ಎಂಜಿನಿಯರ್ ರಶೀದ್ 
ದೇಶ

ಸರ್ಕಾರ ಜನರ ತೀರ್ಪನ್ನು ಗೌರವಿಸಿ ಎಂಜಿನಿಯರ್ ರಶೀದ್ ಬಿಡುಗಡೆ ಮಾಡಬೇಕು: ಮುಫ್ತಿ ಆಗ್ರಹ

ಶೇಖ್ ಅಬ್ದುಲ್ ರಶೀದ್ ಅಲಿಯಾಸ್ ಇಂಜಿನಿಯರ್ ರಶೀದ್ ಅವರನ್ನು ಕೇಂದ್ರ ಸರ್ಕಾರ ಜನರ ತೀರ್ಪನ್ನು ಗೌರವಿಸಿ ಬಿಡುಗಡೆ ಮಾಡಬೇಕು ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಬುಧವಾರ ಆಗ್ರಹಿಸಿದ್ದಾರೆ.

ಶ್ರೀನಗರ: ಜೈಲಿನಲ್ಲಿದ್ದುಕೊಂಡೆ ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ರಾಜಕಾರಣಿ ಶೇಖ್ ಅಬ್ದುಲ್ ರಶೀದ್ ಅಲಿಯಾಸ್ ಇಂಜಿನಿಯರ್ ರಶೀದ್ ಅವರನ್ನು ಕೇಂದ್ರ ಸರ್ಕಾರ ಜನರ ತೀರ್ಪನ್ನು ಗೌರವಿಸಿ ಬಿಡುಗಡೆ ಮಾಡಬೇಕು ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಬುಧವಾರ ಆಗ್ರಹಿಸಿದ್ದಾರೆ.

ಭಯೋತ್ಪಾದನೆಗೆ ಹಣಕಾಸು ನೆರವು ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಇಂಜಿನಿಯರ್ ರಶೀದ್ ಅವರು, ಬಾರಾಮುಲ್ಲಾ ಕ್ಷೇತ್ರದಲ್ಲಿ ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಅವರ ವಿರುದ್ಧ ಕ್ಷೇತ್ರದಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಈ ಕುರಿತು 'X' ನಲ್ಲಿ ಪೋಸ್ಟ್‌ ಮಾಡಿರುವ ಮುಫ್ತಿ, "ಲೋಕಸಭೆ ಚುನಾವಣೆಯಲ್ಲಿ ಗೆದ್ದಿದ್ದಕ್ಕಾಗಿ ಮಿಯಾನ್ ಅಲ್ತಾಫ್, ಅಗಾ ರುಹುಲ್ಲಾ, ಇಂಜಿನಿಯರ್ ರಶೀದ್ ಮತ್ತು ಹನೀಫಾ ಜಾನ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಕೇಂದ್ರ ಸರ್ಕಾರ ಜನರ ತೀರ್ಪನ್ನು ಗೌರವಿಸಿ ಇಂಜಿನಿಯರ್ ರಶೀದ್ ಅವರನ್ನು ಬಿಡುಗಡೆ ಮಾಡಬೇಕು" ಎಂದು ಹೇಳಿದ್ದಾರೆ.ಪ್ರಸ್ತುತ ತಿಹಾರ್ ಜೈಲಿನಲ್ಲಿರುವ ರಶೀದ್‌ ಅವರನ್ನು ಬಿಡುಗಡೆ ಮಾಡುವಂತೆ ಪಿಡಿಪಿ ಮುಖ್ಯಸ್ಥೆ ಪುತ್ರಿ ಇಲ್ತಿಜಾ ಮುಫ್ತಿ ಸಹ ಒತ್ತಾಯಿಸಿದ್ದಾರೆ.

ಪ್ರಸ್ತುತ ತಿಹಾರ್ ಜೈಲಿನಲ್ಲಿರುವ ರಶೀದ್‌ ಅವರನ್ನು ಬಿಡುಗಡೆ ಮಾಡುವಂತೆ ಪಿಡಿಪಿ ಮುಖ್ಯಸ್ಥೆ ಪುತ್ರಿ ಇಲ್ತಿಜಾ ಮುಫ್ತಿ ಸಹ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು; ಪ್ರತಿಪಕ್ಷಗಳಿಗೆ ಮುಖಭಂಗ

ತೈಲ ಪೂರೈಕೆಗೆ ರಿಯಾಯಿತಿ ಸ್ಥಗಿತ ಬೆನ್ನಲ್ಲೇ ಎಚ್ಚೆತ್ತ ಭಾರತ; ರಷ್ಯಾ ವಿದೇಶಾಂಗ ಸಚಿವರಿಗೆ ಜೈಶಂಕರ್ ದೂರವಾಣಿ ಕರೆ; ಮಹತ್ವದ ಚರ್ಚೆ!

IPL 2026: ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ಉದ್ಘಾಟನಾ ಪಂದ್ಯ; ಮಾರ್ಚ್ 28 ರಂದು RCB vs SRH

'ರಕ್ಷಿತ್ ಶೆಟ್ಟಿ-ರಶ್ಮಿಕಾ ನಿಶ್ಚಿತಾರ್ಥ ಮುರಿದುಬೀಳಲು ಇದೇ ಕಾರಣ': ತಾಯಿ ಸುಮನ್ ಮಂದಣ್ಣರದ್ದು ಎನ್ನಲಾದ ಆಡಿಯೋ ವೈರಲ್!

ಗಲ್ಫ್‌ನಲ್ಲಿ ಸಿಲುಕಿರುವ ಭಾರತೀಯರಿಗೆ ಪ್ರಧಾನಿ ಮೋದಿ ಸಹಾಯದ ಭರವಸೆ; ಕೊಚ್ಚಿಯಲ್ಲಿ 'ವಿಕ್ಸಿತ್ ಕೇರಳಂ'ಗೆ ಚಾಲನೆ

SCROLL FOR NEXT