ಚಂದ್ರಬಾಬು ನಾಯ್ಡು-ನಿತೀಶ್ ಕುಮಾರ್-ಶರದ್ ಪವಾರ್ 
ದೇಶ

ನಿತೀಶ್ ಗೆ ಉಪ ಪ್ರಧಾನಿ ಪಟ್ಟ; ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನ; ಚಂದ್ರಬಾಬುಗೆ INDIA ಬಿಗ್ ಆಫರ್?

2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟ 295 ಸ್ಥಾನಗಳಲ್ಲಿ ಗೆಲ್ಲುವುದು ಬಹುತೇಕ ಖಚಿತವಾಗಿದೆ. ಆದರೆ ಈ ಮಧ್ಯೆ INDIA ಮೈತ್ರಿಕೂಟ NDA ಮೈತ್ರಿಕೂಟದಲ್ಲಿರುವ ಪಕ್ಷಗಳನ್ನು ತಮ್ಮತ್ತ ಸೆಳೆಯಲು ಕಸರತ್ತು ನಡೆಸುತ್ತಿವೆ.

ನವದೆಹಲಿ: 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟ 295 ಸ್ಥಾನಗಳಲ್ಲಿ ಗೆಲ್ಲುವುದು ಬಹುತೇಕ ಖಚಿತವಾಗಿದೆ. ಆದರೆ ಈ ಮಧ್ಯೆ INDIA ಮೈತ್ರಿಕೂಟ NDA ಮೈತ್ರಿಕೂಟದಲ್ಲಿರುವ ಪಕ್ಷಗಳನ್ನು ತಮ್ಮತ್ತ ಸೆಳೆಯಲು ಕಸರತ್ತು ನಡೆಸುತ್ತಿವೆ. ಇದಕ್ಕಾಗಿ ಜೆಡಿಯು ಪಕ್ಷದ ಮುಖ್ಯಸ್ಥ ನಿತೀಶ್ ಕುಮಾರ್ ಹಾಗೂ ಟಿಡಿಪಿ ನೇತೃತ್ವದ ಚಂದ್ರಬಾಬು ನಾಯ್ಡುಗೆ ಬಿಗ್ ಆಫರ್ ಕೊಟ್ಟಿದ್ದಾರೆ.

ಇಂಡಿಯಾ ಮೈತ್ರಿಕೂಟದ ಜೊತೆ ಬಂದರೆ ನಿತೀಶ್ ಕುಮಾರ್ ರನ್ನು ಉಪ ಪ್ರಧಾನಿ ಹಾಗೂ ಆಂಧ್ರಪ್ರದೇಶಕ್ಕೆ ಸಿಎಂ ಆಗಲಿರುವ ಚಂದ್ರಬಾಬು ನಾಯ್ಡುಗೆ ಆಂಧ್ರಕ್ಕೆ ರಾಜ್ಯ ವಿಶೇಷ ಸ್ಥಾನಮಾನ ನೀಡುವ ಆಫರ್ ಅವರನ್ನು ಇಂಡಿಯಾ ಮೈತ್ರಿಕೂಟ ಕೊಟ್ಟಿದೆ. ಈ ಮೂಲಕ ಕೇಂದ್ರದಲ್ಲಿ ಬಿಜೆಪಿಯನ್ನು ಹೊರಗಿಡಲು ಇಂಡಿಯಾ ಮೈತ್ರಿಕೂಟ ಪ್ರಯತ್ನಿಸುತ್ತಿದೆ.

ಲೋಕಸಭೆಗೆ 272 ಸ್ಥಾನಗಳು ಸರಳ ಬಹುಮತವಾಗಿದ್ದು ಎನ್ಡಿಎ ಮೈತ್ರಕೂಟ 296 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಇನ್ನು 228 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿರುವ ಇಂಡಿಯಾ ಮೈತ್ರಿಕೂಟಕ್ಕೆ ಸರಳ ಬಹುಮತಕ್ಕೆ ಇನ್ನು 44 ಸ್ಥಾನಗಳು ಬೇಕಿರುವುದರಿಂದ ಸ್ವತಂತ್ರ್ಯವಾಗಿ ನಿಂತು ಗೆದ್ದಿರುವ ಅಭ್ಯರ್ಥಿಗಳನ್ನು ಹಾಗೂ ಎನ್ ಡಿಎ ಮೈತ್ರಿಕೂಟದಲ್ಲಿರುವ ಅಭ್ಯರ್ಥಿಗಳನ್ನು ತಮ್ಮತ್ತ ಸೆಳೆಯಲು ಕರಸತ್ತು ನಡೆಸುತ್ತಿದೆ.

ಲೋಕಸಭೆ ಚುನಾವಣೆಯಲ್ಲಿ ಆಂಧ್ರಪ್ರದೇಶದಲ್ಲಿ ಟಿಡಿಪಿ 16 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದರೆ ಬಿಹಾರದಲ್ಲಿ ಜೆಡಿಯು 14 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಎನ್ ಡಿಎ ಮೈತ್ರಿಕೂಟದಲ್ಲಿ ಈ ಎರಡು ಪಕ್ಷಗಳೇ ಪ್ರಮುಖ ಪಕ್ಷವಾಗಿರುವುದರಿಂದ ಬಿಜೆಪಿ ಸಹ ಮೈತ್ರಿಪಕ್ಷಗಳನ್ನು ಹಿಡಿದಿಟ್ಟುಕೊಳ್ಳುವ ಪ್ರಯತ್ನಗಳನ್ನು ನಡೆಸಿದೆ.

ಈ ಹಿನ್ನೆಲೆಯಲ್ಲಿ ಚಂದ್ರಬಾಬು ನಾಯ್ಡುಗೆ ಎನ್ ಡಿಎ ಮೈತ್ರಿಕೂಟದ ಸಂಚಾಲಕನ ಹುದ್ದೆಯನ್ನು ಆಫರ್ ಮಾಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!