ನೀತಿ ಆಯೋಗ ಸಭೆಯಲ್ಲಿ ಪ್ರಧಾನಿ ಮೋದಿ ಮತ್ತು ಇತರೆ ಪ್ರತಿನಿಧಿಗಳು 
ದೇಶ

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ 10 ರಾಜ್ಯಗಳ ಸಿಎಂಗಳು Niti Aayog ಸಭೆಗೆ ಗೈರು: ಸಿಇಒ

ಕೇರಳ, ತಮಿಳುನಾಡು, ಕರ್ನಾಟಕ, ತೆಲಂಗಾಣ, ಬಿಹಾರ, ದೆಹಲಿ, ಪಂಜಾಬ್, ಹಿಮಾಚಲ ಪ್ರದೇಶ, ಜಾರ್ಖಂಡ್ ಮತ್ತು ಪುದುಚೇರಿ ರಾಜ್ಯಗಳ ಪ್ರತಿನಿಧಿಗಳು ಗೈರುಹಾಜರಾಗಿದ್ದರು.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಇಂದು ನಡೆದ NITI Aayogದ ಒಂಬತ್ತನೇ ಆಡಳಿತ ಮಂಡಳಿ ಸಭೆಯಲ್ಲಿ ಕರ್ನಾಟಕ ಸಿಎಂ ಸಿದ್ದರಾಮಯ್ಯ ಸೇರಿದಂತೆ 10 ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ ಸಿಎಂಗಳು ಭಾಗವಹಿಸಿರಲಿಲ್ಲ ಎಂದು ಅದರ ಸಿಇಒ ಬಿವಿಆರ್ ಸುಬ್ರಹ್ಮಣ್ಯಂ ಹೇಳಿದ್ದಾರೆ.

ನೀತಿ ಆಯೋಗದ ಸಭೆಯಲ್ಲಿ ಮುಖ್ಯಮಂತ್ರಿಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್ ಗವರ್ನರ್‌ಗಳು ಸೇರಿದಂತೆ 26 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪ್ರತಿನಿಧಿಗಳು ಭಾಗವಹಿಸಿದ್ದರು. ಆದರೆ ಕೇರಳ, ತಮಿಳುನಾಡು, ಕರ್ನಾಟಕ, ತೆಲಂಗಾಣ, ಬಿಹಾರ, ದೆಹಲಿ, ಪಂಜಾಬ್, ಹಿಮಾಚಲ ಪ್ರದೇಶ, ಜಾರ್ಖಂಡ್ ಮತ್ತು ಪುದುಚೇರಿ ರಾಜ್ಯಗಳ ಪ್ರತಿನಿಧಿಗಳು ಗೈರುಹಾಜರಾಗಿದ್ದರು ಎಂದು ಹೇಳಿದರು.

ಅಂತೆಯೇ ನೀತಿ ಆಯೋಗದ ಸಭೆಯಲ್ಲಿ "ಅವರು ಭಾಗವಹಿಸದಿದ್ದರೆ ಅದು ಅವರಿಗೇ ನಷ್ಟ" ಎಂದೂ ಬಿವಿಆರ್ ಸುಬ್ರಹ್ಮಣ್ಯಂ ಅವರು ಹೇಳಿದರು.

ಇನ್ನು ಇದೇ ವೇಳೆ ಇಂದಿನ ನೀತಿ ಆಯೋಗದ ಸಭೆಗೆ ಹಾಜರಾಗಿದ್ದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಭೆಯಿಂದ ಹೊರನಡೆದ ಬಗ್ಗೆ ಮಾತನಾಡಿದ ಸುಬ್ರಹ್ಮಣ್ಯಂ ಅವರು, ಮಧ್ಯಾಹ್ನದ ವೇಳೆಗೆ ರಾಜ್ಯಗಳ ಹೆಸರುಗಳ ವರ್ಣಮಾಲೆಯ ಕ್ರಮದಲ್ಲಿ ತಮ್ಮ ಸರದಿ ಬರಬೇಕಿತ್ತು. ಆದರೂ ಊಟದ ಮೊದಲು ಮಾತನಾಡಲು ಅವರ ಮನವಿಯನ್ನು ಅಂಗೀಕರಿಸಲಾಯಿತು.

ಅವರ ಸಮಯ ಮುಗಿದ ನಂತರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮೈಕ್ ಟ್ಯಾಪ್ ಮಾಡುಲ ಮೂಲಕ ಎಚ್ಚರಿಸಿದರು. ಆದರೆ ಅಷ್ಟಕ್ಕೇ ಅವರು ಮಾತನಾಡುವುದನ್ನು ನಿಲ್ಲಿಸಿ ಹೊರನಡೆದರು. ಮಮತಾ ಹೊರ ನಡೆದರೂ ಪಶ್ಚಿಮ ಬಂಗಾಳ ಸರ್ಕಾರದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸುವುದನ್ನು ಮುಂದುವರೆಸಿದರು ಎಂದು ಹೇಳಿದರು.

ಬಿಹಾರದ ಬಗ್ಗೆ ಮಾತಾನಾಡಿದ ಅವರು, ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ರಾಜ್ಯದಲ್ಲಿ ವಿಧಾನಸಭೆ ಅಧಿವೇಶನದಲ್ಲಿ ನಿರತರಾಗಿರುವ ಕಾರಣ ಸಭೆಗೆ ಹಾಜರಾಗಲು ಸಾಧ್ಯವಾಗಲಿಲ್ಲ ಎಂದು ಸ್ಪಷ್ಟನೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

SCROLL FOR NEXT