ರಣದೀಪ್ ಸಿಂಗ್ ಸುರ್ಜೇವಾಲಾ 
ದೇಶ

ಕೋಚಿಂಗ್ ಸೆಂಟರ್ ಗಳನ್ನು ನಿಯಂತ್ರಿಸಲು ಕಾನೂನು ಜಾರಿಗೆ ತನ್ನಿ: ಕೇಂದ್ರಕ್ಕೆ ಕಾಂಗ್ರೆಸ್ ಒತ್ತಾಯ

ರಾಜ್ಯಸಭೆಯಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ದೆಹಲಿಯ ಕೋಚಿಂಗ್ ಇನ್‌ಸ್ಟಿಟ್ಯೂಟ್‌ನಲ್ಲಿ ವಿದ್ಯಾರ್ಥಿಗಳ ಸಾವಿನ ಕುರಿತ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಸುರ್ಜೇವಾಲಾ, "ಕೋಚಿಂಗ್ ಇನ್‌ಸ್ಟಿಟ್ಯೂಟ್‌ಗಳನ್ನು ಏಕೆ ನಿಯಂತ್ರಿಸಲಾಗುವುದಿಲ್ಲ?

ನವದೆಹಲಿ: ಶುಲ್ಕ ವ್ಯವಸ್ಥೆ, ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಸ್ಥಿತಿಗತಿಗಳು ಹಾಗೂ ಅವರ ಸುರಕ್ಷತೆಯನ್ನು ನಿಯಂತ್ರಿಸಲು ಕಾನೂನು ಜಾರಿಗೆ ತರುವಂತೆ ಕಾಂಗ್ರೆಸ್ ಸಂಸದ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಅವರು ಸೋಮವಾರ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದರು.

ಇಂದು ರಾಜ್ಯಸಭೆಯಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ದೆಹಲಿಯ ಕೋಚಿಂಗ್ ಇನ್‌ಸ್ಟಿಟ್ಯೂಟ್‌ನಲ್ಲಿ ವಿದ್ಯಾರ್ಥಿಗಳ ಸಾವಿನ ಕುರಿತ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಸುರ್ಜೇವಾಲಾ, "ಕೋಚಿಂಗ್ ಇನ್‌ಸ್ಟಿಟ್ಯೂಟ್‌ಗಳನ್ನು ಏಕೆ ನಿಯಂತ್ರಿಸಲಾಗುವುದಿಲ್ಲ? ಶಿಕ್ಷಣವನ್ನು ಬಲಪಡಿಸಲು ಸರ್ಕಾರ ಏನು ಮಾಡುತ್ತಿದೆ? " ಕೋಚಿಂಗ್ ಇನ್‌ಸ್ಟಿಟ್ಯೂಟ್‌ಗಳಲ್ಲಿ ಶುಲ್ಕದ ಬಗ್ಗೆ, ಶಿಕ್ಷಣದ ಸ್ಥಿತಿಗತಿ ಬಗ್ಗೆ, ಶಿಕ್ಷಣ ನೀಡುವ ಜನರ ಸ್ಥಿತಿ ಮತ್ತು ವಿದ್ಯಾರ್ಥಿಗಳ ಸುರಕ್ಷತೆಯ ಪರಿಸ್ಥಿತಿಗಳನ್ನು ನಿಯಂತ್ರಿಸಲು ಕಾನೂನು ಏಕೆ ಜಾರಿಗೆ ತರಬಾರದು? ಎಂದು ಪ್ರಶ್ನಿಸಿದರು.

"ಸರ್ಕಾರವು ಈ ಸಂಬಂಧ ಸಂಬಂಧಪಟ್ಟವರೊಂದಿಗೆ ಗಂಭೀರವಾಗಿ ಚರ್ಚಿಸಬೇಕು ಮತ್ತು ಈ ದೇಶದಲ್ಲಿ ಕೋಚಿಂಗ್ ಸಂಸ್ಥೆಗಳನ್ನು ನಿಯಂತ್ರಿಸಲು ಕಾನೂನು ಜಾರಿಗೆ ತರಬೇಕು ಎಂದು ನಾನು ನಿಮ್ಮ ಮೂಲಕ ಒತ್ತಾಯಿಸುತ್ತೇನೆ" ಎಂದು ಕಾಂಗ್ರೆಸ್ ಸಂಸದ ಹೇಳಿದರು.

ಕಳೆದ 10 ವರ್ಷಗಳಲ್ಲಿ ಶಿಕ್ಷಣ ವ್ಯಾಪಾರೀಕರಣದತ್ತ ಸಾಗುತ್ತಿದೆ ಎಂದ ಸುರ್ಜೆವಾಲಾ, 2014-15ರಲ್ಲಿ 2.88 ಲಕ್ಷ ಖಾಸಗಿ ಶಾಲೆಗಳಿದ್ದವು. 2020-21ರಲ್ಲಿ ಅವುಗಳ ಸಂಖ್ಯೆ 3.85 ಲಕ್ಷಕ್ಕೆ ಏರಿಕೆಯಾಗಿದೆ ಎಂದು ಹೇಳಿದರು.

ಶಾಲಾ, ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ 10 ಲಕ್ಷ ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಸಂಸದೀಯ ಸಮಿತಿ ಹೇಳಿದೆ. ಕ್ರೋನಿ ಕ್ಯಾಪಿಟಲಿಸಂಗೆ ಉತ್ತೇಜನ ನೀಡುವ ಬದಲು ಸಮಸ್ಯೆಗಳತ್ತ ಸರ್ಕಾರ ಗಮನ ಹರಿಸಬೇಕು ಎಂದು ಸಲಹೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT