ಮಮತಾ ಬ್ಯಾನರ್ಜಿ PTI
ದೇಶ

'ನೀತಿ ಆಯೋಗ ರದ್ದುಗೊಳಿಸಿ': ಪ್ರಧಾನಿ ಮೋದಿ ಭೇಟಿಗೂ ಮುನ್ನ ಮಮತಾ ಬ್ಯಾನರ್ಜಿ ಆಗ್ರಹ

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಜುಲೈ 27ರಂದು ನವದೆಹಲಿಯಲ್ಲಿ ನೀತಿ ಆಯೋಗದ ಆಡಳಿತ ಮಂಡಳಿ ಸಭೆ ನಡೆಯಲಿದೆ. ಈ ಸಭೆಗಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೂಡ ದೆಹಲಿ ತಲುಪಿದ್ದಾರೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಜುಲೈ 27ರಂದು ನವದೆಹಲಿಯಲ್ಲಿ ನೀತಿ ಆಯೋಗದ ಆಡಳಿತ ಮಂಡಳಿ ಸಭೆ ನಡೆಯಲಿದೆ. ಈ ಸಭೆಗಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೂಡ ದೆಹಲಿ ತಲುಪಿದ್ದಾರೆ. ಆದರೆ ಸಭೆಗೂ ಮುನ್ನ ಸಿಎಂ ಮಮತಾ ಬ್ಯಾನರ್ಜಿ ದೊಡ್ಡ ಆಗ್ರಹವನ್ನು ಮುಂದಿಟ್ಟಿದ್ದು ನೀತಿ ಆಯೋಗವನ್ನು ರದ್ದುಗೊಳಿಸುವಂತೆ ಕೋರಿದ್ದಾರೆ.

ನೀತಿ ಆಯೋಗವನ್ನು ರದ್ದುಗೊಳಿಸಿ, ಯೋಜನಾ ಆಯೋಗವನ್ನು ಮರಳಿ ತನ್ನಿ. ಯೋಜನಾ ಆಯೋಗವು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಕಲ್ಪನೆಯಾಗಿದೆ. ಈ ಸರ್ಕಾರವು ಆಂತರಿಕ ಕಚ್ಚಾಟದಲ್ಲಿ ಬೀಳುತ್ತದೆ ಎಂದರು. ಇದೇ ವೇಳೆ ಅವರು, ಬಂಗಾಳದಲ್ಲಿ ಬಿಜೆಪಿಯ ಸೂರ್ಯ ಮುಳುಗುತ್ತಿದೆ. ಮಹಾರಾಷ್ಟ್ರದಲ್ಲಿ ಉದ್ಧವ್ ಠಾಕ್ರೆ ಮೈತ್ರಿ ಗೆಲ್ಲಲಿದೆ. ಹರಿಯಾಣದಲ್ಲಿ ಬಿಜೆಪಿ ಸೋಲಲಿದೆ ಮತ್ತು ಜಾರ್ಖಂಡ್‌ನಲ್ಲಿ ಹೇಮಂತ್ ಸೋರೆನ್ ಮತ್ತೆ ಗೆಲ್ಲಲಿದ್ದಾರೆ ಎಂದರು.

ಸಿಎಎ ಕುರಿತಂತೆ ಮಾತನಾಡಿದ ಅವರು, ಒಂದು ಸರ್ಕಾರ ಅದನ್ನು ತರಲು ಸಾಧ್ಯವಾದರೆ ಮತ್ತೊಂದು ಸರ್ಕಾರವೂ ಅದನ್ನು ಹಿಂಪಡೆಯಬಹುದು ಎಂದು ಹೇಳಿದರು. ಇತ್ತೀಚಿನ ಚುನಾವಣೆಯಲ್ಲಿ ಭಾರತ ಮೈತ್ರಿಕೂಟಕ್ಕೆ ಶೇ.51ರಷ್ಟು ಮತಗಳು ಹಾಗೂ ಎನ್‌ಡಿಎಗೆ ಶೇ.46ರಷ್ಟು ಮತಗಳು ಲಭಿಸಿವೆ ಎಂದು ಹೇಳಿದರು. ಎನ್‌ಡಿಎ ಭಾಗವಾಗುವ ಪ್ರಶ್ನೆಗೆ, ನಾನು ಸಿದ್ಧಾಂತದೊಂದಿಗೆ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್