ಪ್ರೇಮ್ ಸಿಂಗ್ ತಮಾಂಗ್ 
ದೇಶ

ರಾಜ್ಯಪಾಲರನ್ನು ಭೇಟಿಯಾದ ಪ್ರೇಮ್ ಸಿಂಗ್ ತಮಾಂಗ್, ನೂತನ ಸರ್ಕಾರ ರಚನೆಗೆ ಹಕ್ಕು ಮಂಡನೆ

ಎಸ್‌ಕೆಎಂ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಪ್ರೇಮ್ ಸಿಂಗ್ ತಮಾಂಗ್ ಅವರು ಸೋಮವಾರ ರಾಜ್ಯಪಾಲ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಅವರನ್ನು ಭೇಟಿ ಮಾಡಿ ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು.

ಗ್ಯಾಂಗ್‌ಟಕ್: ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾದ (ಎಸ್‌ಕೆಎಂ)ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಪ್ರೇಮ್ ಸಿಂಗ್ ತಮಾಂಗ್ ಅವರು ಸೋಮವಾರ ರಾಜ್ಯಪಾಲ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಅವರನ್ನು ಭೇಟಿ ಮಾಡಿ ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು.

ಭಾನುವಾರ ರಾತ್ರಿ ಸಿಎಂ ಅಧಿಕೃತ ನಿವಾಸದಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಎಸ್‌ಕೆಎಂ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದ ಪ್ರೇಮ್ ಸಿಂಗ್ ತಮಾಂಗ್ ಅವರು ಇಂದು ಪಕ್ಷದ ನೂತನ ಶಾಸಕರೊಂದಿಗೆ ರಾಜಭವನಕ್ಕೆ ತೆರಳಿ, ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು. ರಾಜ್ಯಪಾಲರು ಎಲ್ಲಾ ಶಾಸಕರಿಗೆ ಅಭಿನಂದಿಸಿ ಶುಭ ಹಾರೈಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎರಡನೇ ಬಾರಿ ಸಿಕ್ಕಿಂ ಮುಖ್ಯಮಂತ್ರಿಯಾಗುತ್ತಿರುವ ಪ್ರೇಮ್ ಸಿಂಗ್ ತಮಾಂಗ್ ಅವರು ಯಾವಾಗ ಪ್ರಮಾಣವಚನ ಸ್ವೀಕರಿಸುತ್ತಾರೆ ಎಂಬುದು ತಕ್ಷಣಕ್ಕೆ ತಿಳಿದು ಬಂದಿಲ್ಲ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಏಪ್ರಿಲ್ 18 ರಂದು ನಡೆದ ಸಿಕ್ಕಿಂ ವಿಧಾನಸಭೆ ಚುನಾವಣೆಯ ಫಲಿತಾಂಶ ಭಾನುವಾರ ಪ್ರಕಟವಾಗಿದ್ದು, ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ(SKM) 32 ಸದಸ್ಯ ಬಲದ ವಿಧಾನಸಭೆಯಲ್ಲಿ 31 ಸ್ಥಾನಗಳನ್ನು ಗೆದ್ದುಕೊಂಡು ಸತತ ಎರಡನೇ ಅವಧಿಗೆ ಅಧಿಕಾರಕ್ಕೆ ಮರಳಿದೆ. ಪ್ರತಿಪಕ್ಷ ಎಸ್‌ಡಿಎಫ್ ಕೇವಲ ಒಂದು ಸ್ಥಾನವನ್ನು ಪಡೆದುಕೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Tsunami: ದಕ್ಷಿಣ ಫಿಲಿಪೈನ್ಸ್‌ನಲ್ಲಿ 7.6 ತೀವ್ರತೆಯ ಭೂಕಂಪ; ಅಪಾಯಕಾರಿ ಸುನಾಮಿಯ ಎಚ್ಚರಿಕೆ!

Bus strike-ಬೇಡಿಕೆಗೆ ಕ್ಯಾರೇ ಎನ್ನದ ಸರ್ಕಾರ: ಮತ್ತೆ ಮುಷ್ಕರಕ್ಕೆ ಮುಂದಾದ ಸಾರಿಗೆ ನೌಕರರು

ಕುತೂಹಲ ಮೂಡಿಸಿದ ಸಿಎಂ ಸಿದ್ದರಾಮಯ್ಯ ಡಿನ್ನರ್ ಮೀಟ್: ಗರಿಗೆದರಿದ ಸಂಪುಟ ಪುನಾರಚನೆ, ಡಿಸಿಎಂ ಡಿಕೆಶಿ ಏನೆಂದರು?

ಸಚಿವ ಸಂಪುಟ ಪುನಾರಚನೆ ವಿಚಾರ ನನಗೆ ಗೊತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

Big shake-up: ಎರಡೂವರೆ ವರ್ಷಗಳ ಅವಧಿ ಮುಗಿಯುತ್ತಿದ್ದಂತೆ ಶೇ.50ರಷ್ಟು ಸಚಿವರನ್ನು ಸಿದ್ದು ಕೈಬಿಡುವ ಸಾಧ್ಯತೆ?

SCROLL FOR NEXT