ತಮಿಳನಾಡು ಬಿಎಸ್ ಪಿ ಅಧ್ಯಕ್ಷನ ಪಾರ್ಥಿವ ಶರೀರದ ಮುಂದೆ ಮಾಯಾವತಿ ಸಾಂದರ್ಭಿಕ ಚಿತ್ರ 
ದೇಶ

ತಮಿಳುನಾಡು ಬಿಎಸ್ ಪಿ ಅಧ್ಯಕ್ಷನ ಕೊಲೆ ಪ್ರಕರಣ: ಇನ್ನೂ ಮೂವರ ಬಂಧನ

ಬಂಧಿತ ಆರೋಪಿಗಳನ್ನು ಭಾನುವಾರ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 15 ದಿನಗಳ ಕಸ್ಟಡಿಗೆ ನೀಡಲಾಗಿದೆ. ಇದರೊಂದಿಗೆ ಹೈ ಪ್ರೊಫೈಲ್ ಕೊಲೆ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿರುವವರ ಸಂಖ್ಯೆ 20 ಕ್ಕೆ ಏರಿದೆ.

ಚೆನ್ನೈ: ತಮಿಳುನಾಡು ಬಹುಜನ ಸಮಾಜ ಪಕ್ಷದ ರಾಜ್ಯಾಧ್ಯಕ್ಷ ಕೆ. ಆರ್ಮ್‌ಸ್ಟ್ರಾಂಗ್ ಹತ್ಯೆಗೆ ಸಂಬಂಧಿಸಿದಂತೆ ಇನ್ನೂ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಬಂಧಿತರನ್ನು 21 ವರ್ಷದ ಎನ್ ವಿಜಯಕುಮಾರ್, ವಿ ಮುಕಿಲನ್ (32) ಮತ್ತುಎನ್ ವಿಘ್ನೇಶ್ (27) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಭಾನುವಾರ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 15 ದಿನಗಳ ಕಸ್ಟಡಿಗೆ ನೀಡಲಾಗಿದೆ. ಇದರೊಂದಿಗೆ ಹೈ ಪ್ರೊಫೈಲ್ ಕೊಲೆ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿರುವವರ ಸಂಖ್ಯೆ 20 ಕ್ಕೆ ಏರಿದೆ.

ಪ್ರಕರಣದ ಆರೋಪಿ ಕೆ ತಿರುವೆಂಗಡಂ ಅವರನ್ನು ಜುಲೈ 14 ರಂದು ಇಲ್ಲಿನ ಪೊಲೀಸರು ಗುಂಡಿಕ್ಕಿ ಕೊಂದಿದ್ದರು.

ಆತನ ಬಂಧನದ ನಂತರ ತನಿಖೆಯ ಭಾಗವಾಗಿ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲು ತಿರುವೆಂಗಡಮ್ ಅವರನ್ನು ಚೆನ್ನೈನ ಸ್ಥಳಕ್ಕೆ ಕರೆದೊಯ್ಯಲಾಗಿತ್ತು. ಆಗ ಆರೋಪಿ ಪೊಲೀಸ್ ಸಿಬ್ಬಂದಿಯ ಮೇಲೆ ಗುಂಡು ಹಾರಿಸಿ ಬಂಧನದಿಂದ ಪರಾರಿಯಾಗಲು ಯತ್ನಿಸಿದ್ದಾನೆ. ಆತ್ಮರಕ್ಷಣೆಗಾಗಿ ಅವರ ಮೇಲೆ ಗುಂಡು ಹಾರಿಸಿದ್ದು, ಆತ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಜುಲೈ 5 ರಂದು ಬಹುಜನ ಸಮಾಜ ಪಕ್ಷದ ರಾಜ್ಯಾಧ್ಯಕ್ಷ ಆರ್ಮ್‌ಸ್ಟ್ರಾಂಗ್ ಅವರನ್ನು ತಂಡವೊಂದು ಕೊಚ್ಚಿ ಕೊಲೆ ಮಾಡಿತ್ತು. ಈ ಹತ್ಯೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಎಐಎಡಿಎಂಕೆ ಸೇರಿದಂತೆ ವಿರೋಧ ಪಕ್ಷಗಳು ಆರೋಪಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು