ಅಶೋಕ್ ಗೆಹ್ಲೋಟ್ 
ದೇಶ

ಬಿಜೆಪಿ 370 ಸೀಟು ಗೆಲ್ಲಲ್ಲ, ಎನ್‌ಡಿಎಗೆ 400 ಸ್ಥಾನ ಸಿಗಲ್ಲ; ಪ್ರಧಾನಿ ಹುದ್ದೆಯಿಂದ ಮೋದಿ ಹಿಂದೆಸರಿಯಲಿ: ಅಶೋಕ್ ಗೆಹ್ಲೋಟ್

ಲೋಕಸಭಾ ಚುನಾವಣೆಯ ಫಲಿತಾಂಶ ಘೋಷಣೆಗೆ ಇನ್ನೇನು ಕೆಲವು ಗಂಟೆಗಳಷ್ಟೇ ಬಾಕಿ ಉಳಿದಿದ್ದು, ಸದ್ಯ ಮತ ಎಣಿಕೆ ಪ್ರಕ್ರಿಯೆ ಪ್ರಗತಿಯಲ್ಲಿದೆ. ಬಿಜೆಪಿ 370 ಸ್ಥಾನಗಳಲ್ಲಿ ಗೆಲ್ಲುವುದಿಲ್ಲ ಅಥವಾ ಎನ್‌ಡಿಎ 400 ಸ್ಥಾನಗಳನ್ನು ಪಡೆಯುವುದಿಲ್ಲ. ಈ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ನರೇಂದ್ರ ಮೋದಿ ಪ್ರಧಾನಿ ಹುದ್ದೆಯಿಂದ ತಮ್ಮ ಹೆಸರನ್ನು ಹಿಂಪಡೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮಂಗಳವಾರ ಹೇಳಿದ್ದಾರೆ.

ಜೈಪುರ: ಲೋಕಸಭಾ ಚುನಾವಣೆಯ ಫಲಿತಾಂಶ ಘೋಷಣೆಗೆ ಇನ್ನೇನು ಕೆಲವು ಗಂಟೆಗಳಷ್ಟೇ ಬಾಕಿ ಉಳಿದಿದ್ದು, ಸದ್ಯ ಮತ ಎಣಿಕೆ ಪ್ರಕ್ರಿಯೆ ಪ್ರಗತಿಯಲ್ಲಿದೆ. ಬಿಜೆಪಿ 370 ಸ್ಥಾನಗಳಲ್ಲಿ ಗೆಲ್ಲುವುದಿಲ್ಲ ಅಥವಾ ಎನ್‌ಡಿಎ 400 ಸ್ಥಾನಗಳನ್ನು ಪಡೆಯುವುದಿಲ್ಲ. ಈ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ನರೇಂದ್ರ ಮೋದಿ ಪ್ರಧಾನಿ ಹುದ್ದೆಯಿಂದ ತಮ್ಮ ಹೆಸರನ್ನು ಹಿಂಪಡೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮಂಗಳವಾರ ಹೇಳಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಗೆಹ್ಲೋಟ್, 'ಬಿಜೆಪಿಗೆ 370 ಸ್ಥಾನಗಳು ಅಥವಾ ಎನ್‌ಡಿಎಗೆ 400 ಸ್ಥಾನಗಳು ಬರುವುದಿಲ್ಲ ಎಂಬುದು ಈಗ ಸ್ಪಷ್ಟವಾಗಿದೆ. ಪ್ರಧಾನಿ ಮೋದಿ ಹೆಸರಿನಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಪಡೆಯಲು ಸಾಧ್ಯವಾಗುತ್ತಿಲ್ಲ. ಇಂತಹ ಪರಿಸ್ಥಿತಿಯಲ್ಲಿ ನರೇಂದ್ರ ಮೋದಿಯವರು ಈಗ ಪ್ರಧಾನಿ ಹುದ್ದೆಯ ಉಮೇದುವಾರಿಕೆಯಿಂದ ತಮ್ಮ ಹೆಸರನ್ನು ಹಿಂಪಡೆಯಬೇಕು' ಎಂದು ಒತ್ತಾಯಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ನಾಯಕತ್ವದಲ್ಲಿ ಬಿಜೆಪಿ 370ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲುವು ಕಾಣಲಿದೆ ಮತ್ತು ಎನ್‌ಡಿಎ 400ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಸಂಸತ್ತಿನಲ್ಲಿ ಹೇಳಿಕೊಂಡಿದ್ದರು. 2024ರ ಲೋಕಸಭೆ ಚುನಾವಣೆ ಸಂಪೂರ್ಣವಾಗಿ ಮೋದಿ ತಮ್ಮ ಮೇಲೆ ಕೇಂದ್ರೀಕರೀಸಿಕೊಂಡಿದ್ದಾರೆ ಎಂದರು.

ಪ್ರಚಾರದಲ್ಲಿ ಬಿಜೆಪಿ ಎನ್ನುವ ಪದಕ್ಕಿಂತ ಮೋದಿ ಕಿ ಗ್ಯಾರಂಟಿ, ಮತ್ತೆ ಮೋದಿ ಸರ್ಕಾರ ಎಂಬ ಪದಪುಂಜಗಳೇ ಹೆಚ್ಚಾಗಿ ಕೇಳಿಬಂದವು. ಎಂಪಿ ಅಭ್ಯರ್ಥಿಗಳನ್ನು ಬೈಪಾಸ್ ಮಾಡಿ ಇಡೀ ಚುನಾವಣೆಯನ್ನು ಮೋದಿ ಕಿ ಗ್ಯಾರಂಟಿ ಹೆಸರಿನಲ್ಲಿ ನಡೆಸಲಾಗಿದೆ. ಹಣದುಬ್ಬರ, ನಿರುದ್ಯೋಗ, ಸಮಾಜದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯಂತಹ ಸಮಸ್ಯೆಗಳು ಚುನಾವಣೆಯಲ್ಲಿ ಗೌಣವಾಗಿವೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

SCROLL FOR NEXT