ಎಂಕೆ ಸ್ಟಾಲಿನ್ - ರಾಹುಲ್ ಗಾಂಧಿ 
ದೇಶ

ಇಂಡಿಯಾ ಬ್ಲಾಕ್ ಗೆಲುವಿನ ಸನಿಹದಲ್ಲಿದೆ, ಜೂನ್ 4 ರಂದು ಹೊಸ ಯುಗ ಆರಂಭ: ಎಂಕೆ ಸ್ಟಾಲಿನ್

ಲೋಕಸಭೆ ಚುನಾವಣೆಯ ಕೊನೆಯ ಹಂತದ ಮತದಾನ ಶನಿವಾರ ನಡೆಯುತ್ತಿದೆ. ಸಂಜೆ ವೇಳೆಗೆ ಮತದಾನ ಮುಕ್ತಾಯಗೊಳ್ಳುವುದರೊಂದಿಗೆ ಏಳು ಹಂತಗಳ 2024ರ ಸಾರ್ವತ್ರಿಕ ಚುನಾವಣೆಗೆ ಅಧಿಕೃತವಾಗಿ ತೆರೆ.

ಚೆನ್ನೈ: ಲೋಕಸಭೆ ಚುನಾವಣೆಯ ಕೊನೆಯ ಹಂತದ ಮತದಾನ ಶನಿವಾರ ನಡೆಯುತ್ತಿದೆ. ಸಂಜೆ ವೇಳೆಗೆ ಮತದಾನ ಮುಕ್ತಾಯಗೊಳ್ಳುವುದರೊಂದಿಗೆ ಏಳು ಹಂತಗಳ 2024ರ ಸಾರ್ವತ್ರಿಕ ಚುನಾವಣೆಗೆ ಅಧಿಕೃತವಾಗಿ ತೆರೆ ಬಿಳಲಿದೆ. ಜೂನ್ 4 ರಂದು ಫಲಿತಾಂಶ ಪ್ರಕಟವಾಗಲಿದೆ.

ಬಿಜೆಪಿ ಮತ್ತು ಪ್ರತಿಪಕ್ಷಗಳ ಮೈತ್ರಿಕೂಟ ಇಂಡಿಯಾ ಬಣಗಳೆರಡೂ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸುವ ವಿಶ್ವಾಸದಲ್ಲಿವೆ. ಆದರೆ ಅಂತಿಮವಾಗಿ ಜನರ ತೀರ್ಪು ಯಾರ ಪರ ಎಂಬುದು ಜೂನ್ 4 ರಂದು ತಿಳಿಯಲಿದೆ.

ಏತನ್ಮಧ್ಯೆ, ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಜೂನ್ 4 ಇಂಡಿಯಾದ ಹೊಸ ಯುಗದ ಆರಂಭವನ್ನು ಸೂಚಿಸುತ್ತಿದೆ ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಸಂದೇಶದಲ್ಲಿ, ಸ್ಟಾಲಿನ್ ಅವರು ಮುಂದಿನ ಕ್ರಮದ ಕುರಿತು ಇಂಡಿಯಾ ಬ್ಲಾಕ್ ನಾಯಕರು ಇಂದು ಸಭೆ ನಡೆಸುತ್ತಿದ್ದು, ಡಿಎಂಕೆ ಪರವಾಗಿ ಪಕ್ಷದ ಖಜಾಂಚಿ ಮತ್ತು ಡಿಎಂಕೆ ಸಂಸದೀಯ ಪಕ್ಷದ ನಾಯಕ ಟಿಆರ್ ಬಾಲು ಅವರು ಭಾಗವಹಿಸುತ್ತಿದ್ದಾರೆ ಎಂದು ಸ್ಟಾಲಿನ್ ಹೇಳಿದರು.

"ಇಂಡಿಯಾ ಬ್ಲಾಕ್ ಗೆಲುವಿನ ಸನಿಹದಲ್ಲಿದೆ" ಎಂದು ಸ್ಟಾಲಿನ್ ಹೇಳಿದ್ದಾರೆ.

ಬಿಜೆಪಿಯ ಫ್ಯಾಸಿಸ್ಟ್ ಆಡಳಿತದ ಹತ್ತು ವರ್ಷಗಳ ಆಡಳಿತವನ್ನು ಕೊನೆಗೊಳಿಸುವುದು ವಿರೋಧ ಪಕ್ಷಗಳ ಮೈತ್ರಿಕೂಟ ರಚನೆಯ ಹಿಂದಿನ ಗುರಿಯಾಗಿದೆ. ಇದನ್ನು ಸಾಧಿಸಲಾಗಿದೆ ಎಂದು ತೋರುತ್ತಿದೆ. ಬಿಜೆಪಿಗೆ ಸವಾಲು ಹಾಕಲು ಯಾವುದೇ ವಿರೋಧವಿಲ್ಲ ಎಂದು ಭಾವಿಸಿದ್ದ ಬಿಜೆಪಿ ವಿರುದ್ಧ ಪ್ರಜಾಸತ್ತಾತ್ಮಕ ಶಕ್ತಿಗಳ ಅಸಾಧಾರಣ ಒಕ್ಕೂಟವನ್ನು ಒಟ್ಟುಗೂಡಿಸುವಲ್ಲಿ ಪ್ರತಿಪಕ್ಷಗಳು ಯಶಸ್ವಿಯಾಗಿದ್ದವು. ಈ ಮೈತ್ರಿ ಈಗ ದೇಶದ ಜನತೆಯಲ್ಲಿ ಭರವಸೆ ಮೂಡಿಸಿದೆ ಎಂದು ತಮಿಳುನಾಡು ಸಿಎಂ ಹೇಳಿದ್ದಾರೆ.

ಅವಿರತ ಪ್ರಚಾರದ ಮೂಲಕ ಇಂಡಿಯಾ ಬಣದ ನಾಯಕರು ಸಾರ್ವಜನಿಕ ವಲಯದಲ್ಲಿ ಬಿಜೆಪಿ ಸೃಷ್ಟಿಸಿದ್ದ ಸುಳ್ಳಿನ ಕಂತೆಯನ್ನು ಕಿತ್ತೊಗೆದಿದ್ದಾರೆ. ಮತ ಎಣಿಕೆಗೆ ಇನ್ನು ಕೇವಲ ಮೂರು ದಿನಗಳು ಬಾಕಿಯಿದ್ದು, ಮತ ಎಣಿಕೆ ಪ್ರಕ್ರಿಯೆಯಲ್ಲಿ ಕಟ್ಟೆಚ್ಚರ ವಹಿಸುವಂತೆ ಸ್ಟಾಲಿನ್ ಅವರು ಕಾರ್ಯಕರ್ತರಿಗೆ ಸೂಚಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT