ಸಾಂದರ್ಭಿಕ ಚಿತ್ರ  
ದೇಶ

ವಿಧಾನಸಭೆ ಚುನಾವಣೆ ಮತ ಎಣಿಕೆ: ಸಿಕ್ಕಿಂನಲ್ಲಿ ಆಡಳಿತಾರೂಢ ಎಸ್‌ಕೆಎಂ ಗೆಲುವಿನತ್ತ, ಅರುಣಾಚಲದಲ್ಲಿ ಬಿಜೆಪಿಗೆ ಮುನ್ನಡೆ

ಅರುಣಾಚಲ ಪ್ರದೇಶದಲ್ಲಿ ಹತ್ತು ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹೀಗಾಗಿ 60 ವಿಧಾನಸಭಾ ಕ್ಷೇತ್ರಗಳ ಪೈಕಿ 50 ಸ್ಥಾನಗಳಿಗೆ ಮತ ಎಣಿಕೆ ನಡೆಯುತ್ತಿದೆ. 10 ಗೆಲುವು ಮತ್ತು 21 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿರುವ ಬಿಜೆಪಿ ಇದೀಗ ಗೆಲುವಿಗೆ ಅರ್ಧದ ಗಡಿ ದಾಟಿದೆ.

ಅರುಣಾಚಲ ಪ್ರದೇಶ: ತಿಂಗಳುಗಟ್ಟಲೆ ಪ್ರಚಾರ, ಮತದಾನ ಪ್ರಕ್ರಿಯೆ ನಂತರ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ ಮುಕ್ತಾಯವಾಗಿದ್ದು, ಫಲಿತಾಂಶ ತಿಳಿಯುವ ಸಮಯ ಬಂದಿದೆ.

ಅರುಣಾಚಲ ಪ್ರದೇಶದ 50 ಮತ್ತು ಸಿಕ್ಕಿಂನ 32 ವಿಧಾನಸಭಾ ಸ್ಥಾನಗಳಿಗೆ ಮತ ಎಣಿಕೆ ಇಂದು ಭಾನುವಾರ ನಡೆಯುತ್ತಿದೆ. ಅರುಣಾಚಲದಲ್ಲಿ 10 ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದು, 60 ವಿಧಾನಸಭಾ ಸ್ಥಾನಗಳ ಪೈಕಿ 50 ಸ್ಥಾನಗಳ ಫಲಿತಾಂಶ ಇಂದು ತಿಳಿಯಲಿದೆ. ಸಿಕ್ಕಿಂನಲ್ಲಿ, ಅಧಿಕಾರದಲ್ಲಿರುವ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ (SKM) ಎರಡನೇ ಅವಧಿಗೆ ಅಧಿಕಾರಕ್ಕೆ ಬರುವ ನಿರೀಕ್ಷೆಯಲ್ಲಿದೆ.

ಅರುಣಾಚಲ ಪ್ರದೇಶದಲ್ಲಿ 10 ಕ್ಷೇತ್ರಗಳಲ್ಲಿ ಅವಿರೋಧ ಆಯ್ಕೆ ಮತ್ತು 21 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿರುವ ಬಿಜೆಪಿ ಇದೀಗ ಗೆಲುವಿಗೆ ಅರ್ಧದ ಗಡಿ ದಾಟಿದೆ. ಬಿಜೆಪಿಯ ಮಿತ್ರಪಕ್ಷ ಕಾನ್ರಾಡ್ ಸಂಗ್ಮಾ ಅವರ ನ್ಯಾಷನಲ್ ಪೀಪಲ್ಸ್ ಪಾರ್ಟಿ ಎರಡು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ ಮತ್ತು ಎನ್‌ಸಿಪಿ ತಲಾ ಒಂದು ಸ್ಥಾನದಲ್ಲಿ ಮುನ್ನಡೆ ಸಾಧಿಸಿವೆ.

ಮೂರನೇ ಅವಧಿಗೆ ಸಿಎಂ ಪೆಮಾ ಖಂಡು: ಅರುಣಾಚಲ ಪ್ರದೇಶ ವಿಧಾನಸಭೆ ಚುನಾವಣೆ ಮತ ಎಣಿಕೆ ಪ್ರಗತಿಯಲ್ಲಿದ್ದು, ಆರಂಭಿಕ ಟ್ರೆಂಡ್‌ಗಳ ಪ್ರಕಾರ ಬಿಜೆಪಿ ಅರ್ಧದ ಗಡಿ ದಾಟಿದ್ದು, ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಮೂರನೇ ಅವಧಿಗೆ ಮುಖ್ಯಮಂತ್ರಿಯಾಗಿ ಅಧಿಕಾರಕ್ಕೆ ಏರಲು ಸಜ್ಜಾಗಿದ್ದಾರೆ. ಏಪ್ರಿಲ್ 19 ರಂದು ನಡೆದ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ದಿನವೇ ಅರುಣಾಚಲ ಪ್ರದೇಶದಲ್ಲಿ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳು ಏಕಕಾಲದಲ್ಲಿ ನಡೆದವು.

ಅವಿರೋಧವಾಗಿ ಆಯ್ಕೆಯಾದ 10 ಬಿಜೆಪಿ ಶಾಸಕರಲ್ಲಿ ಮುಕ್ತೋದಿಂದ ಮುಖ್ಯಮಂತ್ರಿ ಪೆಮಾ ಖಂಡು, ಚೌಕಮ್‌ನಿಂದ ಉಪಮುಖ್ಯಮಂತ್ರಿ ಚೌನಾ ಮೇ, ಇಟಾನಗರದಿಂದ ಟೆಚಿ ಕಾಸೊ, ತಾಲಿಹಾದಿಂದ ನ್ಯಾತೋ ದುಕಾಮ್ ಮತ್ತು ರೋಯಿಂಗ್‌ನಿಂದ ಮುಚು ಮಿಥಿ ಸೇರಿದ್ದಾರೆ.

ಇನ್ನು ಸಿಕ್ಕಿಂನಲ್ಲಿ ಅಧಿಕಾರದಲ್ಲಿರುವ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ 50 ಸ್ಥಾನಗಳನ್ನು ದಾಟಿದ್ದು, 32 ಸ್ಥಾನಗಳ ಪೈಕಿ 27ರಲ್ಲಿ ಮುನ್ನಡೆ ಸಾಧಿಸಿದೆ. ಪ್ರತಿಪಕ್ಷ ಸಿಕ್ಕಿಂ ಡೆಮಾಕ್ರಟಿಕ್ ಫ್ರಂಟ್ ಎರಡು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ಸಿಕ್ಕಿಂನ 32 ಸ್ಥಾನಗಳಲ್ಲಿ ಆಡಳಿತಾರೂಢ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ 29 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುತ್ತಿದ್ದಂತೆ ಸಂಭ್ರಮಾಚರಣೆಗಳು ಆರಂಭವಾಗಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಶಾಂತಿಗಿಂತ ರಾಜಕೀಯವೇ ಹೆಚ್ಚಾಯಿತು': ನೊಬೆಲ್ ಸಮಿತಿ ವಿರುದ್ಧ ಶ್ವೇತಭವನ ಕೆಂಡಾಮಂಡಲ!

ಚಿಕ್ಕಬಳ್ಳಾಪುರ: 'Miss U Chinna' ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

Maria Corina Machado: ನೋಬೆಲ್ ಶಾಂತಿ ಪ್ರಶಸ್ತಿ ಗೆದ್ದ ಮರಿಯಾ ಕೊರಿನಾ ಮಚಾದೊ ಕುರಿತು ಆಸಕ್ತಿಕರ ಮಾಹಿತಿ ಇಲ್ಲಿದೆ!

ಶಾಸಕರ ಭವನದಲ್ಲಿ ಬಾಂಬ್ ಇಟ್ಟಿದ್ದ ಪ್ರಕರಣಕ್ಕೆ ಮರುಜೀವ?: ಗಿರೀಶ್ ಮಟ್ಟಣ್ಣವರ್ ಗೆ ಸಂಕಷ್ಟ!

'ಇದೇ ಕೊನೆ, ಇನ್ನೆಂದೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ.. ಕರ್ನಾಟಕ 3 ಭಾಗ, ಭಾರತ 2 ಭಾಗ'.. 'ಮೋದಿ ದೇಶದ ರಕ್ಷಾ ಕವಚ': "ಬ್ರಹ್ಮಾಂಡ" ಭವಿಷ್ಯ

SCROLL FOR NEXT