ಮನೀಶ್ ಸಿಸೋಡಿಯಾ
ದೇಶ

ಮನೀಷ್ ಸಿಸೋಡಿಯಾ ಜಾಮೀನು ಅರ್ಜಿ: ನಾಳೆ ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ

ಕಳೆದ ವಿಚಾರಣೆಯಲ್ಲಿ ಸಿಸೋಡಿಯಾ ಅವರ ಜಾಮೀನು ಅರ್ಜಿಗಳಿಗೆ ತಮ್ಮ ಉತ್ತರ ಸಲ್ಲಿಸುವಂತೆ ಸಿಬಿಐ ಮತ್ತು ಇಡಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿತ್ತು. ಜುಲೈ 29 ರಂದು ಉತ್ತರ ನೀಡುವಂತೆ ಸೂಚಿಸಲಾಗಿತ್ತು.

ನವದೆಹಲಿ: ಮದ್ಯ ನೀತಿ ಪ್ರಕರಣದಲ್ಲಿ ಎಎಪಿ ನಾಯಕ ಮನೀಶ್ ಸಿಸೋಡಿಯಾ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ನಾಳೆ ನಡೆಯಲಿದೆ. ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ಕೆವಿ ವಿಶ್ವನಾಥನ್ ಅವರ ಪೀಠವು ಜುಲೈ 29 ರಂದು ಪ್ರಕರಣದ ವಿಚಾರಣೆಯನ್ನು ಪುನರಾರಂಭಿಸಲಿದೆ ಎಂದು ಉನ್ನತ ನ್ಯಾಯಾಲಯದ ವೆಬ್ ಸೈಟ್ ನಲ್ಲಿ ಮಾಹಿತಿ ನೀಡಲಾಗಿದೆ.

ಕಳೆದ ವಿಚಾರಣೆಯಲ್ಲಿ ಸಿಸೋಡಿಯಾ ಅವರ ಜಾಮೀನು ಅರ್ಜಿಗಳಿಗೆ ತಮ್ಮ ಉತ್ತರ ಸಲ್ಲಿಸುವಂತೆ ಸಿಬಿಐ ಮತ್ತು ಇಡಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿತ್ತು. ಜುಲೈ 29 ರಂದು ಉತ್ತರ ನೀಡುವಂತೆ ಸೂಚಿಸಲಾಗಿತ್ತು.

ಹಿರಿಯ ಎಎಪಿ ನಾಯಕನನ್ನು 16 ತಿಂಗಳ ಕಾಲ ಜೈಲಿನಲ್ಲಿ ಇರಿಸಲಾಗಿದೆ ಮತ್ತು ಅಕ್ಟೋಬರ್ 2023 ರಲ್ಲಿನ ವಿಚಾರಣೆ ಅದೇ ಹಂತದಲ್ಲಿದೆ ಎಂದು ಸಿಸೋಡಿಯಾ ಅವರ ವಕೀಲರು ವಾದಿಸಿದರು.

ಕಳೆದ ವರ್ಷ ಅಕ್ಟೋಬರ್ 30 ರಂದು ನೀಡಿದ ತೀರ್ಪಿನಲ್ಲಿ, ಸಿಸೋಡಿಯಾಗೆ ಸುಪ್ರೀಂಕೋರ್ಟ್ ಜಾಮೀನು ನಿರಾಕರಿಸಿತ್ತು. ಆದರೆ ಮುಂದಿನ ಮೂರು ತಿಂಗಳಲ್ಲಿ ವಿಚಾರಣೆ ನಿಧಾನವಾಗಿ ಮುಂದುವರಿದರೆ, ಅವರು ಹೊಸದಾಗಿ ಜಾಮೀನಿಗೆ ಅರ್ಜಿ ಸಲ್ಲಿಸಬಹುದು ಎಂದು ಹೇಳಿತ್ತು.

ಏಪ್ರಿಲ್ 30 ರಂದು ಎರಡನೇ ಬಾರಿಗೆ ಸಾಮಾನ್ಯ ಜಾಮೀನು ಕೋರಿದ್ದ ಸಿಸೋಡಿಯಾಗೆ ಜಾಮೀನು ನೀಡಲು ರೋಸ್ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ಕಾವೇರಿ ಬವೇಜಾ ನಿರಾಕರಿಸಿದ್ದರು.ತರುವಾಯ, ದೆಹಲಿ ಹೈಕೋರ್ಟ್ ಸಿಸೋಡಿಯಾ ಅವರಿಗೆ ಜಾಮೀನು ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ಮಾಜಿ ಉಪಮುಖ್ಯಮಂತ್ರಿ ಅವರು ಸುಪ್ರೀಂ ಕೋರ್ಟ್‌ಗೆ ವಿಶೇಷ ರಜೆ ಅರ್ಜಿ ಸಲ್ಲಿಸಿದ್ದರು.

ಮದ್ಯ ನೀತಿ ಪ್ರಕರಣದ ಅಂತಿಮ ಚಾರ್ಜ್ ಶೀಟ್ ನ್ನು ಜುಲೈ 3ರೊಳಗೆ ಸಲ್ಲಿಸುವುದಾಗಿ ಹೇಳಿದ ನಂತರ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ಜಾಮೀನು ಕೋರಿ ಸಿಸೋಡಿಯಾ ಸಲ್ಲಿಸಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಕಳೆದ ವಾರ ವಿಲೇವಾರಿ ಮಾಡಿತ್ತು. ಈ ಮಧ್ಯೆ ದೆಹಲಿ ನ್ಯಾಯಾಲಯ ಶುಕ್ರವಾರ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ಜುಲೈ 31 ರವರೆಗೆ ವಿಸ್ತರಿಸಿದೆ. ಈ ಹಿಂದೆ ನೀಡಲಾಗಿದ್ದ ನ್ಯಾಯಾಂಗ ಬಂಧನದ ಅವಧಿ ಮುಗಿದ ನಂತರ ಅವರನ್ನು ತಿಹಾರ್ ಜೈಲಿನಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರುಪಡಿಸಲಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!