸಮಯದಲ್ಲಿ, ಒಬ್ಬ ಧೈರ್ಯಶಾಲಿ ಗಾಯಗೊಂಡಿದ್ದಾರೆ. ಕಾರ್ಯಾಚರಣೆಗಳು ಮುಂದುವರೆದಿದೆ ಎಂದು ಹೇಳಿತ್ತು.

ಮೂಲಗಳ ಪ್ರಕಾರ, ಕೃಷ್ಣಗತಿ ಬೆಲ್ಟ್‌ನ ಬತ್ತಲ್ ಫಾರ್ವರ್ಡ್ ಪ್ರದೇಶದಲ್ಲಿ ಉಗ್ರರನ್ನು ಪರಿಣಾಮಕಾರಿಯಾಗಿ ಹಿಮ್ಮಟ್ಟಿಸಲಾಗಿದೆ. ಈ ವೇಳೆ ತೀವ್ರವಾದ ಗುಂಡಿನ ಚಕಮಕಿಯಲ್ಲಿ ಗಾಯಗೊಂಡಿದ್ದ ಲ್ಯಾನ್ಸ್ ನಾಯಕ್ ಸುಭಾಷ್ ಕುಮಾರ್ ಸಾವನ್ನಪ್ಪಿದ್ದಾರೆ. ಉಗ್ರರ ಕಡೆಯೂ ನಷ್ಟವಾಗಿದೆ ಎಂದು ತಿಳಿದುಬಂದಿದೆ.

ಮರಣೋತ್ತರ ಪರೀಕ್ಷೆ ನಡೆಸಿ ಯೋಧನ ದೇಹವನ್ನು ಸೇನೆಗೆ ಹಸ್ತಾಂತರಿಸಲಾಗಿದೆ. ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇತ್ತೀಚಿನ ತಿಂಗಳುಗಳಲ್ಲಿ ಜಮ್ಮುವಿನಲ್ಲಿ ಭಯೋತ್ಪಾದಕ ಚಟುವಟಿಕೆಗಳು ಹೆಚ್ಚುತ್ತಿದ್ದು, ಈ ಪ್ರದೇಶದಲ್ಲಿ ಉಗ್ರಗಾಮಿತ್ವದ ಪುನರುಜ್ಜೀವನದ ಬಗ್ಗೆ ಆತಂಕವನ್ನು ಹೆಚ್ಚಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT