ದೇಶ

ಭಾರೀ ಮಳೆ: ಗುಜರಾತ್ ನ ದ್ವಾರಕಾ ಜಿಲ್ಲೆಯಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿತ; ವೃದ್ಧೆ ಸೇರಿ ಮೂವರು ಸಾವು

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF), ಪೊಲೀಸ್ ಮತ್ತು ಅಗ್ನಿಶಾಮಕ ದಳದ ತಂಡಗಳು ಭಾರೀ ಮಳೆಯ ಪರಿಣಾಮವಾಗಿ ಕಟ್ಟಡ ಕುಸಿದ ನಂತರ ಇವರ ಮೇಲೆ ಬಿದ್ದ ಅವಶೇಷಗಳನ್ನು ತೆಗೆದುಹಾಕಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಹಮದಾಬಾದ್: ಭಾರೀ ಮಳೆಯ ನಡುವೆ ಗುಜರಾತ್‌ನ ಸೌರಾಷ್ಟ್ರ ಪ್ರದೇಶದಲ್ಲಿ ದೇವಭೂಮಿ ದ್ವಾರಕಾ ಜಿಲ್ಲೆಯ ಜಮ್ ಖಂಭಾಲಿಯಾ ಪಟ್ಟಣದಲ್ಲಿ ಶಿಥಿಲಗೊಂಡ ಮೂರು ಅಂತಸ್ತಿನ ಕಟ್ಟಡ ಕುಸಿದು ವೃದ್ಧೆ ಮತ್ತು ಅವರ ಇಬ್ಬರು ಮೊಮ್ಮಕ್ಕಳು ಮೃತಪಟ್ಟಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಪಟ್ಟಣದ ಗಗ್ವಾನಿ ಫಾಲಿ ಪ್ರದೇಶದಲ್ಲಿ ನಿನ್ನೆ ಮಂಗಳವಾರ ಸಂಜೆ ಈ ಘಟನೆ ಸಂಭವಿಸಿದ್ದು, ಮಧ್ಯರಾತ್ರಿಯವರೆಗೆ ಮುಂದುವರಿದ ಸುಮಾರು ಆರು ಗಂಟೆಗಳ ಸುದೀರ್ಘ ರಕ್ಷಣಾ ಕಾರ್ಯಾಚರಣೆಯ ನಂತರ ಮೂವರ ಮೃತದೇಹಗಳನ್ನು ಹೊರತರಲಾಯಿತು. ಅವಶೇಷಗಳಡಿಯಿಂದ ಐವರನ್ನು ರಕ್ಷಿಸಲಾಗಿದೆ ಎಂದು ಅವರು ಹೇಳಿದರು.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF), ಪೊಲೀಸ್ ಮತ್ತು ಅಗ್ನಿಶಾಮಕ ದಳದ ತಂಡಗಳು ಭಾರೀ ಮಳೆಯ ಪರಿಣಾಮವಾಗಿ ಕಟ್ಟಡ ಕುಸಿದ ನಂತರ ಇವರ ಮೇಲೆ ಬಿದ್ದ ಅವಶೇಷಗಳನ್ನು ತೆಗೆದುಹಾಕಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರನ್ನು ಕೇಶರ್ಬೆನ್ ಕಂಜಾರಿಯಾ (65ವ), ಪ್ರೀತಿಬೆನ್ ಕಂಜಾರಿಯಾ (15ವ) ಮತ್ತು ಪಾಯಲ್ಬೆನ್ ಕಂಜಾರಿಯಾ (18ವ) ಎಂದು ಗುರುತಿಸಲಾಗಿದೆ.

ಅವಶೇಷಗಳಡಿ ಸಿಲುಕಿದ್ದ ಐವರನ್ನು ಸ್ಥಳೀಯರು ರಕ್ಷಿಸಿದ್ದು, ಮೃತರ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಸೌರಾಷ್ಟ್ರ ಮತ್ತು ದಕ್ಷಿಣ ಗುಜರಾತ್ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಲೇ ಇದೆ, ಅಣೆಕಟ್ಟುಗಳು ತುಂಬಿ ಹರಿಯುತ್ತಿರುವುದರಿಂದ ಮತ್ತು ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ತಗ್ಗು ಪ್ರದೇಶಗಳು ಮುಳುಗಿವೆ. ಇಂದು ಬೆಳಗ್ಗೆ 6 ಗಂಟೆಯ ಹೊತ್ತಿಗೆ ಸೂರತ್ ಜಿಲ್ಲೆಯ ಉಮರ್ಪಾದ ತಾಲೂಕಿನಲ್ಲಿ 276 ಮಿ.ಮೀ ಮಳೆಯಾಗಿದೆ.

ನವಸಾರಿ, ಜುನಾಗಢ್, ದೇವಭೂಮಿ ದ್ವಾರಕಾ, ಕಚ್, ಡ್ಯಾಂಗ್ಸ್ ಮತ್ತು ತಾಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದ್ದು, ತಗ್ಗು ಪ್ರದೇಶಗಳಲ್ಲಿ ಪ್ರವಾಹ ಉಂಟಾಗಿದೆ. ಪ್ರವಾಹ ಪೀಡಿತ ಜಿಲ್ಲೆಗಳಲ್ಲಿನ ಆಡಳಿತಾಧಿಕಾರಿಗಳು ಜನರಿಗೆ ಪದೇ ಪದೇ ಎಚ್ಚರಿಕೆ ನೀಡುತ್ತಿದ್ದು, ಅಗತ್ಯವಿದ್ದಲ್ಲಿ ಮಾತ್ರ ಮನೆಯಿಂದ ಹೊರಹೋಗುವಂತೆ ಮತ್ತು ತುಂಬಿ ಹರಿಯುವ ಕ್ರಾಸ್ ವೇಗಳನ್ನು ದಾಟದಂತೆ ತಿಳಿಸಿದ್ದಾರೆ.

ಭಾರೀ ಮಳೆಯ ಹಿನ್ನೆಲೆಯಲ್ಲಿ ಜಿಲ್ಲೆಯ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT