ದೇಶ

ಕೇಂದ್ರ ಬಜೆಟ್ ಎಫೆಕ್ಟ್: ಜುಲೈ 27ರ ನೀತಿ ಆಯೋಗ ಸಭೆ ಬಹಿಷ್ಕರಿಸಲು ವಿರೋಧ ಪಕ್ಷಗಳ ಮುಖ್ಯಮಂತ್ರಿಗಳು ನಿರ್ಧಾರ!

ಕಾಂಗ್ರೆಸ್ ಪಕ್ಷದ ನಿರ್ಧಾರವನ್ನು ಪ್ರಕಟಿಸಿದ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್, ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ನೀತಿ ಆಯೋಗ ಸಭೆಯನ್ನು ಬಹಿಷ್ಕರಿಸಲಿದ್ದಾರೆ ಎಂದು ಹೇಳಿದ್ದಾರೆ.

ನವದೆಹಲಿ: ಕೇಂದ್ರ ಸರ್ಕಾರದ 2024-25ನೇ ಆರ್ಥಿಕ ವರ್ಷದ ಬಜೆಟ್ ಮಂಡನೆಯಾಗಿದೆ. ಬಜೆಟ್ ನಲ್ಲಿ ಮೋದಿ 3.0 ಸರ್ಕಾರ ಕೇವಲ ಬಿಹಾರ ಮತ್ತು ಆಂಧ್ರ ಪ್ರದೇಶಕ್ಕೆ ಸಿಂಹಪಾಲು ನೀಡಿದೆ, ಬೇರೆಲ್ಲಾ ರಾಜ್ಯಗಳನ್ನು ಅದರಲ್ಲೂ ವಿರೋಧ ಪಕ್ಷಗಳು ಆಡಳಿತದಲ್ಲಿರುವ ರಾಜ್ಯಗಳನ್ನು ಕಡೆಗಣಿಸಿದೆ ಎಂದು ಆರೋಪಿಸುತ್ತಿವೆ.ಮತ್ತು ಇತರ ಪರಿಣಾಮ ಜುಲೈ 27 ರಂದು ನಡೆಯಲಿರುವ ನೀತಿ ಆಯೋಗದ ಸಭೆಯನ್ನು ಬಹಿಷ್ಕರಿಸಲು ವಿರೋಧ ಪಕ್ಷದ ರಾಜ್ಯಗಳ ಮುಖ್ಯಮಂತ್ರಿಗಳು ಒಕ್ಕೊರಲಿನಿಂದ ನಿರ್ಧರಿಸಿದ್ದಾರೆ.

ನಿನ್ನೆ ಸಂಜೆ ಇಂಡಿಯಾ ಬ್ಲಾಕ್ ಮೈತ್ರಿಕೂಟದ ಸಭೆ ದೆಹಲಿಯಲ್ಲಿ ನಡೆದಿತ್ತು. ಅದರಲ್ಲಿ ನೀತಿ ಆಯೋಗ ಸಭೆಯನ್ನು ಬಹಿಷ್ಕರಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಸಭೆಯಲ್ಲಿ ಕಾಂಗ್ರೆಸ್ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಟಿಎಂಸಿ ನಾಯಕರಾದ ಡೆರೆಕ್ ಒಬ್ರಿಯನ್, ಕಲ್ಯಾಣ್ ಬ್ಯಾನರ್ಜಿ, ಆಪ್ ನಾಯಕ ಸಂಜಯ್ ಸಿಂಗ್, ಸಿಪಿಐ ನಾಯಕ ಪಿ ಸಂತೋಷ್ ಕುಮಾರ್, ಸಿಪಿಎಂನ ಕೆ ರಾಧಾಕೃಷ್ಣನ್ ಹಾಗೂ ಇತರರು ಉಪಸ್ಥಿತರಿದ್ದರು.

ತೃಣಮೂಲ ಕಾಂಗ್ರೆಸ್ ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರೊಂದಿಗೆ ಸಮಾಲೋಚಿಸಿದ ನಂತರ ಟಿಎಂಸಿ ಈ ವಿಷಯದ ಬಗ್ಗೆ ಅಂತಿಮ ನಿರ್ಧಾರವನ್ನು ತಿಳಿಸುತ್ತದೆ. ಸಭೆಗೆ ಮುಂಚೆಯೇ, ಈ ಸಭೆ ಆರಂಭಕ್ಕೆ ಮೊದಲೇ ಡಿಎಂಕೆ ಮುಖ್ಯಸ್ಥ ಮತ್ತು ತಮಿಳುನಾಡು ಸಿಎಂ ಎಂ ಕೆ ಸ್ಟಾಲಿನ್ ಅವರು ನೀತಿ ಆಯೋಗ ಸಭೆಯನ್ನು ಬಹಿಷ್ಕರಿಸುವ ನಿರ್ಧಾರವನ್ನು ಪ್ರಕಟಿಸಿದ್ದರು.

ಕಾಂಗ್ರೆಸ್ ಪಕ್ಷದ ನಿರ್ಧಾರವನ್ನು ಪ್ರಕಟಿಸಿದ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್, ಕಾಂಗ್ರಪೆಸ್ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ನೀತಿ ಆಯೋಗ ಸಭೆಯನ್ನು ಬಹಿಷ್ಕರಿಸಲಿದ್ದಾರೆ ಎಂದು ಹೇಳಿದ್ದಾರೆ.

ಇಂದು ಮಂಡಿಸಿದ ಕೇಂದ್ರ ಬಜೆಟ್ ಅತ್ಯಂತ ತಾರತಮ್ಯ ಮತ್ತು ಅಪಾಯಕಾರಿಯಾಗಿದೆ, ಕೇಂದ್ರ ಸರ್ಕಾರ ಅನುಸರಿಸಬೇಕಾದ ಫೆಡರಲಿಸಂ ಮತ್ತು ನ್ಯಾಯಸಮ್ಮತತೆಯ ತತ್ವಗಳಿಗೆ ಸಂಪೂರ್ಣವಾಗಿ ವಿರುದ್ಧವಾಗಿದೆ. ಈ ಸರ್ಕಾರದ ಧೋರಣೆ ಸಂಪೂರ್ಣವಾಗಿ ಸಾಂವಿಧಾನಿಕ ತತ್ವಗಳಿಗೆ ವಿರುದ್ಧವಾಗಿದೆ. ಮೋದಿ ಸರ್ಕಾರದ ಆಡಳಿತದ ನಿಜವಾದ ತಾರತಮ್ಯ ನೀತಿಯನ್ನು ಮರೆಮಾಚಲು ನಾಮಕವಸ್ತೆ ನಾವು ನೀತಿ ಆಯೋಗ ಸಭೆಯಲ್ಲಿ ಭಾಗವಹಿಸುವುದಿಲ್ಲ. ಕೇಂದ್ರ ಸರ್ಕಾರದ ಧೋರಣೆ ಖಂಡಿಸಿ ಜುಲೈ 27 ರಂದು ನಡೆಯಲಿರುವ ನೀತಿ ಆಯೋಗ ಸಭೆಯನ್ನು ಕಾಂಗ್ರೆಸ್ ಬಹಿಷ್ಕರಿಸುತ್ತದೆ ಎಂದು ಟ್ವೀಟ್ ಮೂಲಕ ತಿಳಿಸಿದೆ.

ಇಂದು ಪ್ರತಿಭಟನೆ: ನೀತಿ ಆಯೋಗದ ಸಭೆಯನ್ನು ಬಹಿಷ್ಕರಿಸುವುದಲ್ಲದೆ, ಪ್ರತಿಪಕ್ಷಗಳ ಸಂಸದರು ಇಂದು ಬುಧವಾರ ಮತ್ತು ಮುಂದಿನ ದಿನಗಳಲ್ಲಿ ಸಂಸತ್ತಿನಲ್ಲಿ 'ತಾರತಮ್ಯ' ಬಜೆಟ್ ವಿರುದ್ಧ ಪ್ರತಿಭಟಿಸಲು ನಿರ್ಧರಿಸಿದ್ದಾರೆ ಎಂದು ಸಭೆಯಲ್ಲಿ ಭಾಗವಹಿಸಿದ ನಾಯಕರೊಬ್ಬರು ತಿಳಿಸಿದ್ದಾರೆ.

ಇಂದು ಸಂಸದರು ಸಂಸತ್ತಿನ ಹೊರಗೆ ಪ್ರತಿಭಟನೆ ನಡೆಸುತ್ತಾರೆ. ಸದನದಲ್ಲಿ ಈ ವಿಷಯವನ್ನು ಪ್ರಸ್ತಾಪಿಸುತ್ತಾರೆ ಆದರೆ ಪ್ರತಿಪಕ್ಷಗಳು ಕಲಾಪವನ್ನು ಬಹಿಷ್ಕರಿಸುವುದಿಲ್ಲ ಎಂದರು.

ಕಾರಾಗೃಹ ವಾಸದಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆರೋಗ್ಯ ಹದಗೆಟ್ಟಿರುವ ಬಗ್ಗೆ ಕಳವಳ ವ್ಯಕ್ತಪಡಿಸಿ ಇಂದು ಆಪ್ ನಾಯಕರು ಹೇಳಿಕೆ ನೀಡಲಿದ್ದಾರೆ.

ಬಿಜೆಪಿ ಮತ್ತು ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ದೆಹಲಿ ಸಿಎಂ ಕೇಜ್ರಿವಾಲ್ ಅವರ ಜೀವನದ ಜೊತೆ ಆಟವಾಡುತ್ತಿದ್ದಾರೆ. ಅವರನ್ನು ಜೈಲಿನಲ್ಲಿ ಕೊಲ್ಲಲು ಸಂಚು ರೂಪಿಸುತ್ತಿದ್ದಾರೆ ಎಂದು ಆಮ್ ಆದ್ಮಿ ಪಕ್ಷ ಆರೋಪಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT