ಸಾಂದರ್ಭಿಕ ಚಿತ್ರ 
ದೇಶ

ಜಾರ್ಖಂಡ್‌: ಬುಡಕಟ್ಟು ವಿದ್ಯಾರ್ಥಿಗಳೊಂದಿಗೆ ಘರ್ಷಣೆ, 6 ಪೊಲೀಸರು ಸೇರಿದಂತೆ 15 ಮಂದಿಗೆ ಗಾಯ

ಕಾಲೇಜು ಆವರಣದಲ್ಲಿರುವ ಬುಡಕಟ್ಟು ಹಾಸ್ಟೆಲ್‌ನ ವಿದ್ಯಾರ್ಥಿಗಳ ಗುಂಪೊಂದು ಕ್ಯಾಂಪಸ್‌ಗೆ ಪೊಲೀಸರ ಪ್ರವೇಶವನ್ನು ವಿರೋಧಿಸಿತು. ಇದು ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ಘರ್ಷಣೆಗೆ ಕಾರಣವಾಯಿತು

ಪಾಕುರ್: ಜಾರ್ಖಂಡ್‌ನ ಪಾಕುರ್ ಜಿಲ್ಲೆಯಲ್ಲಿ ಕಾನೂನು ಪರಿಪಾಲಕರು ಮತ್ತು ಬುಡಕಟ್ಟು ವಿದ್ಯಾರ್ಥಿಗಳ ನಡುವಿನ ಘರ್ಷಣೆಯಲ್ಲಿ ಆರು ಪೊಲೀಸ್ ಸಿಬ್ಬಂದಿ ಸೇರಿದಂತೆ 15 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಅಪಹರಣ ಪ್ರಕರಣದ ತನಿಖೆಗಾಗಿ ಪೊಲೀಸ್ ತಂಡ ಕೆಕೆಎಂ ಕಾಲೇಜು ಕ್ಯಾಂಪಸ್‌ಗೆ ಆಗಮಿಸಿದಾಗ ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ.

ಕಾಲೇಜು ಆವರಣದಲ್ಲಿರುವ ಬುಡಕಟ್ಟು ಹಾಸ್ಟೆಲ್‌ನ ವಿದ್ಯಾರ್ಥಿಗಳ ಗುಂಪೊಂದು ಕ್ಯಾಂಪಸ್‌ಗೆ ಪೊಲೀಸರ ಪ್ರವೇಶವನ್ನು ವಿರೋಧಿಸಿತು. ಇದು ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ಘರ್ಷಣೆಗೆ ಕಾರಣವಾಯಿತು ಎಂದು ಅವರು ಹೇಳಿದ್ದಾರೆ.

ಶನಿವಾರ ಜಿಲ್ಲೆಯ ಮಹೇಶ್‌ಪುರ ಪ್ರದೇಶದಲ್ಲಿ ಬಾಂಗ್ಲಾದೇಶದ ಒಳನುಸುಳುವಿಕೆ ವಿರುದ್ಧ ಪ್ರತಿಭಟನಾ ರ್‍ಯಾಲಿ ನಡೆಸಲು ಉದ್ದೇಶಿಸಲಾಗಿದ್ದ ಬುಡಕಟ್ಟು ವಿದ್ಯಾರ್ಥಿಗಳನ್ನು ಪೊಲೀಸರು ಅಮಾನುಷವಾಗಿ ಥಳಿಸಿದ್ದಾರೆ ಎಂದು ರಾಜ್ಯ ಭಾರತೀಯ ಜನತಾ ಪಕ್ಷ ಆರೋಪಿಸಿದೆ. ಘಟನೆಯಲ್ಲಿ ಭಾಗಿಯಾಗಿರುವ ಪೊಲೀಸ್ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೇಸರಿ ಪಕ್ಷ ಆಗ್ರಹಿಸಿದೆ.

ಸುಮಾರು 10ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ಅಮಾನುಷವಾಗಿ ಥಳಿಸಿದ್ದು, ಅವರೆಲ್ಲರೂ ಪಾಕುರ್‌ನ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹಾಸ್ಟೆಲ್‌ನ ವಿದ್ಯಾರ್ಥಿಗಳು ಹೇಳಿದ್ದಾರೆ. ತಮ್ಮ ವಿರೋಧದ ನಡುವೆಯೂ ಪೊಲೀಸರು ಬಲವಂತವಾಗಿ ಕಾಲೇಜು ಕ್ಯಾಂಪಸ್‌ಗೆ ಪ್ರವೇಶಿಸಿದ್ದಾರೆ ಎಂದು ವಿದ್ಯಾರ್ಥಿಯೊಬ್ಬರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel