ಪ್ರಧಾನಿ ಮೋದಿ 
ದೇಶ

ಕನ್ಯಾಕುಮಾರಿಯಲ್ಲಿ 45 ಗಂಟೆಗಳ ಸುದೀರ್ಘ ಧ್ಯಾನ ಮುಕ್ತಾಯಗೊಳಿಸಿದ ಪ್ರಧಾನಿ ಮೋದಿ

ಕನ್ಯಾಕುಮಾರಿಯ ವಿವೇಕಾನಂದ ರಾಕ್ ಸ್ಮಾರಕದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ 45 ಗಂಟೆಗಳ ಸುದೀರ್ಘ ಧ್ಯಾನವನ್ನು ಶನಿವಾರ ಸಂಜೆ ಮುಕ್ತಾಯಗೊಳಿಸಿದರು.

ಕನ್ಯಾಕುಮಾರಿ: ಕನ್ಯಾಕುಮಾರಿಯ ವಿವೇಕಾನಂದ ರಾಕ್ ಸ್ಮಾರಕದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ 45 ಗಂಟೆಗಳ ಸುದೀರ್ಘ ಧ್ಯಾನವನ್ನು ಶನಿವಾರ ಸಂಜೆ ಮುಕ್ತಾಯಗೊಳಿಸಿದರು ಮತ್ತು ತಮಿಳು ಸಂತ ಕವಿ ತಿರುವಳ್ಳುವರ್ ಅವರಿಗೆ ಪುಷ್ಪ ನಮನ ಸಲ್ಲಿಸಿದರು.

ತಮ್ಮ ಧ್ಯಾನ ಮುಕ್ತಾಯಗೊಳಿಸಿದ ನಂತರ ಪ್ರಧಾನಿ ಮೋದಿ ಬಿಳಿ ಬಟ್ಟೆಯನ್ನು ಧರಿಸಿ, ರಾಕ್ ಸ್ಮಾರಕದ ಪಕ್ಕದಲ್ಲಿರುವ 133 ಅಡಿ ಎತ್ತರದ ತಿರುವಳ್ಳುವರ್ ಪ್ರತಿಮೆಗೆ ಭೇಟಿ ನೀಡಿ, ಪುಷ್ಪ ನಮನ ಸಲ್ಲಿಸಿದರು.

ಪ್ರಧಾನಿ ಮೋದಿ, ದೋಣಿ ಮೂಲಕ ಪ್ರತಿಮೆ ಸಂಕೀರ್ಣಕ್ಕೆ ಆಗಮಿಸಿದರು ಮತ್ತು ನಂತರ ದೋಣಿ ಸೇವೆಯನ್ನು ಬಳಸಿಕೊಂಡು ದಡ ತಲುಪಿದರು.

ಪ್ರಧಾನಿ ಮೋದಿ ಅವರು ಇಂದು ಸೂರ್ಯೋದಯದ ವೇಳೆ ‘ಸೂರ್ಯ ಅರ್ಘ್ಯ’ ನೀಡುವ ಮೂಲಕ ಎರಡನೇ ಮತ್ತು ಅಂತಿಮ ದಿನದ ಧ್ಯಾನವನ್ನು ಆರಂಭಿಸಿದ್ದರು. ವಿವೇಕಾನಂದ ರಾಕ್ ಸ್ಮಾರಕದಲ್ಲಿ ಧ್ಯಾನದಲ್ಲಿ ನಿರತರಾಗಿದ್ದ ವೇಳೆ ಮೋದಿ ಕೇಸರಿ ಬಟ್ಟೆ ಧರಿಸಿದ್ದರು.

ಕನ್ಯಾಕುಮಾರಿಯು ಸೂರ್ಯೋದಯ ಮತ್ತು ಸೂರ್ಯಾಸ್ತಕ್ಕೆ ಹೆಸರುವಾಸಿಯಾಗಿದೆ ಮತ್ತು ಸ್ಮಾರಕವು ತೀರದ ಸಮೀಪವಿರುವ ಒಂದು ಸಣ್ಣ ದ್ವೀಪದಲ್ಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!