ರಾಹುಲ್ ಗಾಂಧಿ  
ದೇಶ

Kerala landslide: ರಕ್ಷಣಾ ಕಾರ್ಯ ತ್ವರಿತವಾಗಿ ನಡೆಸಲು ಮಾತನಾಡಿದ್ದೇನೆ- ರಾಹುಲ್ ಗಾಂಧಿ

ಕೇರಳ ಮುಖ್ಯಮಂತ್ರಿ ಮತ್ತು ವಯನಾಡ್ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅವರು ಭರವಸೆ ನೀಡಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ನವದೆಹಲಿ: ಕೇರಳದ ವಯನಾಡಿನಲ್ಲಿ ಭಾರೀ ಭೂಕುಸಿತ ಸಂಭವಿಸಿದ ಘಟನೆಗೆ ಕ್ಷೇತ್ರದ ಮಾಜಿ ಸಂಸದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂತಾಪ ವ್ಯಕ್ತಪಡಿಸಿದ್ದಾರೆ.

ವಯನಾಡಿನ ಮೆಪ್ಪಾಡಿ ಬಳಿ ಸಂಭವಿಸಿದ ಭಾರೀ ಭೂಕುಸಿತದಿಂದ ಉಂಟಾದ ಸಾವು-ನೋವು ಕಂಡು ನಾನು ತೀವ್ರವಾಗಿ ನೊಂದಿದ್ದೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿರುವ ದುಃಖಿತ ಕುಟುಂಬಗಳಿಗೆ ಸಂತಾಪಗಳು. ಭೂಕುಸಿತದಲ್ಲಿ ಸಿಲುಕಿದವರನ್ನು ಶೀಘ್ರವೇ ರಕ್ಷಿಸುವ ಕಾರ್ಯ ಸಾಂಗವಾಗಿ ನೆರವೇರಲಿ ಎಂದು ಆಶಿಸುತ್ತೇನೆ ಎಂದಿದ್ದಾರೆ.

ಕೇರಳ ಮುಖ್ಯಮಂತ್ರಿ ಮತ್ತು ವಯನಾಡ್ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅವರು ಭರವಸೆ ನೀಡಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಎಲ್ಲಾ ರಕ್ಷಣಾ ಏಜೆನ್ಸಿಗಳು ಸಮನ್ವಯವನ್ನು ಖಚಿತಪಡಿಸಿಕೊಳ್ಳಲು, ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲು ಮತ್ತು ಪರಿಹಾರ ಕಾರ್ಯಗಳಿಗೆ ಅಗತ್ಯವಿರುವ ಸಹಾಯ ಮಾಡಲು ನಾನು ಅವರಿಗೆ ವಿನಂತಿಸಿದ್ದೇನೆ. ಕೇಂದ್ರ ಸಚಿವರೊಂದಿಗೆ ಮಾತುಕತೆಯಾಡಿದ್ದು, ವಯನಾಡಿಗೆ ಸಾಧ್ಯವಿರುವ ಎಲ್ಲ ನೆರವು ನೀಡಲು ವಿನಂತಿ ಮಾಡಿದ್ದೇನೆ ಎಂದಿದ್ದಾರೆ.

ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳಲ್ಲಿ ಆಡಳಿತಕ್ಕೆ ಸಹಾಯ ಮಾಡುವಂತೆ ಅವರು ಎಲ್ಲಾ ಯುಡಿಎಫ್ ಕಾರ್ಯಕರ್ತರನ್ನು ಒತ್ತಾಯಿಸಿದರು.

ಮುಂಡಕ್ಕೈ, ಚೂರಲ್ಮಲಾ, ಅಟ್ಟಮಾಲ ಮತ್ತು ನೂಲ್ಪುಳ ಗ್ರಾಮಗಳು ಭೂಕುಸಿತದಿಂದ ಹಾನಿಗೊಳಗಾಗಿದ್ದು ಸಂಪರ್ಕ ಕಡಿತಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮಂಗಳೂರು: ಆಟೋಗೆ KSRTC ಬಸ್ ಡಿಕ್ಕಿ; ಭೀಕರ ಅಪಘಾತದಲ್ಲಿ ಮಗು ಸೇರಿ ಆರು ಸಾವು - Video

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

ಉಳಿಕೆ ಮತ್ತು ಹೂಡಿಕೆ ನಡುವೆ ಸಮತೋಲನವಿರಲಿ! (ಹಣಕ್ಲಾಸು)

Modi ma*****ch**: ರಾಹುಲ್ ಗಾಂಧಿ Voter Adhikar Yatra ವೇದಿಕೆಯಲ್ಲಿ ಅಶ್ಲೀಲ ನಿಂದನೆ, BJP ಕೆಂಡಾಮಂಡಲ!

Chinnaswamy stampede: 'ನಿಮ್ಮೊಂದಿಗೆ ನಾವಿದ್ದೇವೆ..' 3 ತಿಂಗಳ ಬಳಿಕ ಕೊನೆಗೂ ಮೌನ ಮುರಿದ RCB, ಹೇಳಿದ್ದೇನು?

SCROLL FOR NEXT