ಮತಗಟ್ಟೆ 
ದೇಶ

ಲೋಕಸಭಾ ಚುನಾವಣೆ 2024: ಕೊನೆ ಹಂತದ ಮತದಾನ ಪ್ರಗತಿಯಲ್ಲಿ, ಪ್ರಧಾನಿ ಮೋದಿ ಸೇರಿ ಘಟಾನುಘಟಿಗಳ ಸ್ಪರ್ಧೆ

ಲೋಕಸಭಾ ಚುನಾವಣೆಯ 7 ಮತ್ತು ಅಂತಿಮ ಹಂತದ ಮತದಾನ ಪ್ರಕ್ರಿಯೆ ಪ್ರಗತಿಯಲ್ಲಿದ್ದು, 8 ರಾಜ್ಯಗಳು/ಕೇಂದ್ರಾಳಿತ ಪ್ರದೇಶಗಳ 57 ಲೋಕಸಭಾ ಕ್ಷೇತ್ರದಲ್ಲಿ 904 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ.

ನವದೆಹಲಿ: ಲೋಕಸಭಾ ಚುನಾವಣೆಯ 7 ಮತ್ತು ಅಂತಿಮ ಹಂತದ ಮತದಾನ ಪ್ರಕ್ರಿಯೆ ಪ್ರಗತಿಯಲ್ಲಿದ್ದು, 8 ರಾಜ್ಯಗಳು/ಕೇಂದ್ರಾಳಿತ ಪ್ರದೇಶಗಳ 57 ಲೋಕಸಭಾ ಕ್ಷೇತ್ರದಲ್ಲಿ 904 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ.

ಬಿಹಾರ, ಚಂಡೀಗಢ, ಹಿಮಾಚಲ ಪ್ರದೇಶ, ಜಾರ್ಖಂಡ್, ಒಡಿಶಾ, ಪಂಜಾಬ್, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳ ಸೇರಿದಂತೆ 7 ರಾಜ್ಯಗಳು, ಒಂದು ಕೇಂದ್ರಾಡಳಿತ ಪ್ರದೇಶಗಳ 57 ಲೋಕಸಭೆ ಕ್ಷೇತ್ರಗಳಲ್ಲಿ 2024ರ ಲೋಕಸಭೆ ಚುನಾವಣೆಯ ಏಳನೇ ಹಾಗೂ ಅಂತಿಮ ಹಂತದ ಮತದಾನ ಇಂದು (ಶನಿವಾರ) ಬೆಳಗ್ಗೆ 7 ಗಂಟೆಯಿಂದ ಪ್ರಾರಂಭವಾಗಿದೆ.

ಪಂಜಾಬ್‌ನ ಎಲ್ಲಾ 13 ಲೋಕಸಭಾ ಕ್ಷೇತ್ರಗಳು, ಉತ್ತರಪ್ರದೇಶದ 13 ಕ್ಷೇತ್ರಗಳು, ಪಶ್ಚಿಮ ಬಂಗಾಳ 09, ಬಿಹಾರ 08, ಒಡಿಶಾ 06, ಹಿಮಾಚಲ ಪ್ರದೇಶ04, ಜಾರ್ಖಂಡ್ 03, ಕೇಂದ್ರಾಡಳಿ ಪ್ರದೇಶದ ಚಂಡೀಗಢ 01 ಕ್ಷೇತ್ರಕ್ಕೆ ಇಂದು ಮತದಾನ ನಡೆಯುತ್ತಿದೆ. ಇದಲ್ಲದೆ ಒಡಿಶಾ ವಿಧಾನಸಭೆ ಚುನಾವಣೆಯ ಬಾಕಿಯಿರುವ 42 ಕ್ಷೇತ್ರಗಳು ಮತ್ತು ಹಿಮಾಚಲದ ಪ್ರದೇಶ 06 ವಿಧಾನಸಭಾ ಕ್ಷೇತ್ರಗಳಿಗೂ ಉಪಚುನಾವಣೆ ನಡೆಯುತ್ತಿದೆ.

ಒಟ್ಟು 7 ಹಂತಗಳಲ್ಲಿ 543 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 19ರಂದು ಶುರುವಾದ ಮತದಾನದ ಉತ್ಸವ 59 ದಿನಗಳನ್ನು ಪೂರೈಸಿದೆ. ಈಗಾಗಲೇ 6 ಹಂತಗಳ ಮತದಾನ ಯಶಸ್ವಿಯಾಗಿ ಮುಗಿದಿದ್ದು, ಇಂದು 7ನೇ ಹಾಗೂ ಕಟ್ಟ ಕಡೆಯ ಹಂತದ ಮತದಾನ ನಡೆಯುತ್ತಿದೆ.

ಉತ್ತರ ಪ್ರದೇಶದ ಮಹಾರಾಜಗಂಜ್ ಕ್ಷೇತ್ರದಿಂದ ಆರು ಬಾರಿಯ ಸಂಸದ ಹಾಗೂ ಹಣಕಾಸು ಖಾತೆ ರಾಜ್ಯ ಸಚಿವ ಮಂಕಜ್ ಚೌಧರಿ ಬಿಜೆಪಿ ಅಭ್ಯರ್ಥಿಯಾಗಿದ್ದು, ಕಾಂಗ್ರೆಸ್ ನ ವೀರೇಂದ್ರ ಚೌಧರಿ ವಿರುದ್ಧ ಕಣದಲ್ಲಿದ್ದಾರೆ. ಇಲ್ಲಿ ಬಿಎಸ್ ಪಿ ಯ ಮೌಸಮೆ ಆಲಮ್ ಕೂಡಾ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಗೋರಖ್ ಪುರದಲ್ಲಿ ನಟ ರವಿ ಕಿಶಣ್ ಅವರನ್ನು ಬಿಜೆಪಿ ಕಣಕ್ಕೆ ಇಳಿಸಿದ್ದು, ಸಮಾಜವಾದಿ ಪಕ್ಷದ ಕಾಜಲ್ ನಿಶದ್ ವಿರುದ್ಧ ಸೆಣೆಸುತ್ತಿದ್ದಾರೆ.

ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ ವಿಕ್ರಮಾದಿತ್ಯ ಸಿಂಗ್ ವಿರುದ್ಧ ಚಿತ್ರನಟಿ ಕಂಗನಾ ರಣಾವತ್ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಹಮೀರ್ ಪುರ ಕ್ಷೇತ್ರದಿಂದ ಕೇಂದ್ರ ಸಚಿವ ಅನುರಾಗ್ ಠಾಕೂರ್ ಬಿಜೆಪಿ ಅಭ್ಯರ್ಥಿಯಾಗಿದ್ದು, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾರ್ಜಿಯವರ ಅಳಿಯ ಅಭಿಷೇಕ್ ಬ್ಯಾನರ್ಜಿ ಡೈಮಂಡ್ ಹಾರ್ಬರ್ ಕ್ಷೇತ್ರದಿಂದ ಕಣಕ್ಕೆ ಧುಮುಕಿದ್ದಾರೆ.

ಪ್ರಮುಖ ಕ್ಷೇತ್ರ, ಅಭ್ಯರ್ಥಿಗಳು...

ನರೇಂದ್ರ ಮೋದಿ, ಅಜಯ್‌ ರಾಯ್‌ (ವಾರಾಣಸಿ), ಅನುರಾಗ್‌ ಸಿಂಗ್‌ ಠಾಕೂರ್‌ (ಹಮೀರ್‌ಪುರ), ಕಂಗನಾ ರಣಾವತ್‌, ವಿಕ್ರಮಾದಿತ್ಯ ಸಿಂಗ್‌ (ಮಂಡಿ), ಮನೀಶ್‌ ತಿವಾರಿ (ಚಂಡೀಗಢ), ರವಿಶಂಕರ್‌ ಪ್ರಸಾದ್‌ (ಪಟನಾ ಸಾಹಿಬ್‌), ಅಭಿಷೇಕ್‌ ಬ್ಯಾನರ್ಜಿ (ಡೈಮಂಡ್‌ ಹಾರ್ಬರ್‌), ಮೀಸಾ ಭಾರ್ತಿ (ಪಾಟಲಿಪುತ್ರ).

ಸಂಜೆ ಎಕ್ಸಿಟ್‌ ಪೋಲ್‌

ಇಂದು ಸಂಜೆ 6 ಗಂಟೆಗೆ ಮತದಾನ ಮುಗಿಯಲಿದ್ದು, 6.30ರ ಸುಮಾರಿಗೆ ಮತಗಟ್ಟೆ ಸಮೀಕ್ಷೆಗಳು ಪ್ರಕಟವಾಗಲಿವೆ. ಹಾಗಾಗಿ, ರಾಜಕೀಯ ನಾಯಕರು, ತಜ್ಞರು, ನಾಗರಿಕರು ಸೇರಿದಂತೆ ಎಲ್ಲರ ಗಮನ ಈಗ ಎಕ್ಸಿಟ್ ಪೋಲ್‌ಗಳತ್ತ ನೆಟ್ಟಿದೆ.

ಜೂನ್‌ 1ರಂದು ಸಂಜೆ 6.30ರ ಹೊತ್ತಿಗೆ ವಿವಿಧ ಮಾಧ್ಯಮಗಳ ಎಕ್ಸಿಟ್‌ ಪೋಲ್‌ ಪ್ರಕಟವಾಗಲಿದೆ. ಕಳೆದ ಅನೇಕ ವರ್ಷಗಳಲ್ಲಿ ಎಕ್ಸಿಟ್ ಪೋಲ್‌ಗಳು ಮತದಾರರ ಚಿತ್ತವನ್ನು ಅಳೆಯುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಚುನಾವಣಾ ಆಯೋಗದ ಅಧಿಕೃತ ಘೋಷಣೆಯ ಮೊದಲೇ ಚುನಾವಣಾ ಫಲಿತಾಂಶದ ನಿಖರವಾದ ವಿವರಣೆ ಲಭ್ಯವಾಗುತ್ತದೆ.

ಎಕ್ಸಿಟ್ ಪೋಲ್ ಜನರ ಮನಸ್ಥಿತಿಯನ್ನು ಹೇಳುತ್ತವೆ. ಆದರೆ, ಅದರ ನಿಖರತೆಯು ಭೌಗೋಳಿಕ ವ್ಯಾಪ್ತಿ ಮತ್ತು ಮತದಾರರ ನಿಷ್ಕಪಟತೆಯಂತಹ ಬಹು ಅಂಶಗಳ ಮೇಲೆ ಅವಲಂಬಿತವಾಗಿರುತ್ತದೆ. ಸಾಮಾನ್ಯವಾಗಿ ಜನರು ಗುಂಪುಗಳಲ್ಲಿ ಮತ ಚಲಾಯಿಸಿದಾಗ ಗಾಳಿ ಯಾವ ಕಡೆಗೆ ಬೀಸುತ್ತಿದೆ ಎಂಬುದನ್ನು ಅಳೆಯುವುದು ಸುಲಭ. ಆದರೆ, ಒಂದು ಭಾಗದ ಜನರು ತಮ್ಮ ಒಲವನ್ನು ತೋರಿಸದಿರಲು ನಿರ್ಧರಿಸಿದರೆ ಅಲ್ಲಿಯೇ ಸಮೀಕ್ಷೆದಾರರ ಸಂಖ್ಯೆಗಳು ತಪ್ಪಾಗಿ ಬಿಡುತ್ತದೆ. ಎಕ್ಸಿಟ್ ಪೋಲ್‌ಗಳು ಕೆಲವೊಮ್ಮೆ ಸರಿ ಮತ್ತು ಕೆಲವೊಮ್ಮೆ ತಪ್ಪಾಗುವ ಸಾಧ್ಯತೆಗಳಿವೆ.

ಹೆಚ್ಚಿನ ಸಂಖ್ಯೆಯಲ್ಲಿ ಪ್ರಜಾಪ್ರಭುತ್ವ ಹಬ್ಬದಲ್ಲಿ ಭಾಗಿಯಾಗಿ: ಪ್ರಧಾನಿ ಮೋದಿ

ಲೋಕಸಭೆ ಚುನಾವಣೆಯ ಕೊನೆಯ ಹಂತದ ಮತದಾನ ಇಂದು ನಡೆಯಲಿದೆ. ಪ್ರಜಾಪ್ರಭುತ್ವದ ಈ ಮಹಾನ್ ಹಬ್ಬದಲ್ಲಿ ಎಲ್ಲಾ ಮತದಾರರು ಉತ್ಸಾಹದಿಂದ ಭಾಗವಹಿಸಬೇಕೆಂದು ನಾನು ವಿನಂತಿಸುತ್ತೇನೆಂದು ಪ್ರಧಾನಿ ಮೋದಿಯವರು ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಲೋಕಸಭೆ ಚುನಾವಣೆಯ ಕೊನೆಯ ಹಂತದ ಮತದಾನ ಇಂದು ನಡೆಯಲಿದೆ. ಪ್ರಜಾಪ್ರಭುತ್ವದ ಈ ಮಹಾನ್ ಹಬ್ಬದಲ್ಲಿ ಎಲ್ಲಾ ಮತದಾರರು ಉತ್ಸಾಹದಿಂದ ಭಾಗವಹಿಸಬೇಕೆಂದು ನಾನು ವಿನಂತಿಸುತ್ತೇನೆ. ನಮ್ಮ ಯುವಕರು ಮತ್ತು ಮಹಿಳಾ ಮತದಾರರು ತಮ್ಮ ಮತ ಚಲಾಯಿಸಲು ದಾಖಲೆ ಸಂಖ್ಯೆಯಲ್ಲಿ ಮುಂದೆ ಬರುತ್ತಾರೆ ಎಂಬ ವಿಶ್ವಾಸ ನನಗಿದೆ. ನಾವು ಒಗ್ಗಟ್ಟಿನಿಂದ ನಮ್ಮ ಪ್ರಜಾಪ್ರಭುತ್ವವನ್ನು ಮತ್ತಷ್ಟು ಗಟ್ಟಿಗೊಳಿಸೋಣ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

SCROLL FOR NEXT