ಚಮ್ಮಾರನ ಅಂಗಡಿಗೆ ರಾಹುಲ್ ಗಾಂಧಿ ಭೇಟಿ 
ದೇಶ

ಉತ್ತರ ಪ್ರದೇಶ: ಚಪ್ಪಲಿ ಹೊಲಿಯುವ ಚಮ್ಮಾರನ ಅಂಗಡಿಗೆ ರಾಹುಲ್ ಗಾಂಧಿ ಭೇಟಿ

ರಾಹುಲ್ ಗಾಂಧಿ ಅವರು ಸುಲ್ತಾನ್‌ಪುರದ ಚಮ್ಮಾರನ ಅಂಗಡಿಗೆ ಭೇಟಿ ಮಾಡಿದ ಕಿರು ವಿಡಿಯೋವನ್ನು ಕಾಂಗ್ರೆಸ್ ತನ್ನ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದೆ.

ಲಖನೌ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಶುಕ್ರವಾರ ಉತ್ತರ ಪ್ರದೇಶದ ಸುಲ್ತಾನ್‌ಪುರದಲ್ಲಿ ಚಮ್ಮಾರ ಸಮುದಾಯದ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಲು ಚಪ್ಪಲಿ ಹೊಲಿಯುವ ಚಮ್ಮಾರನ ಅಂಗಡಿಗೆ ಭೇಟಿ ನೀಡಿದರು.

ರಾಹುಲ್ ಗಾಂಧಿ ಅವರು ಸುಲ್ತಾನ್‌ಪುರದ ಚಮ್ಮಾರನ ಅಂಗಡಿಗೆ ಭೇಟಿ ಮಾಡಿದ ಕಿರು ವಿಡಿಯೋವನ್ನು ಕಾಂಗ್ರೆಸ್ ತನ್ನ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, "ಈ ಶ್ರಮಜೀವಿಗಳ ಹಕ್ಕುಗಳಿಗಾಗಿ ನಾವು ನಿರಂತರವಾಗಿ ಹೋರಾಡುತ್ತಿದ್ದೇವೆ. ಬೀದಿಗಳಿಂದ ಸಂಸತ್ತಿನವರೆಗೆ ಅವರ ಪರವಾಗಿ ಧ್ವನಿ ಎತ್ತುತ್ತಿದ್ದೇವೆ" ಎಂದು ಬರೆದುಕೊಂಡಿದೆ.

ರಾಹುಲ್ ಗಾಂಧಿ ಅವರು ತಮ್ಮ ವಿರುದ್ಧ ದಾಖಲಾಗಿರುವ ಮಾನನಷ್ಟ ಮೊಕದ್ದಮೆ ಪ್ರಕರಣದ ವಿಚಾರಣೆಗಾಗಿ ಇಂದು ಸುಲ್ತಾನ್‌ಪುರದ ಶಾಸಕ-ಸಂಸದರ ನ್ಯಾಯಾಲಯಕ್ಕೆ ಹಾಜರಾದರು. ಅಲ್ಲಿಂದ ಲಖನೌಗೆ ಹಿಂತಿರುಗುವ ವೇಳೆ ವಿಧಾಯಕ ನಗರದಲ್ಲಿ ಚಮ್ಮಾರನ ಅಂಗಡಿಗೆ ಭೇಟಿ ಮಾತುಕತೆ ನಡೆಸಿದರು.

ಚಮ್ಮಾರರ ಜೀವನೋಪಾಯ ಮತ್ತು ಜಾತಿ ತಾರತಮ್ಯದ ಹೋರಾಟವನ್ನು ಅರ್ಥಮಾಡಿಕೊಳ್ಳಲು ರಾಹುಲ್ ಗಾಂಧಿ ಅವರು ದಲಿತ ಚಮ್ಮಾರನೊಂದಿಗೆ ಸುಮಾರು 30 ನಿಮಿಷಗಳ ಕಾಲ ಮಾತನಾಡಿದರು ಎಂದು ಕಾಂಗ್ರೆಸ್‌ಗೆ ಸಂಬಂಧಿಸಿದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ