ಪ್ರಧಾನಿ ಮೋದಿ 
ದೇಶ

Viksit Bharat@2047 ಪ್ರತಿಯೊಬ್ಬ ಭಾರತೀಯನ ಮಹತ್ವಾಕಾಂಕ್ಷೆ, ಈ ಗುರಿ ಸಾಧಿಸಲು ರಾಜ್ಯಗಳು ಸಕ್ರಿಯ ಪಾತ್ರ ವಹಿಸಬೇಕು: ಪ್ರಧಾನಿ ಮೋದಿ

"Viksit Bharat@2047 ಪ್ರತಿಯೊಬ್ಬ ಭಾರತೀಯನ ಮಹತ್ವಾಕಾಂಕ್ಷೆಯಾಗಿದೆ. ರಾಜ್ಯಗಳು ಜನರೊಂದಿಗೆ ನೇರವಾಗಿ ಸಂಪರ್ಕ ಹೊಂದಿರುವುದರಿಂದ ಈ ಗುರಿಯನ್ನು ಸಾಧಿಸಲು ಸಕ್ರಿಯ ಪಾತ್ರ ವಹಿಸಬೇಕು"

ನವದೆಹಲಿ: 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವುದು ಪ್ರತಿಯೊಬ್ಬ ಭಾರತೀಯನ ಮಹತ್ವಾಕಾಂಕ್ಷೆಯಾಗಿದೆ ಮತ್ತು ರಾಜ್ಯಗಳು ಜನರೊಂದಿಗೆ ನೇರವಾಗಿ ಸಂಪರ್ಕ ಹೊಂದಿರುವುದರಿಂದ ಈ ಗುರಿ ಸಾಧಿಸಲು ಸಕ್ರಿಯ ಪಾತ್ರ ವಹಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಹೇಳಿದ್ದಾರೆ.

ಇಂದು NITI ಆಯೋಗದ 9ನೇ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಧಾನಿ ಮೋದಿ, "ವಿಕಸಿತ ಭಾರತ @ 2047 ಪ್ರತಿಯೊಬ್ಬ ಭಾರತೀಯನ ಮಹತ್ವಾಕಾಂಕ್ಷೆಯಾಗಿದೆ. ರಾಜ್ಯಗಳು ಜನರೊಂದಿಗೆ ನೇರವಾಗಿ ಸಂಪರ್ಕ ಹೊಂದಿರುವುದರಿಂದ ಈ ಗುರಿಯನ್ನು ಸಾಧಿಸಲು ಸಕ್ರಿಯ ಪಾತ್ರ ವಹಿಸಬೇಕು" ಎಂದು ಹೇಳಿರುವುದಾಗಿ NITI ಆಯೋಗ X ನಲ್ಲಿ ಪೋಸ್ಟ್ ಮಾಡಿದೆ.

2047 ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಬಗ್ಗೆ ಸಭೆ ಗಮನಹರಿಸುತ್ತದೆ. ಇದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವಿನ ಸಹಭಾಗಿ ಆಡಳಿತ ಮತ್ತು ಸಹಯೋಗವನ್ನು ಉತ್ತೇಜಿಸುವ ಗುರಿ ಹೊಂದಿದೆ. ವಿತರಣಾ ಕಾರ್ಯವಿಧಾನಗಳನ್ನು ಬಲಪಡಿಸುವ ಮೂಲಕ ಗ್ರಾಮೀಣ ಮತ್ತು ನಗರ ಜನಸಂಖ್ಯೆಯ ಜೀವನದ ಗುಣಮಟ್ಟವನ್ನು ಸುಧಾರಿಸಲಾಗುವುದು ಎಂದು ನೀತಿ ಆಯೋಗ ಹೇಳಿದೆ.

NITI ಆಯೋಗದ ಆಡಳಿತ ಮಂಡಳಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್ ಗವರ್ನರ್‌ಗಳು ಮತ್ತು ಹಲವಾರು ಕೇಂದ್ರ ಸಚಿವರನ್ನು ಒಳಗೊಂಡಿದೆ. ಪ್ರಧಾನಿ ಮೋದಿ ನೀತಿ ಆಯೋಗದ ಅಧ್ಯಕ್ಷರಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

Idre Nemdiyaag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

SCROLL FOR NEXT