ಬಿಹಾರ ಸಿಎಂ ನಿತೀಶ್ ಕುಮಾರ್- ಡಿಸಿಎಂ ಸಾಮ್ರಾಟ್ ಚೌಧರಿ ANI
ದೇಶ

2025 ರ ಬಿಹಾರ ವಿಧಾನಸಭಾ ಚುನಾವಣೆ ನಿತೀಶ್ ನೇತೃತ್ವದಲ್ಲೇ: ಬಿಜೆಪಿ ಮುಖ್ಯಸ್ಥ

ಬಿಹಾರದಲ್ಲಿ ಮುಂದಿನ ವರ್ಷ ವಿಧಾನಸಭಾ ಚುನಾವಣೆ ನಡೆಯಲಿದ್ದು, ಈ ಚುನಾವಣೆಯನ್ನು ನಿತೀಶ್ ಕುಮಾರ್ ನೇತೃತ್ವದಲ್ಲೇ ಎದುರಿಸುವುದಾಗಿ ಬಿಹಾರ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಹೇಳಿದ್ದಾರೆ.

ಪಾಟ್ನ: ಬಿಹಾರದಲ್ಲಿ ಮುಂದಿನ ವರ್ಷ ವಿಧಾನಸಭಾ ಚುನಾವಣೆ ನಡೆಯಲಿದ್ದು, ಈ ಚುನಾವಣೆಯನ್ನು ನಿತೀಶ್ ಕುಮಾರ್ ನೇತೃತ್ವದಲ್ಲೇ ಎದುರಿಸುವುದಾಗಿ ಬಿಹಾರ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಹೇಳಿದ್ದಾರೆ.

ಲೋಕಸಭಾ ಚುನಾವಣೆ ಫಲಿತಾಂಶದಲ್ಲಿ ಎನ್ ಡಿಎ ಭಾಗವಾಗಿರುವ ಜನತಾದಳ (ಯುನೈಟೆಡ್) 16 ಸ್ಥಾನಗಳಲ್ಲಿ ಸ್ಪರ್ಧಿಸಿ 12 ರಲ್ಲಿ ಗೆಲುವು ಸಾಧಿಸಿದೆ. ಕೇಂದ್ರದಲ್ಲಿ ಬಿಜೆಪಿ ಸ್ವತಂತ್ರವಾಗಿ ಸರ್ಕಾರ ರಚನೆ ಮಾಡುವಷ್ಟು ಸಂಖ್ಯೆಯನ್ನು ಪಡೆದಿಲ್ಲ. ದೇಶದಲ್ಲಿನ ಇಂತಹ ಪರಿಸ್ಥಿತಿಯಲ್ಲಿ ಎನ್ ಡಿಎ ಸರ್ಕಾರ ರಚನೆಗೆ ನಿತೀಶ್ ಕುಮಾರ್ ಬೆಂಬಲ ಮುಖ್ಯವಾಗಿದ್ದು, ಬಿಹಾರದಲ್ಲಿ ನಿತೀಶ್ ಕುಮಾರ್ ನಾಯಕತ್ವ ನಿರ್ಣಾಯಕವಾಗಿದೆ.

ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಸಾಮ್ರಾಟ್ ಚೌಧರಿ, ಮುಂಬರುವ ವಿಧಾನಸಭಾ ಚುನಾವಣೆಯನ್ನು ನಿತೀಶ್ ನೇತೃತ್ವದಲ್ಲೇ ಎದುರಿಸುವುದಾಗಿ ಬಿಹಾರ ಡಿಸಿಎಂ ಕೂಡ ಆಗಿರುವ ಸಾಮ್ರಾಟ್ ಚೌಧರಿ ಹೇಳಿದ್ದಾರೆ.

ನಿತೀಶ್ ಕುಮಾರ್ 2000 ರಲ್ಲಿ ಮೊದಲ ಬಾರಿಗೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್