ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

Kerala landslide: ವಯನಾಡ್ ಭೂಕುಸಿತ ದುರಂತ: ಮೃತರ ಕುಟುಂಬಸ್ಥರಿಗೆ ಪ್ರಧಾನಿ ಪರಿಹಾರ ಘೋಷಣೆ

ಪ್ರಧಾನ ಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ
Sumana Upadhyaya
Updated On : 30 Jul 2024, 10:28 am

ವಯನಾಡ್: ಕೇರಳದಲ್ಲಿ ವಯನಾಡಿನಲ್ಲಿ ಹಲವು ಬಾರಿ ಭೂಕುಸಿತ ಉಂಟಾಗಿ ಇದುವರೆಗೆ 30 ಮಂದಿ ಮೃತಪಟ್ಟಿದ್ದು ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ. ಈ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಮುಖ್ಯಮಂತ್ರಿ ಪಣರಾಯಿ ವಿಜಯ್​ ಅವರ ಬಳಿ ಮಾತನಾಡಿದ್ದು, ಕೇಂದ್ರದಿಂದ ಸಾಧ್ಯವಾಗುವ ಎಲ್ಲಾ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.

ಪ್ರಧಾನ ಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ವಯನಾಡಿನ ಕೆಲವು ಭಾಗಗಳಲ್ಲಿ ಭೂಕುಸಿತದಿಂದ ಜನರು ಸಂಕಷ್ಟಕ್ಕೀಡಾಗಿದ್ದಾರೆ, ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ, ಗಾಯಗೊಂಡವರು ಬೇಗ ಗುಣಮುಖರಾಗಲಿ. ಭೂಕುಸಿತದ ಕುರಿತು ಪಿಣರಾಯಿ ವಿಜಯ್ ಅವರೊಂದಿಗೆ ಮಾತನಾಡಿದ್ದೇನೆ ಎಲ್ಲಾ ನೆರವನ್ನು ನೀಡಲು ಕೇಂದ್ರ ಸಿದ್ಧವಿದೆ ಎಂದು ಹೇಳಿದ್ದಾರೆ.

Advertisement

Advertisement

ಪ್ರಧಾನಿ ಮೋದಿ ಸುರೇಶ್​ ಗೋಪಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರ ಬಳಿಯೂ ಮಾತನಾಡಿದ್ದು, ಬಿಜೆಪಿ ಕಾರ್ಯಕರ್ತರನ್ನು ಕಳುಹಿಸಿ ಅವರಿಗೆ ಬೇಕಾದ ನೆರವು ಒದಗಿಸುವಂತೆ ಕೇಳಿದ್ದಾರೆ. ಸಚಿವ ಜಾರ್ಜ್​ ಅವರ ಬಳಿಯೂ ಮಾತನಾಡಿದ್ದಾರೆ.

ರಾಷ್ಟ್ರಪತಿಗಳ ಸಂತಾಪ: ವಯನಾಡಿನಲ್ಲಿ ಭೂಕುಸಿತದಿಂದ ಪ್ರಾಣ ಕಳೆದುಕೊಂಡವರಿಗೆ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಸಂತಾಪ ಸೂಚಿಸಿದ್ದಾರೆ. ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.

ಗೃಹ ಸಚಿವ ಅಮಿತ್ ಶಾ ಸೇರಿದಂತೆ ಕೇಂದ್ರದ ಹಲವು ನಾಯಕರು, ಲೋಕಸಭೆ ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ ಘಟನೆ ಬಗ್ಗೆ ಸಂತಾಪ ಸೂಚಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments