2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟ 295 ಸ್ಥಾನಗಳಲ್ಲಿ ಗೆಲ್ಲುವುದು ಬಹುತೇಕ ಖಚಿತವಾಗಿದೆ. ಆದರೆ ಈ ಮಧ್ಯೆ INDIA ಮೈತ್ರಿಕೂಟ NDA ಮೈತ್ರಿಕೂಟದಲ್ಲಿರುವ ಪಕ್ಷಗಳನ್ನು ತಮ್ಮತ್ತ ಸೆಳೆಯಲು ಕಸರತ್ತು ನಡೆಸುತ್ತಿವೆ.
ಹಾಲಿ ಲೋಕಸಭಾ ಚುನಾವಣೆಯಲ್ಲಿ ಪುತ್ರ ಕಾಂತೇಶ್ ಟಿಕೆಟ್ ಸಿಗದ ಹಿನ್ನಲೆಯಲ್ಲಿ ಬಿಜೆಪಿ ವಿರುದ್ಧ ಬಂಡಾಯವೆದ್ದು ಸ್ವತಃ ತಾವೇ ಚುನಾವಣಾ ಅಖಾಡಕ್ಕೆ ಇಳಿದಿದ್ದ ಮಾಜಿ ಉಪ ಮುಖ್ಯಮಂತ್ರಿ ಕೆಎಸ್ ಈಶ್ವರಪ್ಪಗೆ ತೀವ್ರ ಮುಖಭಂಗವಾಗಿದೆ.
ಲೋಕಸಭಾ ಚುನಾವಣೆಯ ಫಲಿತಾಂಶಗಳು ಅಂತಿಮ ಹಂತದಲ್ಲಿರುವಂತೆ, ಚುನಾವಣಾ ಆಯೋಗದ ಪ್ರಕಾರ, ಮಧ್ಯಾಹ್ನ 2 ಗಂಟೆಯವರೆಗೆ ಕರ್ನಾಟಕದಲ್ಲಿ ಬಿಜೆಪಿಯ ಮತ ಹಂಚಿಕೆ 44.74%, ನಂತರ ಕಾಂಗ್ರೆಸ್ 45.74%, JD(S) ಮತ ಹಂಚಿಕೆಯು 6.92% ರಷ್ಟಿತ್ತು.
ತೀವ್ರ ಕುತೂಹಲ ಕೆರಳಿಸಿದ್ದ ಬಳ್ಳಾರಿ ಲೋಕಸಭಾ ಕ್ಷೇತ್ರದ ಫಲಿತಾಂಶ ಪ್ರಕಟಗೊಂಡಿದ್ದು, ಮಾಜಿ ಸಚಿವ ಹಾಗೂ ಬಿಜೆಪಿ ಅಭ್ಯರ್ಥಿ ಬಿ ಶ್ರೀರಾಮುಲುಗೆ ಭಾರಿ ಮುಖಭಂಗವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ E ತುಕಾರಂ ಭರ್ಜರಿ ಜಯ ಸಾಧಿಸಿದ್ದಾರೆ.
ಸತತ ಚುನಾವಣಾ ಸೋಲುಗಳಿಂದ ಸೋತು ಕಂಗೆಟ್ಟಿದ್ದ ವಿ ಸೋಮಣ್ಣ ಕೊನೆಗೂ ಹಾಲಿ ಲೋಕಸಭಾ ಚುನಾವಣೆಯಲ್ಲಿ ಜಯಭೇರಿ ಭಾರಿಸಿದ್ದು, ತುಮಕೂರು ಲೋಕಸಭಾ ಕ್ಷೇತ್ರದಲ್ಲಿ 1 ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಜಯ ಗಳಿಸಿದ್ದಾರೆ.
ಕೊನೆಗೂ ಕೇರಳದಲ್ಲಿ ಖಾತೆ ತೆರೆಯುವ ಬಿಜೆಪಿ ಕನಸು ನನಸಾಗಿದ್ದು, ತ್ರಿಶೂರ್ ಲೋಕಸಭಾ ಕ್ಷೇತ್ರದಲ್ಲಿ ಸುರೇಶ್ ಗೋಪಿ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಹಾಲಿ ಲೋಕಸಭಾ ಚುನಾವಣಾ ಫಲಿತಾಂಶದಲ್ಲಿ ಯಾವುದೇ ಪಕ್ಷಕ್ಕೂ ಸ್ಪಷ್ಟ ಬಹುಮತ ಸಿಗದ ಹಿನ್ನಲೆಯಲ್ಲಿ ಇತ್ತ INDIA ಒಕ್ಕೂಟದ ನಾಯಕರು NDA ಮೈತ್ರಿಕೂಟದ ನಿತೀಶ್ ಕುಮಾರ್, ಚಂದ್ರಬಾಬು ನಾಯ್ದುಗೆ ಗಾಳ ಹಾಕಿದ್ದಾರೆ.
ಹಾಲಿ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟಕ್ಕೆ ಮೊದಲ ಗೆಲುವು ಲಭಿಸಿದ್ದು, ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಭರ್ಜರಿ ಜಯ ದಾಖಲಿಸಿದ್ದಾರೆ.
ತೀವ್ರ ಕುತೂಹಲ ಕೆರಳಿಸಿದ್ದ ಲೋಕಸಭಾ ಚುನಾವಣೆಯಲ್ಲಿ ಎಲ್ಲರ ಕೇಂದ್ರ ಬಿಂದುವಾಗಿದ್ದ ಉತ್ತರ ಪ್ರದೇಶದಲ್ಲಿ INDIA ಒಕ್ಕೂಟ ಗಮನಾರ್ಹ ಸಾಧನೆ ಮಾಡಿದೆ.
ಗಾಂಧಿನಗರ: ಲೋಕಸಭೆ ಚುನಾವಣೆ ಫಲಿತಾಂಶದ ಇತ್ತೀಚಿನ ಟ್ರೆಂಡ್‌ಗಳ ಪ್ರಕಾರ ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯ ಗುಜರಾತ್‌ನಲ್ಲಿ ಒಟ್ಟು 26 ಕ್ಷೇತ್ರಗಳ ಪೈಕಿ ಭಾರತೀಯ ಜನತಾ ಪಕ್ಷ(ಬಿಜೆಪಿ) 24 ರಲ್ಲಿ ಮತ್ತು ಕಾಂಗ್ರೆಸ್ 1 ರಲ್ಲಿ ಮುನ್ನಡೆ ಸಾಧಿಸಿದೆ.
ಪಟಾಣ್ ಹೊರತುಪಡಿಸಿ ಉಳಿದ 24 ಸ್ಥಾನಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿಯ ಸೂರತ್ ಅಭ್ಯರ್ಥಿ ಮುಖೇಶ್ ದಲಾಲ್ ಈಗಾಗಲೇ ಸೂರತ್ ಕ್ಷೇತ್ರದಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಲಾಗಿದೆ.
ಹೀಗಾಗಿ ರಾಜ್ಯದ ಒಟ್ಟು 26 ಸ್ಥಾನಗಳ ಪೈಕಿ 25 ಸ್ಥಾನಗಳಿಗೆ ಮತದಾನ ನಡೆದಿದೆ. ಗಾಂಧಿನಗರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕಾಂಗ್ರೆಸ್ ಅಭ್ಯರ್ಥಿ ಸೋನಾಲ್ ಪಟೇಲ್ ಅವರಿಗಿಂತ 2.14 ಲಕ್ಷ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ 29 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಪ್ರಧಾನಿ ಮೋದಿ ಮತ್ತು ಅಮಿತ್ ಶಾ ನೇತೃತ್ವದ ಅಬ್ಬರದ ಪ್ರಚಾರದ ನಂತರ ಬಿಜೆಪಿ ಕೇವಲ 13 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
ಆದರೆ, ಕಾಂಗ್ರೆಸ್ ಮತ್ತು ಎಡಪಕ್ಷಗಳ ಮೈತ್ರಿಯು ಕಳಪೆ ಪ್ರದರ್ಶನ ತೋರಿದೆ, ಅವರು ಎಲ್ಲಾ ಸ್ಥಾನಗಳಲ್ಲಿ ಹಿಂದುಳಿದಿದ್ದಾರೆ.
ತಮಿಳುನಾಡಿನಲ್ಲಿ ಆಡಳಿತಾರೂಢ ಡಿಎಂಕೆ ನೇತೃತ್ವದ INDIA ಬಣ 36 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
ಆದಾಗ್ಯೂ, ಬಹು ನಿರೀಕ್ಷಿತ ಕೊಯಮತ್ತೂರು ಸ್ಪರ್ಧೆಯಲ್ಲಿ, ಬಿಜೆಪಿ ರಾಜ್ಯಾಧ್ಯಕ್ಷ ಕೆ ಅಣ್ಣಾಮಲೈ ಪ್ರಸ್ತುತ ಡಿಎಂಕೆಯ ಗಣಪತಿ ಪಿ ರಾಜ್‌ಕುಮಾರ್‌ಗಿಂತ ಹಿಂದೆ ಉಳಿದಿದ್ದಾರೆ.
ಧರ್ಮಪುರಿಯಲ್ಲಿ ಎನ್‌ಡಿಎ ಅಭ್ಯರ್ಥಿ ಹಾಗೂ ಅನ್ಬುಮಣಿ ರಾಮದಾಸ್ ಅವರ ಪತ್ನಿ ಪಿಎಂಕೆಯ ಸೌಮ್ಯಾ ಅನ್ಬುಮಣಿ 15,000 ಮುನ್ನಡೆ ಸಾಧಿಸಿದ್ದಾರೆ.
ಚಿಕ್ಕೋಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ 2,14,066 ಮತಗಳಿಂದ ಮುನ್ನಡೆಯಲ್ಲಿದ್ದರೆ, ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ 1,75,787 ಮತಗಳನ್ನು ಪಡೆದು ಎರಡನೇ ಸ್ಥಾನದಲ್ಲಿದ್ದಾರೆ. ಜಾರಕಿಹೊಳಿ 38,279 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.
ಬಳ್ಳಾರಿಯಲ್ಲಿ ಬೆಳಗ್ಗೆ 10.30ಕ್ಕೆ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಹಿನ್ನಡೆಯಲ್ಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಇ ತುಕಾರಾಂ 114076 ಮತಗಳಿಂದ ಮುನ್ನಡೆ ಸಾಧಿಸಿದ್ದು, ಶ್ರೀರಾಮುಲು 99992 ಮತಗಳನ್ನು ಪಡೆದಿದಿದ್ದರು.
ಖ್ಯಾತ ಹೃದ್ರೋಗ ತಜ್ಞ ಡಾ.ಎನ್.ಮಂಜುನಾಥ್ ಅವರಿಂದ ಹಾಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ತೀವ್ರ ಪೈಪೋಟಿ ಎದುರಿಸುತ್ತಿದ್ದಾರೆ
ಕೋಲಾರದಲ್ಲಿ ಜೆಡಿಎಸ್ ಅಭ್ಯರ್ಥಿ ಮಲ್ಲೇಶ್ ಬಾಬು 437674 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ
ಕೇರಳದಲ್ಲಿ, INDIA ಬ್ಲಾಕ್ ಪ್ರಾಬಲ್ಯವನ್ನು ತೋರಿಸುತ್ತಿದೆ. UDF 17 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಆದರೆ, ಆಲತ್ತೂರಿನಲ್ಲಿ ಆಡಳಿತಾರೂಢ ಎಲ್‌ಡಿಎಫ್ ಏಕಾಂಗಿಯಾಗಿ ಮುನ್ನಡೆ ಸಾಧಿಸಿದೆ.
ಏತನ್ಮಧ್ಯೆ, ಬಿಜೆಪಿ ನೇತೃತ್ವದ ಎನ್‌ಡಿಎ 2 ಸ್ಥಾನಗಳಲ್ಲಿ ಮುನ್ನಡೆಯೊಂದಿಗೆ ಕೇರಳಕ್ಕೆ ಕಾಲಿಡುವ ಸಾಧ್ಯತೆಯಿದೆ. ತ್ರಿಶೂರ್‌ನಲ್ಲಿ ನಟ ಸುರೇಶ್ ಗೋಪಿ ಗಮನಾರ್ಹ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್‌ನ ಶಶಿ ತರೂರ್ ಮತ್ತು ಸಿಪಿಎಂನ ಪನ್ಯನ್ ರವೀಂದ್ರನ್ ವಿರುದ್ಧ ಸಚಿವ ರಾಜೀವ್ ಚಂದ್ರಶೇಖರ್ ತಿರುವನಂತಪುರದಲ್ಲಿ ಮುನ್ನಡೆ ಸಾಧಿಸಿದ್ದಾರೆ.
ಆರಂಭಿಕ ಪ್ರವೃತ್ತಿಗಳ ಪ್ರಕಾರ ಪ್ರಧಾನಿ ನರೇಂದ್ರ ಮೋದಿ ವಾರಣಾಸಿಯಲ್ಲಿ ಕಾಂಗ್ರೆಸ್‌ನ ಅಜಯ್ ರೈ ಅವರ ವಿರುದ್ಧ ಹಿನ್ನಡೆ ಅನುಭವಿಸಿದ್ದಾರೆ.
ಅದೇ ರೀತಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಕಾಂಗ್ರೆಸ್‌ನ ಕೆಎಲ್ ಶರ್ಮಾ ಅವರಿಗಿಂತ 395 ಮತಗಳಿಂದ ಹಿಂದೆ ಇದ್ದಾರೆ. ಬಿಜೆಪಿ ನಾಯಕರಾದ ಮೇನಕಾ ಗಾಂಧಿ ಮತ್ತು ಮಹೇಂದ್ರ ನಾಥ್ ಪಾಂಡೆ ಅವರು ಪ್ರಸ್ತುತ ಕ್ರಮವಾಗಿ ಸುಲ್ತಾನ್‌ಪುರ ಮತ್ತು ಚಂದೌಲಿಯಲ್ಲಿ ಹಿನ್ನಡೆ ಅನುಭವಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ ಎನ್‌ಡಿಎ 47 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಇಂಡಿಯಾ ಬಣ 32 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
ಆರಂಭಿಕ ಟ್ರೆಂಡ್‌ಗಳ ಪ್ರಕಾರ ದೆಹಲಿಯ ಎಲ್ಲಾ 7 ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.
ಬಿಜೆಪಿ ಎಲ್ಲಾ ಏಳು ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ, ಎಎಪಿ ನಾಲ್ಕು-ದಕ್ಷಿಣ ದೆಹಲಿ, ಪೂರ್ವ ದೆಹಲಿ, ನವದೆಹಲಿ ಮತ್ತು ಪಶ್ಚಿಮ ದೆಹಲಿ - ಅದರ ಪಾಲುದಾರ ಕಾಂಗ್ರೆಸ್ ಈಶಾನ್ಯ, ಚಾಂದಿನಿ ಚೌಕ್ ಮತ್ತು ವಾಯವ್ಯ ದೆಹಲಿ ಸಂಸದೀಯ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ನಿಲ್ಲಿಸಿದೆ.
2014 ಮತ್ತು 2019 ರಲ್ಲಿ ಬಿಜೆಪಿ ದೆಹಲಿಯ ಎಲ್ಲಾ ಸ್ಥಾನಗಳನ್ನು ಗೆದ್ದಿತ್ತು.
ಚುನಾವಣಾ ಫಲಿತಾಂಶದ ದಿನದಂದು ಬೆಳಿಗ್ಗೆ 9.15 ಕ್ಕೆ ಭಾರತದ ಈಕ್ವಿಟಿ ಮಾರುಕಟ್ಟೆ ತೀವ್ರವಾಗಿ ಕುಸಿಯಿತು. ಆರಂಭಿಕ ಟ್ರೆಂಡ್‌ಗಳು ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ ಮುನ್ನಡೆಯನ್ನು ತೋರಿಸಿದಾಗಲೂ ಸ್ಥಳೀಯ ಷೇರುಗಳಲ್ಲಿ ತೀವ್ರ ಕುಸಿತ ಕಂಡುಬಂದಿದೆ.
ಆದಾಗ್ಯೂ, ಆರಂಭಿಕ ಟ್ರೆಂಡ್‌ಗಳು ಎಕ್ಸಿಟ್ ಪೋಲ್‌ಗಳು ಭವಿಷ್ಯ ನುಡಿದಿದ್ದಕ್ಕಿಂತ ಎದುರಾಳಿ ಇಂಡಿಯಾ ಬ್ಲಾಕ್ ಹೆಚ್ಚು ಸ್ಥಾನ ಗಳಿಸುವ ಸಾಧ್ಯತೆ ಇದೆ ಎಂದು ತೋರಿಸಿದೆ.
ಟಿಡಿಪಿ 113 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ವೈಎಸ್‌ಆರ್‌ಸಿಪಿ 15 ಸ್ಥಾನಗಳಲ್ಲಿ ಮುಂದಿದೆ
ಲೋಕಸಭೆ ಚುನಾವಣೆಯ ಮತ ಎಣಿಕೆಗೆ ಮುನ್ನ ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಮಂಗಳವಾರ ಬೆಂಗಳೂರಿನ ಗಂಗಾಧರೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ಮಂಡ್ಯದಿಂದ ಎನ್‌ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಕುಮಾರಸ್ವಾಮಿ ಆದಿಚುಂಚನಗಿರಿ ಗಿರಿ ಶಾಖಾ ಮಠದ ಮಠಾಧೀಶ ನಿರ್ಮಲಾನಂದನಾಥ ಸ್ವಾಮಿಗಳ ಆಶೀರ್ವಾದವನ್ನೂ ಪಡೆದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.
Karnataka Lok Sabha Election Results 2024 LIVE: ಬೆಂಗಳೂರು ಗ್ರಾಮಾಂತರ ಲೋಕಸಭೆ ಸ್ಟ್ರಾಂಗ್ ರೂಮ್ ಓಪನ್
ಎಂಟು ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸ್ಟ್ರಾಂಗ್ ರೂಮ್ ಓಪನ್ ಮಾಡಲಾಗಿದೆ. ಈ ಬಾರಿ ಬಿಜೆಪಿಯಿಂದ ಡಾ ಸಿ ಮಂಜುನಾಥ್ ಸ್ಪರ್ಧೆಯಿಂದ ಈ ಕ್ಷೇತ್ರ ಕರ್ನಾಟಕದಲ್ಲಿ ತೀವ್ರ ಕುತೂಹಲ ಕೆರಳಿಸಿದೆ. 18 ಕೊಠಡಿಯಲ್ಲಿ 168 ಸುತ್ತಿನಲ್ಲಿ ಮತ ಎಣಿಕೆ ನಡೆಯಲಿದೆ. ಕಾಂಗ್ರೆಸ್ ನಿಂದ ಡಿಕೆ ಸುರೇಶ್ ಕಣದಲ್ಲಿದ್ದಾರೆ. ಮೊದಲಿಗೆ ಅಂಚೆ ಮತಗಳ ಎಣಿಕೆಯಾಗಲಿದೆ.
#ಮೈಸೂರು ಲೋಕಸಭಾ ಕ್ಷೇತ್ರದ #NDA ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮೈಸೂರಿನ ಮತ ಎಣಿಕೆ ಕೇಂದ್ರಕ್ಕೆ ಭೇಟಿ ನೀಡಿದರು. #YaduveerWadiyar #LokSabhaPoll2024 #Election Results 2024 Live
ಲೋಕಸಭಾ ಚುನಾವಣೆ ಮತ ಎಣಿಕೆಗೆ ಕ್ಷಣಗಣನೆ, ದೇಶದ ಎಲ್ಲಾ ಕಡೆಗಳಲ್ಲಿ ಸ್ಟ್ರಾಂಗ್ ರೂಮ್ ಓಪನ್ ಆಗಿದೆ. ಬೆಂಗಳೂರಿನಲ್ಲಿ ಬಹುತೇಕ ಸ್ಟ್ರಾಂಗ್ ರೂಮ್ಗಳು ಓಪನ್ ಆಗಿವೆ. ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದೆ.