ಮುಂಬೈ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಕೇಂದ್ರ ಬಜೆಟ್ ದೇಶಕ್ಕಾಗಿ ಅಲ್ಲ. ಬಿಹಾರ ಮತ್ತು ಆಂಧ್ರಪ್ರದೇಶದ ಎನ್‌ಡಿಎ ಮಿತ್ರಪಕ್ಷಗಳಿಗಾಗಿ ಈ ಬಜೆಟ್ ಮಂಡಿಸಲಾಗಿದೆ ಎಂದು ಎನ್‌ಸಿಪಿ(ಎಸ್‌ಪಿ) ಮಂಗಳವಾರ ಟೀಕಿಸಿದೆ.
ಈ ಕುರಿತು 'ಎಕ್ಸ್' ನಲ್ಲಿ ಪೋಸ್ಟ್ ಮಾಡಿದ ಎನ್‌ಸಿಪಿ(ಎಸ್‌ಪಿ) ವಕ್ತಾರ ಕ್ಲೈಡ್ ಕ್ರಾಸ್ಟೊ, ಬಜೆಟ್‌ನಲ್ಲಿ ಮಹಾರಾಷ್ಟ್ರವನ್ನು ನಿರ್ಲಕ್ಷಿಸಲಾಗಿದೆ ಮತ್ತು ಈ ವರ್ಷದ ಕೊನೆಯಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ ಜನರು ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದ್ದಾರೆ.
"ನಿರ್ಮಲಾ ಸೀತಾರಾಮನ್ ಅವರೇ ಬಿಹಾರ ಮತ್ತು ಆಂಧ್ರ ಪ್ರದೇಶಕ್ಕಾಗಿ ಮಾತ್ರ ಬಜೆಟ್ ಮಂಡಿಸಿದ್ದೀರಾ? ಇದು ಮಿತ್ರಪಕ್ಷಗಳನ್ನು ಹಿಡಿದಿಟ್ಟುಕೊಳ್ಳುವ ಬಜೆಟ್'. ಬಿಹಾರ ಮತ್ತು ಆಂಧ್ರಪ್ರದೇಶಕ್ಕೆ ಬಜೆಟ್ ಅನುಕೂಲಕರವಾಗಿಲ್ಲದಿದ್ದರೆ, ಅವರ ಸರ್ಕಾರ ಬೀಳುತ್ತದೆ ಎಂದು ಬಿಜೆಪಿ ತಿಳಿದಿದೆ. ಹೀಗಾಗಿ ನಿರ್ಮಲಾ ಸೀತಾರಾಮನ್ ಅವರು ಎನ್‌ಡಿಎ ಮಿತ್ರಪಕ್ಷಗಳಿಗೆ ಅನುಕೂಲವಾಗುವಂತೆ ಬಜೆಟ್ ಮಂಡಿಸಿದ್ದಾರೆಯೇ ಹೊರತು ದೇಶಕ್ಕಾಗಿ ಅಲ್ಲ ಎಂದು ಎನ್ ಸಿಪಿ ನಾಯಕ ವಾಗ್ದಾಳಿ ನಡೆಸಿದ್ದಾರೆ.
ಬಜೆಟ್ ನಲ್ಲಿ ಮಹಾರಾಷ್ಟ್ರವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ. ಜನ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸುತ್ತಾರೆ. ಜೈ ಹಿಂದ್, ಜೈ ಮಹಾರಾಷ್ಟ್ರ" ಎಂದು ಕ್ರಾಸ್ಟೊ ಪೋಸ್ಟ್ ಮಾಡಿದ್ದಾರೆ.