ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

2ನೇ ಬಾರಿ ಸಿಕ್ಕಿಂ ಸಿಎಂ ಆಗಿ ಜೂನ್ 9 ರಂದು ಪಿಎಸ್ ತಮಾಂಗ್ ಪ್ರಮಾಣ ವಚನ ಸ್ವೀಕಾರ

ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ ಮುಖ್ಯಸ್ಥ ಪ್ರೇಮ್ ಸಿಂಗ್ ತಮಾಂಗ್ ಅವರು ಜೂನ್ 9 ರಂದು ಎರಡನೇ ಅವಧಿಗೆ ಸಿಕ್ಕಿಂ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವುದಾಗಿ ಬುಧವಾರ ಹೇಳಿದ್ದಾರೆ.

ಪ್ರೇಮ್ ಸಿಂಗ್ ತಮಾಂಗ್
Lingaraj Badiger
Updated On : 5 Jun 2024, 3:56 pm

ಗ್ಯಾಂಗ್ಟಕ್: ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ ಮುಖ್ಯಸ್ಥ ಪ್ರೇಮ್ ಸಿಂಗ್ ತಮಾಂಗ್ ಅವರು ಜೂನ್ 9 ರಂದು ಎರಡನೇ ಅವಧಿಗೆ ಸಿಕ್ಕಿಂ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವುದಾಗಿ ಬುಧವಾರ ಹೇಳಿದ್ದಾರೆ.

ತಮಾಂಗ್ ಮತ್ತು ಅವರ ಸಂಪುಟದ ಪ್ರಮಾಣ ವಚನ ಸಮಾರಂಭವು ರಾಜ್ಯ ರಾಜಧಾನಿ ಗ್ಯಾಂಗ್ಟಾಕ್‌ನ ಪಾಲ್ಜೋರ್ ಕ್ರೀಡಾಂಗಣದಲ್ಲಿ ನಡೆಯಲಿದೆ.

ಐದು ವರ್ಷಗಳ ಹಿಂದೆ ನಡೆದಂತೆ ಜೂನ್ 9 ರಂದು ಪಾಲ್ಜೋರ್ ಸ್ಟೇಡಿಯಂನಲ್ಲಿ ನೂತನ ಸಚಿವ ಸಂಪುಟದ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ತಮಾಂಗ್ ಅವರು ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ.

Advertisement

Advertisement

Also Read

ರಾಜ್ಯಪಾಲರನ್ನು ಭೇಟಿಯಾದ ಪ್ರೇಮ್ ಸಿಂಗ್ ತಮಾಂಗ್, ನೂತನ ಸರ್ಕಾರ ರಚನೆಗೆ ಹಕ್ಕು ಮಂಡನೆ

ಸಿಕ್ಕಿಂನ ವಿವಿಧ ಭಾಗಗಳಿಂದ ಜನರು ಮತ್ತು ಎಸ್‌ಕೆಎಂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮಕ್ಕೆ ಆಗಮಿಸುವ ನಿರೀಕ್ಷೆಯಿದೆ ಎಂದು ಅವರು ಹೇಳಿದ್ದಾರೆ

ವಿಧಾನಸಭೆ ಚುನಾವಣೆಯಲ್ಲಿ ಮತ್ತು ಸಿಕ್ಕಿಂನ ಏಕೈಕ ಲೋಕಸಭಾ ಕ್ಷೇತ್ರದಲ್ಲಿ ಆಡಳಿತಾರೂಢ ಎಸ್‌ಕೆಎಂ ಗೆಲ್ಲಿಸಿದ್ದಕ್ಕಾಗಿ ಮತ್ತು ಪಕ್ಷದ ಮೇಲೆ ಮತ್ತೊಮ್ಮೆ ನಂಬಿಕೆ ಇಟ್ಟಿದ್ದಕ್ಕಾಗಿ ತಮಾಂಗ್ ಅವರು ಜನರಿಗೆ ಧನ್ಯವಾದ ಅರ್ಪಿಸಿದರು.

ಲೋಕಸಭೆ ಚುನಾವಣೆಯೊಂದಿಗೆ ನಡೆದ ಸಿಕ್ಕಿಂ ವಿಧಾನಸಭೆ ಚುನಾವಣೆಯಲ್ಲಿ 32 ಸ್ಥಾನಗಳ ಪೈಕಿ 31 ಸ್ಥಾನಗಳನ್ನು ಎಸ್‌ಕೆಎಂ ಗೆದ್ದುಕೊಂಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments