ಗಾಂಧಿನಗರ: ಲೋಕಸಭೆ ಚುನಾವಣೆಯ ಫಲಿತಾಂಶ ಅಂತಿಮ ಘಟ್ಟ ತಲುಪುತ್ತಿದ್ದು, ಭಾರತೀಯ ಜನತಾ ಪಕ್ಷದ(ಬಿಜೆಪಿ) ಹಿರಿಯ ನಾಯಕ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗಾಂಧಿನಗರದಲ್ಲಿ 7 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಗಾಂಧಿನಗರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪ್ರತಿಸ್ಪರ್ಧಿ ಸೋನಾಲ್ ಪಟೇಲ್ ಅವರ ವಿರುದ್ಧ ಅಮಿತ್ ಶಾ ಗೆಲುವು ಸಾಧಿಸಿದ್ದಾರೆ. ರಾಜ್ಯದ 25 ಲೋಕಸಭಾ ಕ್ಷೇತ್ರಗಳಿಗೆ ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಿದ್ದು, ಬಿಜೆಪಿ 23 ರಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಎರಡು ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಕಾಂಗ್ರೆಸ್ ಒಂದು ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
2019 ರ ಚುನಾವಣೆಯಲ್ಲಿ ಅಮಿತ್ ಶಾ 5.57 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.
ಈ ಹಿಂದೆ ಬಿಜೆಪಿಯ ಪ್ರಮುಖ ಲಾಲ್ ಕೃಷ್ಣ ಅಡ್ವಾಣಿ ಅವರು ಗಾಂಧಿನಗರ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು.