ಬೃಹತ್ ಪ್ರಮಾಣದ ಭೂಕುಸಿತ  
ದೇಶ

Wayanad landslides: ವಯನಾಡ್ ಭೂಕುಸಿತಕ್ಕೆ ಮೃತಪಟ್ಟವರ ಸಂಖ್ಯೆ 151ಕ್ಕೆ ಏರಿಕೆ, 211 ಮಂದಿ ನಾಪತ್ತೆ

ನಿನ್ನೆ ಮಂಗಳವಾರ ನಸುಕಿನ ಜಾವ ವಯನಾಡ್ ಜಿಲ್ಲೆಯ ಮುಂಡಕ್ಕೈ, ಚೂರಲ್ಮಲಾ, ಅಟ್ಟಮಾಲ ಮತ್ತು ನೂಲ್ಪುಳ ಗ್ರಾಮಗಳಲ್ಲಿ ಭಾರಿ ಭೂಕುಸಿತ ಸಂಭವಿಸಿತು.

ವಯನಾಡ್: ಕೇರಳದ ವಯನಾಡ್‌ನಲ್ಲಿ ಸಂಭವಿಸಿದ ಸರಣಿ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 151 ಕ್ಕೆ ಏರಿಕೆಯಾಗಿದೆ.

211 ಮಂದಿ ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ, ಸಾವಿರಾರು ಮಂದಿ ಗಾಯಗೊಂಡಿದ್ದು ಬದುಕುಳಿದವರು ಸ್ಥಳಾಂತರಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ನಿನ್ನೆ ಮಂಗಳವಾರ ನಸುಕಿನ ಜಾವ ವಯನಾಡ್ ಜಿಲ್ಲೆಯ ಮುಂಡಕ್ಕೈ, ಚೂರಲ್ಮಲಾ, ಅಟ್ಟಮಾಲ ಮತ್ತು ನೂಲ್ಪುಳ ಗ್ರಾಮಗಳಲ್ಲಿ ಭಾರಿ ಭೂಕುಸಿತ ಸಂಭವಿಸಿತು. ನೂರಾರು ಮನೆಗಳು ಮತ್ತು ಅನೇಕ ಕಡೆಯಲ್ಲಿ ಇಡೀ ಕುಟುಂಬ ಸದಸ್ಯರೇ ನೀರಿನಲ್ಲಿ ಕೊಚ್ಚಿಹೋಗಿದ್ದಾರೆ. ಹಲವಾರು ಮನೆಗಳು ಧ್ವಂಸಗೊಂಡವು, ಜಲಮೂಲಗಳು ತುಂಬಿತುಳುಕುತ್ತಿವೆ. ಮರಗಳು ಬೇರುಸಮೇತ ಬಿದ್ದು ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಯಿತು.

ವಯನಾಡ್, ಇಡುಕ್ಕಿ, ತ್ರಿಶ್ಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಝಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಮುನ್ಸೂಚನೆಯೊಂದಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

SCROLL FOR NEXT