ಕಾರ್ತಿ ಚಿದಂಬರಂ 
ದೇಶ

ಚೀನಾ ವೀಸಾ ಹಗರಣ: ಕಾರ್ತಿ ಚಿದಂಬರಂಗೆ ದೆಹಲಿ ನ್ಯಾಯಾಲಯ ಜಾಮೀನು ಮಂಜೂರು

ಚೀನಿ ಪ್ರಜೆಗಳಿಗೆ ವೀಸಾ ಕೊಡಿಸಿದ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಕಾರ್ತಿ ಚಿದಂಬರಂ ಅವರಿಗೆ ದೆಹಲಿ ನ್ಯಾಯಾಲಯ ಗುರುವಾರ ಜಾಮೀನು ಮಂಜೂರು ಮಾಡಿದೆ. ಇ.ಡಿ ಮತ್ತು ಸಿಬಿಐ ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು ಕಾರ್ತಿ ಚಿದಂಬರಂ ಅವರು ನ್ಯಾಯಾಲಯಕ್ಕೆ ಹಾಜರಾದ ನಂತರ ಅವರಿಗೆ ರಿಲೀಫ್ ನೀಡಿದ್ದಾರೆ.

ನವದೆಹಲಿ: ಚೀನಿ ಪ್ರಜೆಗಳಿಗೆ ವೀಸಾ ಕೊಡಿಸಿದ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಕಾರ್ತಿ ಚಿದಂಬರಂ ಅವರಿಗೆ ದೆಹಲಿ ನ್ಯಾಯಾಲಯ ಗುರುವಾರ ಜಾಮೀನು ಮಂಜೂರು ಮಾಡಿದೆ.

ಇ.ಡಿ ಮತ್ತು ಸಿಬಿಐ ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು ಕಾರ್ತಿ ಚಿದಂಬರಂ ಅವರು ನ್ಯಾಯಾಲಯಕ್ಕೆ ಹಾಜರಾದ ನಂತರ ಅವರಿಗೆ ರಿಲೀಫ್ ನೀಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ) ಸಲ್ಲಿಸಿದ್ದ ದೋಷಾರೋಪ ಪಟ್ಟಿಯನ್ನು (ಚಾರ್ಜ್ ಶೀಟ್) ಪರಿಗಣನೆಗೆ ತೆಗೆದುಕೊಂಡ ನ್ಯಾಯಾಲಯ ಆರೋಪಿ ವಿರುದ್ಧ ಸಮನ್ಸ್ ಜಾರಿ ಮಾಡಿತ್ತು.

ನ್ಯಾಯಾಧೀಶರು ಒಂದು ಲಕ್ಷ ರೂಪಾಯಿಗಳ ವೈಯಕ್ತಿಕ ಬಾಂಡ್ ಮತ್ತು ಅಷ್ಟೇ ಮೊತ್ತದ ಶ್ಯೂರಿಟಿ ಮೇಲೆ ಜಾಮೀನು ಮಂಜೂರು ಮಾಡಿದ್ದಾರೆ.

ಕಾರ್ತಿ ಚಿದಂಬರಂ ಅವರು ತಮ್ಮ ತಂದೆ ಪಿ ಚಿದಂಬರಂ ಅವರು ಕೇಂದ್ರ ಗೃಹ ಸಚಿವರಾಗಿದ್ದ ಅವಧಿಯಲ್ಲಿ (2011) 263 ಚೀನಿ ಪ್ರಜೆಗಳಿಗೆ ವೀಸಾ ಕೊಡಿಸಲು 50 ಲಕ್ಷ ರೂಪಾಯಿ ಲಂಚ ಪಡೆದಿದ್ದರು ಎಂಬ ಆರೋಪ ಸಂಬಂಧ ಕಾರ್ತಿ ಮತ್ತು ಇತರರ ವಿರುದ್ಧ ಇ.ಡಿ ಹಣ ಅಕ್ರಮ ವರ್ಗಾವಣೆ ಪ್ರಕರಣ (ಪಿಎಂಎಲ್ಎ) ದಾಖಲಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಪ್ರವಾಹದಿಂದ ಬೆಳೆಹಾನಿ: ಪ್ರತಿ ಹೆಕ್ಟೇರ್ ಗೆ ಹೆಚ್ಚುವರಿ 8,500 ರೂ ಪರಿಹಾರ- ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಮಳೆ ಹಾನಿಯಿಂದ 52 ಮಂದಿ ಸಾವು; ವಾರಸುದಾರರಿಗೆ ಪರಿಹಾರ ವಿತರಣೆ: ಸಿಎಂ ಸಿದ್ದರಾಮಯ್ಯ

Gaza peace deal: ಹಮಾಸ್‌ಗೆ ಮೂರ್ನಾಲ್ಕು ದಿನಗಳ ಗಡುವು, ನಕಾರ ಮಾಡಿದ್ರೆ 'ನರಕ'ಕ್ಕೆ ದಾರಿ ತೋರಿಸ್ತಿವಿ! ಟ್ರಂಪ್ ಗುಡುಗು

Rahul Security: ರಾಹುಲ್, ಸೋನಿಯಾ, ಪ್ರಿಯಾಂಕಾ ಜೀವಕ್ಕೆ ಅಪಾಯ; ಭದ್ರತೆ ಹೆಚ್ಚಳಕ್ಕೆ ಕಾಂಗ್ರೆಸ್ ಒತ್ತಾಯ

ನಾನು ಜೋಕರ್ ರೀತಿ ನಿಂತಿದ್ದೆ: ಏಷ್ಯಾಕಪ್ ಟ್ರೋಫಿ ಖಾಸಗಿ ವ್ಯಕ್ತಿಯ ಆಸ್ತಿಯಲ್ಲ; BCCI ಉಪಾಧ್ಯಕ್ಷರ ಪ್ರಶ್ನೆಗೆ ನಖ್ವಿ ತತ್ತರ!

SCROLL FOR NEXT