ರಾಹುಲ್ ಗಾಂಧಿ-ಪ್ರಿಯಾಂಕಾ ಗಾಂಧಿ(ಸಂಗ್ರಹ ಚಿತ್ರ) 
ದೇಶ

ಕೇರಳದಲ್ಲಿ ಭೀಕರ ಭೂಕುಸಿತ: ನಾಳೆ ವಯನಾಡಿಗೆ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಭೇಟಿ

ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಭೂಕುಸಿತ ಸಂಭವಿಸಿದ ವಯನಾಡಿಗೆ ನಾಳೆ ಭೇಟಿ ನೀಡಲಿದ್ದಾರೆ.

ವಯನಾಡ್: ಕೇರಳದ ವಯನಾಡಿನಲ್ಲಿ ಭೀಕರ ಭೂಕುಸಿತ ಸಂಭವಿಸಿದ್ದು, 66 ಮಂದಿ ಮೃತಪಟ್ಟಿದ್ದಾರೆ ಮತ್ತು ಸಾವಿನ ಸಂಖ್ಯೆ ಹೆಚ್ಚುತ್ತಲೆ ಇದೆ.

ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಭೂಕುಸಿತ ಸಂಭವಿಸಿದ ವಯನಾಡಿಗೆ ನಾಳೆ ಭೇಟಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಭಾರೀ ಭೂಕುಸಿತದಿಂದ ತೀವ್ರ ಹಾನಿಗೊಳಗಾಗಿರುವ ವಯನಾಡಿನಲ್ಲಿ ರಕ್ಷಣಾ ಕಾರ್ಯಾಚರಣೆ ಕುರಿತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ವಿರೋಧ ಪಕ್ಷದ ನಾಯಕ ಮತ್ತು ವಯನಾಡಿನ ಮಾಜಿ ಸಂಸದ ರಾಹುಲ್ ಗಾಂಧಿ ಅವರು ದೂರವಾಣಿ ಮೂಲಕ ಮಾತನಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇಂದು ಕೇರಳದ ವಯನಾಡ್‌ನಲ್ಲಿ ಭಾರೀ ಭೂಕುಸಿತ ಸಂಭವಿಸಿದ ನಂತರ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ ಅವರು, "ವಯನಾಡಿನ ಮೆಪ್ಪಾಡಿ ಬಳಿ ಸಂಭವಿಸಿದ ಭಾರೀ ಭೂಕುಸಿತದಿಂದ ನಾನು ತೀವ್ರವಾಗಿ ನೊಂದಿದ್ದೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿರುವ ದುಃಖಿತ ಕುಟುಂಬಗಳಿಗೆ ನನ್ನ ಸಂತಾಪಗಳು. ಇನ್ನೂ ಸಿಕ್ಕಿಬಿದ್ದವರನ್ನು ಶೀಘ್ರದಲ್ಲೇ ಸುರಕ್ಷಿತವಾಗಿ ಕರೆತರಲಾಗುವುದು ಎಂದು ನಾನು ಭಾವಿಸುತ್ತೇನೆ ಎಂದಿದ್ದಾರೆ.

"ಕೇರಳ ಮುಖ್ಯಮಂತ್ರಿ ಮತ್ತು ವಯನಾಡ್ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅವರು ಭರವಸೆ ನೀಡಿದ್ದಾರೆ ಎಂದು ರಾಹುಲ್ ಗಾಂಧಿ ಪೋಸ್ಟ್ ಮಾಡಿದ್ದಾರೆ.

ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ(ಸಂಘಟನೆ) ಕೆಸಿ ವೇಣುಗೋಪಾಲ್, "ಇದು ಒಗ್ಗಟ್ಟು ಪ್ರದರ್ಶಿಸುವ ಸಮಯ. ನಾವು ಒಟ್ಟಾಗಿ ಕೆಲಸ ಮಾಡಬೇಕು. ಗರಿಷ್ಠ ಜನರ ಜೀವ ರಕ್ಷಿಸಬೇಕು. ನಾವು ವಯನಾಡಿಗೆ ಹೋಗಲು ಯೋಜಿಸುತ್ತಿದ್ದೇವೆ, ಹೌದು, ಇಬ್ಬರೂ( ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ) ವಯನಾಡಿಗೆ ಭೇಟಿ ನೀಡಲು ಯೋಜಿಸುತ್ತಿದ್ದಾರೆ ಎಂದರು.

ರಾಹುಲ್ ಗಾಂಧಿ ಅವರು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ಮಾತನಾಡಿದ್ದು, ಅವರು ಸಂಪೂರ್ಣ ಸಹಕಾರ ನೀಡುವ ಭರವಸೆ ನೀಡಿದ್ದಾರೆ ಎಂದು ಕೆಸಿ ವೇಣುಗೋಪಾಲ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಶ್ನೆಪತ್ರಿಕೆ ಸೋರಿಕೆ,'ಚಂದಾ ಚೋರಿ' ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ; 'ವಂದೇ ಮಾತರಂ'ನ ಎರಡು ಪ್ಯಾರಾ ಮಾತ್ರ ಹಾಡಲು ನಿರ್ಣಯ!

illegal gold mine: ಮಧ್ಯ ಆಫ್ರಿಕಾದಲ್ಲಿ ಭಯಾನಕ ದುರಂತ, ಚಿನ್ನದ ಗಣಿಯಲ್ಲಿ ಕುಸಿತ,100 ಮಂದಿ ದುರ್ಮರಣ! Video

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ರೋಚಕ ಪಂದ್ಯದಲ್ಲಿ ಭಾರತ 5-3 ಗೋಲುಗಳಿಂದ ಪಾಕಿಸ್ತಾನವನ್ನು ಸೋಲಿಸಿ ವಿಶ್ವಕಪ್‌ನಿಂದ ಹೊರದೂಡಿದೆ!

ಬಾಲಿವುಡ್ ನಟ ಗೋವಿಂದಾ ದಾಂಪತ್ಯ ಕಿತ್ತಾಟದಲ್ಲಿ ಸ್ಫೋಟಕ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ ಸುನೀತಾ ಅಹುಜಾ!