ರಾಹುಲ್, ಪ್ರಿಯಾಂಕಾ ಗಾಂಧಿ ಸಾಂದರ್ಭಿಕ ಚಿತ್ರ 
ದೇಶ

ವಿನಾಶಕಾರಿ ಭೂಕುಸಿತ: ನಾಳೆ ವಯನಾಡಿಗೆ ರಾಹುಲ್, ಪ್ರಿಯಾಂಕಾ ಗಾಂಧಿ ಭೇಟಿ

ಕೇರಳದ ವಯನಾಡಿನಲ್ಲಿ ಸಂಭವಿಸಿರುವ ವಿನಾಶಕಾರಿ ಭೂ ಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ ಬುಧವಾರ 170ಕ್ಕೆ ಏರಿಕೆಯಾಗಿದೆ. 225 ಜನರು ನಾಪತ್ತೆ ಕುರಿತು ವರದಿಯಾಗಿದೆ.

ವಯನಾಡು: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಗುರುವಾರ ಭೂಕುಸಿತ ಪೀಡಿತ ವಯನಾಡ್‌ಗೆ ನಾಳೆ ಭೇಟಿ ನೀಡಲಿದ್ದು, ಪ್ರಕೃತಿ ವಿಕೋಪದಿಂದ ಹಾನಿಗೊಳಗಾದ ಹಲವಾರು ಕುಟುಂಬಗಳನ್ನು ಭೇಟಿ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರು ಬುಧವಾರ ಬೆಳಿಗ್ಗೆ ವಯನಾಡ್‌ಗೆ ಭೇಟಿ ನೀಡಬೇಕಿತ್ತು ಆದರೆ ನಿರಂತರ ಮಳೆ ಮತ್ತು ಪ್ರತಿಕೂಲ ಹವಾಮಾನದಿಂದಾಗಿ ಬರುವುದು ಬೇಡ ಎಂದು ಅಧಿಕಾರಿಗಳು ತಿಳಿಸಿದ್ದರಿಂದ ಅವರು ಭೇಟಿಯನ್ನು ಮುಂದೂಡಿದ್ದಾರೆ.

ಇವರಿಬ್ಬರೂ ನಾಳೆ ಮೆಪ್ಪಾಡಿಯ ಸರ್ಕಾರಿ ಪ್ರೌಢ ಶಾಲೆ ಮತ್ತು ಸೇಂಟ್ ಜೋಸೆಫ್ ಶಾಲೆಯಲ್ಲಿರುವ ಪರಿಹಾರ ಶಿಬಿರಗಳಿಗೆ ಭೇಟಿ ನೀಡಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಮೆಪ್ಪಾಡಿಯ ಡಾ ಮೂಪನ್ಸ್ ಮೆಡಿಕಲ್ ಕಾಲೇಜಿಗೂ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ.

ಕೇರಳದ ವಯನಾಡಿನಲ್ಲಿ ಸಂಭವಿಸಿರುವ ವಿನಾಶಕಾರಿ ಭೂ ಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ ಬುಧವಾರ 170ಕ್ಕೆ ಏರಿಕೆಯಾಗಿದೆ. 225 ಜನರು ನಾಪತ್ತೆ ಕುರಿತು ವರದಿಯಾಗಿದೆ. ನೂರಾರು ಜನರು ಗಾಯಗೊಂಡಿದ್ದು, ಸಾವಿರಾರು ಜನರನ್ನು ಬೇರೆಡೆ ಸ್ಥಳಾಂತರಿಸಲಾಗಿದೆ. 300 ಕ್ಕೂ ಹೆಚ್ಚು ಮನೆಗಳು ಸಂಪೂರ್ಣವಾಗಿ ನಾಶವಾಗಿರುವುದಾಗಿ ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೆಲವರಿಗೆ ಜೀರ್ಣಿಸಿಕೊಳ್ಳಲು ಕಷ್ಟವಾಗಿದೆ: 7.8ರಷ್ಟು GDP ಬೆಳವಣಿಗೆಯ ಟೀಕಾಕಾರರನ್ನು ಖಂಡಿಸಿದ ಪ್ರಧಾನಿ ಮೋದಿ!

ಏಷ್ಯಾಕಪ್ 2026: ಪಾಕಿಸ್ತಾನ ನೀಡಿದ ಅಲ್ಪಮೊತ್ತದ ರನ್ ಬೆನ್ನಟ್ಟಿ ಗೆದ್ದ ಭಾರತ

ತುಂಗಭದ್ರಾ ಜಲಾಶಯದ ಹೂಳು ತೆರವು ಸಾಧ್ಯವಿಲ್ಲದಿದ್ದರೆ ಸಮಾನಾಂತರ ಜಲಾಶಯ ನಿರ್ಮಿಸಿ: ರಾಜ್ಯ ಸರ್ಕಾರಕ್ಕೆ ಬಿ.ವೈ. ವಿಜಯೇಂದ್ರ ಆಗ್ರಹ!

ಏಷ್ಯಾಕಪ್ 2026: 3 ಡಕೌಟ್, ಪಾಕಿಸ್ತಾನವನ್ನು 55 ರನ್‌ಗಳಿಗೆ ಆಲೌಟ್ ಮಾಡಿದ ಭಾರತ, ಕಳಪೆ ದಾಖಲೆ ಸೃಷ್ಟಿ!

'ದುಡ್ಡಿನ ಧಿಮಾಕು.. ಕಾರಿಗೇ ಬೆಂಕಿ ಹಾಕಿ ಬಾ ಅಂತ ಹೇಳಿದ್ದೆ': ನಟ 'ಯಶ್' ತಾಯಿ ಪುಷ್ಪ ಅರುಣ್ ಕುಮಾರ್!