ವಯನಾಡ್ ಭೂಕುಸಿತ 
ದೇಶ

ವಯನಾಡ್ ಭೂಕುಸಿತ: ರಕ್ಷಣಾ ಕಾರ್ಯಾಚರಣೆಗೆ ಎನ್‌ಡಿಆರ್‌ಎಫ್, ಸೇನಾ ಹೆಲಿಕಾಪ್ಟರ್‌ಗಳ ನೆರವು

ಕೇರಳದ ಗುಡ್ಡಗಾಡು ಪ್ರದೇಶವಾದ ವಯನಾಡ್ ಜಿಲ್ಲೆಯಲ್ಲಿ ಸಂಭವಿಸಿದ ವಿನಾಶಕಾರಿ ಭೂಕುಸಿತದಿಂದ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

ವಯನಾಡ್: ಕೇರಳದ ವಯನಾಡಿನಲ್ಲಿ ಭೀಕರ ಭೂಕುಸಿತ ಸಂಭವಿಸಿದ್ದು, ರಕ್ಷಣಾ ಕಾರ್ಯಾಚರಣೆಗಾಗಿ ಕೇರಳ ಸರ್ಕಾರ ಮಂಗಳವಾರ ಭಾರತೀಯ ಸೇನೆಯ ನೆರವು ಕೋರಿದೆ. ಇದರ ಬೆನ್ನಲ್ಲೇ, ಭಾರತೀಯ ಸೇನೆ, NDRF ತಂಡಗಳು, ಎರಡು ಸೇನಾ ಹೆಲಿಕಾಪ್ಟರ್‌ಗಳು ಮತ್ತು ಇತರ ರಕ್ಷಣಾ ತಂಡಗಳು ಮುಂಡಕ್ಕೈಗೆ ತೆರಳುತ್ತಿವೆ.

ಕೇರಳದ ಗುಡ್ಡಗಾಡು ಪ್ರದೇಶವಾದ ವಯನಾಡ್ ಜಿಲ್ಲೆಯಲ್ಲಿ ಸಂಭವಿಸಿದ ವಿನಾಶಕಾರಿ ಭೂಕುಸಿತದಿಂದ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

122 ಇನ್‌ಫೆಂಟ್ರಿ ಬೆಟಾಲಿಯನ್(ಟಿಎ) ಮದ್ರಾಸ್‌ನಿಂದ ಸೆಕೆಂಡ್-ಇನ್-ಕಮಾಂಡ್ ನೇತೃತ್ವದ 43 ಸೇನಾ ಸಿಬ್ಬಂದಿಗಳ ತಂಡ ರಕ್ಷಣಾ ಕಾರ್ಯಾಚರಣೆಗೆ ಸಹಾಯ ಮಾಡಲು ತೆರಳುತ್ತಿದೆ ಎಂದು ರಕ್ಷಣಾ ಇಲಾಖೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ತಿಳಿಸಿದ್ದಾರೆ.

ವೈದ್ಯಕೀಯ ಅಧಿಕಾರಿ, ಇಬ್ಬರು ಜೂನಿಯರ್ ಕಮಿಷನ್ಡ್ ಅಧಿಕಾರಿಗಳು(ಜೆಸಿಒಗಳು) ಮತ್ತು 40 ಸೈನಿಕರನ್ನು ಒಳಗೊಂಡ ತಂಡ ವಯನಾಡು ರಕ್ಷಣಾ ಕಾರ್ಯಾಚರಣೆಗೆ ನೆರವು ನೀಡಲು ಸಜ್ಜಾಗಿದೆ ಎಂದು ಅವರು ಹೇಳಿದ್ದಾರೆ.

NDRF ನ ಒಂದು ತಂಡವು ಅವಶೇಷಗಳನ್ನು ತೆರವುಗೊಳಿಸಲು ಮುಂಡಕ್ಕೈ ಕಡೆಗೆ ತೆರಳುತ್ತಿದೆ.

ಕೊಲ್ಲಂ, ಅರಕ್ಕೋಣಂ ಮತ್ತು ಬೆಂಗಳೂರಿನಿಂದ ಇನ್ನೂ ಮೂರು ಎನ್‌ಡಿಆರ್‌ಎಫ್ ತಂಡಗಳು ಸಹ ತೆರಳುತ್ತಿವೆ ಎಂದು ಕೇರಳ ಕಂದಾಯ ಕೆ ರಾಜನ್ ಅವರು ತಿಳಿಸಿದ್ದಾರೆ.

"ಮುಂಡಕ್ಕೈ ಪರ್ವತದ ತಪ್ಪಲಿನಲ್ಲಿದೆ. ಪ್ರವಾಹದಿಂದ ಸೇತುವೆ ಕುಸಿದಿದ್ದು, ಈ ಪ್ರದೇಶ ಸಂಪೂರ್ಣವಾಗಿ ಸಂಪರ್ಕ ಕಡಿತಗೊಂಡಿದೆ. ಈಗ ರಕ್ಷಣಾ ತಂಡ ತೆರಳಲು ಅನುಕೂಲವಾಗುವಂತೆ ತಾತ್ಕಾಲಿಕ ಸೇತುವೆ ನಿರ್ಮಿಸುವ ಪ್ರಯತ್ನಗಳು ನಡೆಯುತ್ತಿವೆ" ಎಂದು ರಾಜನ್ ಹೇಳಿದ್ದಾರೆ.

ಹಾನಿಯ ಪ್ರಮಾಣವನ್ನು ಇನ್ನೂ ನಿರ್ಧರಿಸಲಾಗಿಲ್ಲ. ಮಧ್ಯಾಹ್ನದ ವೇಳೆಗೆ ಇನ್ನೂ ಮೂರು ಎನ್ ಡಿಆರ್ ಎಫ್ ತಂಡಗಳು ಆಗಮಿಸುತ್ತವೆ. ಸೇನೆಯ ಎರಡು ಹೆಲಿಕಾಪ್ಟರ್‌ಗಳು ಕೂಡ ಶೀಘ್ರದಲ್ಲೇ ತಲುಪಲಿವೆ" ಎಂದು ರಾಜನ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT