ಮನೀಶ್ ಸಿಸೋಡಿಯಾ, ಅರವಿಂದ್ ಕೇಜ್ರಿವಾಲ್, ಕೆ ಕವಿತಾ(ಸಂಗ್ರಹ ಚಿತ್ರ) 
ದೇಶ

ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್, ಸಿಸೋಡಿಯಾ, ಕೆ ಕವಿತಾ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ನವದೆಹಲಿ: ಅಕ್ರಮ ಹಣ ವರ್ಗಾವಣೆ ಮತ್ತು ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣಗಳಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯ ಗುರುವಾರ ವಿಸ್ತರಿಸಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಶೇಷ ನ್ಯಾಯಾಧೀಶ ಕಾವೇರಿ ಬವೇಜಾ ಅವರು ಜಾರಿ ನಿರ್ದೇಶನಾಲಯದಿಂದ ತನಿಖೆ ಎದುರಿಸುತ್ತಿರುವ ಅರವಿಂದ್ ಕೇಜ್ರಿವಾಲ್ ಅವರ ಕಸ್ಟಡಿಯನ್ನು ಜುಲೈ 31 ರವರೆಗೆ ವಿಸ್ತರಿಸಿದರೆ, ಸಿಬಿಐ ಸಲ್ಲಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಅವರ ನ್ಯಾಯಾಂಗ ಬಂಧನವನ್ನು ಆಗಸ್ಟ್ 8 ರವರೆಗೆ ವಿಸ್ತರಿಸಲಾಗಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ ನಾಯಕ ಮತ್ತು ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಭಾರತ್ ರಾಷ್ಟ್ರ ಸಮಿತಿ ನಾಯಕಿ ಕೆ ಕವಿತಾ ಮತ್ತು ಇತರ ಆರೋಪಿಗಳ ನ್ಯಾಯಾಂಗ ಬಂಧನವನ್ನು ನ್ಯಾಯಾಧೀಶರು ಜುಲೈ 31 ರವರೆಗೆ ವಿಸ್ತರಿಸಿದರು.

ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಇಡಿ ಪ್ರಕರಣದಲ್ಲಿ ಕೇಜ್ರಿವಾಲ್‌ಗೆ ಈ ಹಿಂದೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು, ಆದರೆ, ಪ್ರಕರಣದಲ್ಲಿ ಜಾಮೀನು ಬಾಂಡ್ ಸಲ್ಲಿಸದ ಕಾರಣ ಅವರನ್ನು ತಿಹಾರ್ ಜೈಲಿನಲ್ಲಿ ಇರಿಸಲಾಗಿದೆ.

ಕೇಂದ್ರೀಯ ತನಿಖಾ ದಳ (CBI) ಪ್ರಕರಣದಲ್ಲಿ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್