ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಕಾಶ್ಮೀರ: ಸೋಪೋರ್‌ನಲ್ಲಿ ನಿಗೂಢ ಸ್ಫೋಟ, ನಾಲ್ವರು ಸಾವು

ಇಂದು ಮಧ್ಯಾಹ್ನ ಸೋಪೋರ್ ಪಟ್ಟಣದ ಶಾಯರ್ ಕಾಲೋನಿಯಲ್ಲಿ ಈ ನಿಗೂಢ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ನಾಲ್ವರಿಗೆ ಗಂಭೀರ ಗಾಯಗಳಾಗಿವೆ.

ಸಾಂದರ್ಭಿಕ ಚಿತ್ರ
Lingaraj Badiger
Updated On : 29 Jul 2024, 4:50 pm

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಸೋಪೋರ್ ಪಟ್ಟಣದಲ್ಲಿ ಸೋಮವಾರ ಸಂಭವಿಸಿದ ನಿಗೂಢ ಸ್ಫೋಟದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

"ಇಂದು ಮಧ್ಯಾಹ್ನ ಸೋಪೋರ್ ಪಟ್ಟಣದ ಶಾಯರ್ ಕಾಲೋನಿಯಲ್ಲಿ ಈ ನಿಗೂಢ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಅವರಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಿಸಿದರು. 4ನೇ ಗಾಯಾಳುವನ್ನು ಶ್ರೀನಗರದ ಸ್ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸುವ ವೇಳೆ ದಾರಿ ಮಧ್ಯದಲ್ಲಿಯೇ ಸಾವನ್ನಪಿದರು" ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಮೃತರನ್ನು ಸೋಪೋರ್ ಪ್ರದೇಶದ ನಿವಾಸಿಗಳಾದ ನಜೀರ್ ಅಹ್ಮದ್ ನದ್ರೂ, ಅಜಮ್ ಅಶ್ರಫ್ ಮಿರ್, ಆದಿಲ್ ರಶೀದ್ ಭಟ್ ಮತ್ತು ಅಬ್ದುಲ್ ರಶೀದ್ ಭಟ್ ಎಂದು ಗುರುತಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

Advertisement

Also Read

ಜಮ್ಮು-ಕಾಶ್ಮೀರ: ಕುಪ್ವಾರದಲ್ಲಿ ಎನ್ ಕೌಂಟರ್; ಓರ್ವ ಯೋಧ ಹುತಾತ್ಮ, ನಾಲ್ವರಿಗೆ ಗಾಯ

ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಸ್ಫೋಟದ ನಿಖರ ಸ್ವರೂಪವನ್ನು ಇನ್ನೂ ಪತ್ತೆ ಮಾಡಲಾಗುತ್ತಿದೆ ಎಂದು ಅಧಿಕಾರಿ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments