ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ 
ದೇಶ

ದೆಹಲಿ: ಕೇಜ್ರಿವಾಲ್ ನಿವಾಸದಲ್ಲಿ AAP ಶಾಸಕರಿಂದ 'ತುರ್ತು' ಸಭೆ; ಹೊಸ ಮುಖ್ಯಮಂತ್ರಿ ಘೋಷಣೆ ಸಾಧ್ಯತೆ

ಆಡಳಿತರೂಢ ಆಮ್ ಆದ್ಮಿ ಪಕ್ಷ ಗುರುವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದಲ್ಲಿ ಪಕ್ಷದ ಎಲ್ಲಾ ಶಾಸಕರ 'ತುರ್ತು' ಸಭೆ ಕರೆದಿದೆ.

ನವದೆಹಲಿ: ಆಡಳಿತರೂಢ ಆಮ್ ಆದ್ಮಿ ಪಕ್ಷ ಗುರುವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದಲ್ಲಿ ಪಕ್ಷದ ಎಲ್ಲಾ ಶಾಸಕರ 'ತುರ್ತು' ಸಭೆ ಕರೆದಿದೆ.

ಮೂಲಗಳ ಪ್ರಕಾರ, ಮುಂಬರುವ ದಿನಗಳಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳುವ ಸಾಧ್ಯದೆ ಇದೆ. ಅರವಿಂದ್ ಕೇಜ್ರಿವಾಲ್ ಜೈಲಿನಲ್ಲಿರುವಾಗ, ಪಕ್ಷದ ಭವಿಷ್ಯದ ಹಿತದೃಷ್ಟಿಯಿಂದ ಹೊಸ ಮುಖ್ಯಮಂತ್ರಿಯನ್ನು ಘೋಷಿಸಬಹುದು.

ಜನವರಿ 2025 ರ ಅಂತ್ಯದ ವೇಳೆಗೆ ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಎಎಪಿ ಈ ಕ್ರಮಕ್ಕೆ ಮುಂದಾಗಿದೆ ಎನ್ನಲಾಗಿದೆ.

ದೆಹಲಿಯಲ್ಲಿ ಮೈತ್ರಿ ಮಾಡಿಕೊಂಡರೂ ಎಲ್ಲಾ ಏಳು ಲೋಕಸಭಾ ಸ್ಥಾನಗಳನ್ನು ಕಳೆದುಕೊಂಡಿರುವ ಎಎಪಿ ಮತ್ತು ಕಾಂಗ್ರೆಸ್ ತೀವ್ರ ಹಿನ್ನಡೆ ಅನುಭವಿಸಿದೆ. ಇದರ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ಎಎಪಿ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನಡೆಸಿದ ಬಿರುಸಿನ ಚುನಾವಣಾ ಪ್ರಚಾರದ ನಂತರವೂ ನಾಲ್ಕು ಸ್ಥಾನಗಳಲ್ಲಿ ಸ್ಪರ್ಧಿಸಿದ್ದ ಎಎಪಿ ಕಠಿಣ ಹೋರಾಟ ಮಾಡುವಲ್ಲಿ ವಿಫಲವಾಗಿದೆ.

ಆದರೆ, ಈ ಫಲಿತಾಂಶ ಬಿಜೆಪಿಗೆ ಸಂದೇಶವನ್ನೂ ನೀಡಿದೆ. ನಗರ ಸ್ಥಾನಗಳಲ್ಲಿ ಪಕ್ಷವು ಮುನ್ನಡೆದಿದ್ದರೂ, ಎಲ್ಲಾ ಏಳರಲ್ಲಿ ವಿಜಯದ ಅಂತರವು ಗಮನಾರ್ಹವಾಗಿ ಕಡಿಮೆಯಾಗಿದೆ. ಇದು ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚು ಸ್ಪರ್ಧಾತ್ಮಕ ರಾಜಕೀಯ ಚಿತ್ರಣವನ್ನು ಸೂಚಿಸುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT