ಹಜ್ ಯಾತ್ರೆ ಸಾಂದರ್ಭಿಕ ಚಿತ್ರ 
ದೇಶ

ಈ ವರ್ಷ ಹಜ್ ಯಾತ್ರೆ ವೇಳೆ 201 ಭಾರತೀಯರು ಸಾವು: ಲೋಕಸಭೆಗೆ ಕೇಂದ್ರ ಮಾಹಿತಿ

ಹಜ್ ಯಾತ್ರೆಯ ಯಶಸ್ವಿ ನಿರ್ವಹಣೆಗೆ ಮತ್ತು ಭಾರತೀಯ ಯಾತ್ರಾರ್ಥಿಗಳ ಸುರಕ್ಷತೆ ಹಾಗೂ ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರ ಗಮನಾರ್ಹ ಒತ್ತು ನೀಡಿದೆ ಎಂದು ಹೇಳಿದರು.

ನವದೆಹಲಿ: 2024 ರ ಹಜ್ ಯಾತ್ರೆಯ ಸಮಯದಲ್ಲಿ 200ಕ್ಕೂ ಹೆಚ್ಚು ಭಾರತೀಯ ಯಾತ್ರಿಕರು ಸಾವನ್ನಪ್ಪಿದ್ದಾರೆ. ಹೆಚ್ಚಿನ ಸಾವುಗಳು ಹೃದಯಾಘಾತ-ಉಸಿರಾಟ ಮತ್ತು ಹೃದಯ-ಶ್ವಾಸಕೋಶದ ಸ್ತಂಭನಕ್ಕೆ ಕಾರಣವಾಗಿವೆ ಎಂದು ಕೇಂದ್ರ ಸರ್ಕಾರ ಬುಧವಾರ ಲೋಕಸಭೆಗೆ ತಿಳಿಸಿದೆ.

ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿದ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, ಹಜ್ ಯಾತ್ರೆಯ ಯಶಸ್ವಿ ನಿರ್ವಹಣೆಗೆ ಮತ್ತು ಭಾರತೀಯ ಯಾತ್ರಾರ್ಥಿಗಳ ಸುರಕ್ಷತೆ ಹಾಗೂ ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರ ಗಮನಾರ್ಹ ಒತ್ತು ನೀಡಿದೆ ಎಂದು ಹೇಳಿದರು.

"ಜುಲೈ 21ರ ವರೆಗೆ 201 ಭಾರತೀಯ ಯಾತ್ರಾರ್ಥಿಗಳು 2024 ರ ಹಜ್ ತೀರ್ಥಯಾತ್ರೆಯ ಸಮಯದಲ್ಲಿ ಸಾವನ್ನಪ್ಪಿದ್ದಾರೆ ಮತ್ತು ಅವರಲ್ಲಿ ಹೆಚ್ಚಿನವರು ಹೃದಯಾಘಾತ-ಉಸಿರಾಟದ ಸಮಸ್ಯೆ ಮತ್ತು ಹೃದಯ-ಶ್ವಾಸಕೋಶದ ಸ್ತಂಭನದಿಂದ ಮೃತಪಟ್ಟಿದ್ದಾರೆ" ಎಂದು ಅವರು ಹೇಳಿದರು.

ಒಟ್ಟು ಸಾವುನೋವುಗಳಲ್ಲಿ 60 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಯಾತ್ರಾರ್ಥಿಗಳಲ್ಲಿ ಶೇಕಡಾ 70 ಕ್ಕಿಂತ ಹೆಚ್ಚು ಸಾವು ಸಂಭವಿಸಿದೆ ಎಂದು ರಿಜಿಜು ತಿಳಿಸಿದ್ದಾರೆ.

"ಹಜ್ ಯಾತ್ರೆಗೆ ಸಂಬಂಧಿಸಿದಂತೆ ಕಳೆದ ಕೆಲವು ವರ್ಷಗಳಲ್ಲಿ ಹಲವಾರು ಪ್ರಗತಿಪರ ಸುಧಾರಣೆಗಳನ್ನು ಪರಿಚಯಿಸಲಾಗಿದೆ. ಇದು ಹಜ್ ಯಾತ್ರೆಯ ಅನುಭವದಲ್ಲಿ ಗುಣಾತ್ಮಕ ಸುಧಾರಣೆಗೆ ಕಾರಣವಾಗಿದೆ" ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

SCROLL FOR NEXT